• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Shivakumar: ಸುರ್ಜೇವಾಲ ಅವರು ಅಧಿಕಾರಿಗಳ ಸಭೆ ಮಾಡಿಲ್ಲ, ಎಲ್ಲವೂ ಸುಳ್ಳು: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
July 27, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

“ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲ ಅವರು ಯಾವ ಅಧಿಕಾರಿಗಳನ್ನೂ ಭೇಟಿ ಮಾಡಿಲ್ಲ, ಮಾತನಾಡಿಲ್ಲ. ಉದಾಹರಣೆಗೆ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಜ್ಯದವರೇ ಆದರೂ ಇದುವರೆಗೂ ಯಾವ ಅಧಿಕಾರಿಗೂ ಫೋನ್ ಕರೆ ಕೂಡ ಮಾಡಿಲ್ಲ, ಮಾಡುವುದೂ ಇಲ್ಲ. ಅಧಿಕಾರಿಗಳ ಸಭೆ ಮಾಡಿದ್ದಾರೆ ಎಂಬುದು ಸುಳ್ಳು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ADVERTISEMENT

ಅರಸೀಕೆರೆಯ ಜೇನುಕಲ್ಲು ಸಿದ್ದೇಶ್ವರಬೆಟ್ಟ ಹಾಗೂ ಕೋಡಿ ಮಠದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶನಿವಾರ ಅವರು ಪ್ರತಿಕ್ರಿಯೆ ನೀಡಿದರು.

ಸುರ್ಜೇವಾಲ ಅವರು ಅಧಿಕಾರಿಗಳ ಸಭೆ ನಡೆಸಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ, “ಸರ್ಕಾರ ನಮ್ಮದೇ ಇದೆ. ಏನಾದರೂ ಹೇಳಬೇಕೆಂದರೆ ಅವರು ನಮಗೆ ಹೇಳುತ್ತಾರೆ. ಏನಾದರೂ ತಪ್ಪುಗಳಿದ್ದರೆ ನಮಗೆ ತಿಳಿಸುತ್ತಾರೆ, ನಾವು ತಿದ್ದಿಕೊಳ್ಳುತ್ತೇವೆ. ಇದನ್ನು ಹೊರತಾಗಿ ಅಧಿಕಾರಿಗಳ ಭೇಟಿ ಮಾಡಿದ್ದಾರೆ ಎಂಬುದು ಸುಳ್ಳು” ಎಂದರು.

ದೊಡ್ಡವರ ಬಗ್ಗೆ ಮಾತಾಡುವುದಿಲ್ಲ

ಅಧಿಕಾರಿಗಳ ಸಭೆ ಕಾನೂನುಬಾಹಿರ ಎನ್ನುವ ಕೆ.ಎನ್.ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ದೊಡ್ಡವರ ಬಗ್ಗೆ ನಾನು ಮಾತನಾಡುವುದಿಲ್ಲ. ಇದರ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರು ಉತ್ತರ ನೀಡಿದ್ದಾರಲ್ಲ. ಅವರು ಉತ್ತರ ನೀಡಿದ ಮೇಲೆ ನಾನೇನು ಉತ್ತರ ನೀಡುವುದಿದೆ. ಮುಖ್ಯಮಂತ್ರಿಯವರಿಗೆ ನನಗಿಂತ ಹೆಚ್ಚು ಮಾಹಿತಿಯಿದೆ” ಎಂದು ಹೇಳಿದರು.

ಯೂರಿಯಾ ಕೊರತೆ ಬಗ್ಗೆ ಕೇಳಿದಾಗ, “ಯೂರಿಯಾವನ್ನು ಸರಬರಾಜು ಮಾಡುವುದು ಕೇಂದ್ರ ಸರ್ಕಾರ. ನಮ್ಮ ರೈತರು ಈ ಭಾರಿ ಹೆಚ್ಚಿನ ಬಿತ್ತನೆ ಮಾಡಿದ್ದಾರೆ‌. ಹೆಚ್ಚಿನ ಯೂರಿಯಾಗೆ ಈಗಾಗಲೇ ಒತ್ತಾಯವನ್ನು ಮಾಡಿದ್ದೇವೆ. ರೈತರು ತಾಳ್ಮೆಯಿಂದಿರಲಿ. ಮುಖ್ಯಮಂತ್ರಿಯವರು ಹಾಗೂ ಕೃಷಿ ಸಚಿವರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದರು.

ಭಕ್ತ, ಭಗವಂತನಿಗೆ ಬಿಟ್ಟ ವಿಚಾರ

ಸಿದ್ದೇಶ್ವರನ ಬಳಿ ವೈಯಕ್ತಿಕವಾಗಿ ಏನಾದರೂ ಬೇಡಿಕೊಂಡಿರಾ ಎಂದು ಕೇಳಿದಾಗ, “ಅದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ ಎಂದು” ಉತ್ತರಿಸಿದರು.

“ಜೇನುಕಲ್ಲು ಸಿದ್ದೇಶ್ವರನಿಗೆ ನಮನ ಸಲ್ಲಿಸಿ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾರಂಭ ಮಾಡಿದ್ದೇವೆ. ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ಅಭಿವೃದ್ಧಿ ಕೆಲಸಗಳು ಆಗುತ್ತವೆ. ನನಗೂ ದೇವರ ದರ್ಶನ ಭಾಗ್ಯ ಸಿಕ್ಕಿದೆ. ಮತ್ತೊಮ್ಮೆ ಇಲ್ಲಿಗೆ ಭೇಟಿ ನೀಡುತ್ತೇನೆ” ಎಂದರು.

“ನಮ್ಮ ಧರ್ಮ, ದೇವರು, ಸಂಸ್ಕೃತಿ ಆಚಾರ, ವಿಚಾರಗಳ ಬಗ್ಗೆ ನಂಬಿಕೆ ಇರುವ ವ್ಯಕ್ತಿ ನಾನು. ಯಾವುದೇ ಧರ್ಮವಾಗಿರಲಿ ಅದಕ್ಕೆ ಆದಂತಹ ಶಕ್ತಿ ಇದೆ. ಕೆಲವರು ನಂಬಬಹುದು ಕೆಲವರು ನಂಬದೇ ಇರಬಹುದು ಆದರೆ ನನಗೆ ನಂಬಿಕೆಯಿದೆ. ದೇವಸ್ಥಾನವನ್ನು ಚೆನ್ನಾಗಿ ಅಭಿವೃದ್ಧಿ ಮಾಡಲಾಗಿದೆ.‌ ಸಿದ್ದೇಶ್ವರ ರಾಜ್ಯದ ಜನರಿಗೆ ಸುಖ, ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು‌.

“ಇಷ್ಟು ದೂರ ಬಂದಿದ್ದೇನೆ. ಬಹಳ ವರ್ಷಗಳ ನಂತರ ಭೇಟಿ ನೀಡಿದ್ದೇನೆ. ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಯವರು ಇದ್ದಾರೆ ಎಂದು ತಿಳಿದು, ಅವರನ್ನು ಭೇಟಿ ಮಾಡಲು ಬಂದೆ” ಎಂದು ಹೇಳಿದರು.

Tags: D K Shivakumard. k shivakumar falls from cycled. k. shivakumarD.K. ShivakumarDCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cycledk shivakumar cycle falldk shivakumar cycle ridedk shivakumar cycle slipdk shivakumar cyclingdk shivakumar kodi muttdk shivakumar latestdk shivakumar latest newsdk shivakumar newsdk shivakumar speechdk shivakumar today newsdk shivakumar unhurtdk shivakumar video
Previous Post

DCM DK Shivakumar: ಕನಕಪುರ, ವರುಣಾಗಿಂತ ಹೆಚ್ಚು ಕೆಲಸವನ್ನು ಶಿವಲಿಂಗೇಗೌಡರು ಅರಸೀಕರೆಯಲ್ಲಿ ಮಾಡಿಸುತ್ತಿದ್ದಾರೆ:

Next Post

ಕೃತಕ ಬುದ್ಧಿಮತ್ತೆ (AI ) ಎರಡು ಅಲಗಿನ ಕತ್ತಿ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಕೃತಕ ಬುದ್ಧಿಮತ್ತೆ (AI ) ಎರಡು ಅಲಗಿನ ಕತ್ತಿ

ಕೃತಕ ಬುದ್ಧಿಮತ್ತೆ (AI ) ಎರಡು ಅಲಗಿನ ಕತ್ತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada