
ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂರಜ್ ರೇವಣ್ಣರನ್ನ ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದಾಗ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದರು.ನಂತರ ಪ್ರಕರಣದ ಬಗ್ಗೆ ತನಿಖೆ ನಡೆಸಲು ಆರೋಪಿ ಸೂರಜ್ ರೇವಣ್ಣನನ್ನು ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್, ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್ ರೇವಣ್ಣನನ್ನು ಜುಲೈ 3ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು.ಇದೀಗ ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಸೂರಜ್ ರೇವಣ್ಣರನ್ನು ಕೋರ್ಟ್ಗೆ ಹಾಜರುಪಡಿಸಿದ್ದರು. ಇದೀಗ ಕೋರ್ಟ್ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ