ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ನೇಮಕವಾಗಿದ್ದ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಆಗಬೇಕು ಅನ್ನೋದು ಬಿಎಸ್‌ವೈ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಆಗಿತ್ತು. ಆದರೆ ಸಿಎಂ ಬೊಮ್ಮಾಯಿ ಸಿಎಂ ಆದಮೇಲು ಅದು ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಮಾಡೋಕೆ ಸಾಧ್ಯವಾಗಿರಲಿಲ್ಲ. ಆದರೆ ಅದಕ್ಕೆ ಇಂದು ಮುಹೂರ್ತ ಫಿಕ್ಸ್ ಆದಂತೆ ಕಾಣುತ್ತಿದೆ. ಇದಕ್ಕೆ ಪೂರಕವಾದಂತೆ ರಾಜ್ಯ ಸರ್ಕಾರ ಈಗಿರುವ ಅಧ್ಯಕ್ಷ, ಉಪಾಧ್ಯಕ್ಷರ ನಾಮನಿರ್ದೇಶನವನ್ನು ರದ್ದು ಪಡಿಸಿ ಆದೇಶ ಹೊರಡಿಸಿದೆ.
ಹಿರಿಯ ಸಚಿವ ಆರ್. ಅಶೋಕ್, ಮಾಜಿ ಸಚಿವ ಲಕ್ಷ್ಮಣ ಸವದಿ ಪಾರ್ಟಿಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಒಳಗೊಂಡ ಮೂವರ ಸಮಿತಿಯನ್ನು ನಿಗಮ ಮಂಡಳಿ ಆಯ್ಕೆ ಪ್ರಕ್ರಿಯೆಗೆ ರಚಿಸಲಾಗಿತ್ತು. ಕಳೆದ ವಾರವೇ ಸಿಎಂ ಬೊಮ್ಮಾಯಿಗೆ ಪಟ್ಟಿ ಸಲ್ಲಿಸಿತ್ತಾದರೂ, ಸಿಎಂ ಬೊಮ್ಮಾಯಿ ನಿನ್ನೆ ಅಂತಿಮವಾಗಿ ಬೊಮ್ಮಾಯಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಮಾಹಿತಿ ಪ್ರಕಾರ ಒಟ್ಟು 47 ನಿಗಮಗಳ ಅಧ್ಯಕ್ಷರ, ನಿರ್ದೇಶಕರನ್ನು ಕೈಬಿಟ್ಟು, ಹೊಸಬರಿಗೆ ಅವಕಾಶ ನೀಡಲಾಗಿದ್ದು, ಬಹುತೇಕರು ಬಿಎಸ್‌ವೈ ಅವರ ಆಪ್ತರೇ ಆಗಿದ್ದಾರೆ.
ಮುಖ್ಯವಾಗಿ, ಕರ್ನಾಟಕ ಚಲನವಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ರಜ್ನ ಪ್ರಭ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿಯ ನಟಿ ಶೃತಿ ಅವರನ್ನು ಕೈಬಿಲಾಗಿದೆ.







