ಬೆಂಗಳೂರು: ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯರೇ ರಾಜ್ಯದ ಸಿಎಂ ಆಗಿ ಇರಲಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ. ಎಂಬಿ ಪಾಟೀಲ್ ನೀಡಿರುವ ಈ ಹೇಳಿಕೆಯು ಡಿಕೆಶಿ ಹಾಗೂ ಸಿದ್ದರಾಮಯ್ಯ ಎರಡೂ ಬಣಗಳ ನಡುವೆ ದೊಡ್ಡ ಮಟ್ಟದಲ್ಲಿ ಪರ ವಿರೋಧದ ಚರ್ಚೆಯನ್ನು ಹುಟ್ಟು ಹಾಕಿದೆ.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಡಿಕೆಶಿ ಹಾಗೂ ಸಿದ್ದರಾಮಯ್ಯ ಬಣದ ನಾಯಕರಿಗೆ ಖಡಕ್ ಎಚ್ಚರಿಕೆ ರವಾನಿಸಿದೆ.
ರಾಜ್ಯ ಕಾಂಗ್ರೆಸ್ ನಾಯಕರಿಗೆ ಈ ಸಂಬಂಧ ಸೂಚನೆ ನೀಡಿರುವ ಸುರ್ಜೆವಾಲಾ, ಈ ರೀತಿಯ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ. ಹೀಗಾಗಿ ಯಾರು ಕೂಡ ಅನಗತ್ಯ ಹೇಳಿಕೆಗಳನ್ನು ನೀಡಬಾರದು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.