ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬೇಕಿದೆ. ಹೀಗಾಗಿ, ಈ ಪ್ರಕರಣದ ತುರ್ತು ವಿಚಾರಣೆ ನಡೆಸಿ ಎಂದು ವಿದ್ಯಾರ್ಥಿನಿಯರ ಪರ ವಕೀಲ ಸಂಜಯ್ ಹೆಗ್ಡೆ ಮನವಿ ಮಾಡಿದ್ದಾದರೂ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ಹೌದು, ಕಾಜೇಜು ತರಗತಿಗಳಲ್ಲಿ ಹಿಜಾಬ್ ಧರಿಸುವ ವಿಚಾರವಾಗಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರು ಮೇಲ್ಮನವಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಹಿಜಾಬ್ ಕುರಿತಾದ ಮೇಲ್ಮನವಿ ಅರ್ಜಿಯನ್ನು ಹೋಳಿ ಹಬ್ಬದ ನಂತರ ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮಾತನಾಡಿ, “ಇತರರೂ ಅರ್ಜಿ ಉಲ್ಲೇಖಿಸಿದ್ದಾರೆ. ನೋಡೋಣ. ರಜೆಯ ನಂತರ ನಾವು ಪಟ್ಟಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಗುರುವಾರದಿಂದ ಮೂರು ದಿನಗಳವರೆಗೆ ಹೋಳಿಗಾಗಿ ಸುಪ್ರೀಂ ಕೋರ್ಟ್ ರಜೆ ಇರುತ್ತದೆ ಮತ್ತು ಮಾರ್ಚ್ 21 ರಂದು ಮತ್ತೆ ತೆರೆಯುತ್ತದೆ.
ಕರ್ನಾಟಕ ಹೈಕೋರ್ಟ್ ತನ್ನ 129 ಪುಟಗಳ ತೀರ್ಪನ್ನು ನೀಡಿದ ಕೆಲವೇ ಗಂಟೆಗಳ ನಂತರ, ರಾಜ್ಯದ ಮುಸ್ಲಿಂ ವಿದ್ಯಾರ್ಥಿಯೊಬ್ಬರು ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದರು, “ಹಿಜಾಬ್ ಧರಿಸುವ ಹಕ್ಕು ‘ಅಭಿವ್ಯಕ್ತಿ’ಯ ವ್ಯಾಪ್ತಿಯಲ್ಲಿ ಬರುತ್ತದೆ ಎಂಬುದನ್ನು ಗಮನಿಸಲು ವಿಫಲವಾಗಿದೆ ಎಂದು ಹೇಳಿದರು.
ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯವು ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಎಂದು ತಿಳಿಸಿದ ಕರ್ನಾಟಕ ಹೈಕೋರ್ಟ್ನ ಪೂರ್ಣ ಪೀಠವು ಮಂಗಳವಾರ ಮುಸ್ಲಿಂ ಹುಡುಗಿಯರು ಸಲ್ಲಿಸಿದ ಅರ್ಜಿಗಳನ್ನು ವಜಾಗೊಳಿಸಿದೆ.