ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ಕೇಂದ್ರ ಸರ್ಕಾರದ ವಿರುದ್ಧ ಮತಗಳುವು ಆರೋಪ ಮಾಡಿರುವ ಬೆನ್ನಲ್ಲೇ, ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ EVM ಬದಲು ಬ್ಯಾಲೆಟ್ ಪೇಪರ್ (Ballet paper) ಬಳಕೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ (Congress) ಮುಂದಾಗಿದೆ. ಆ ಮೂಲಕ ಪ್ರಜಾಪ್ರಭುತ್ವದ ಮರುಸ್ಥಾಪನೆಗೆ ಒಂದು ದಿಟ್ಟ ಹೆಜ್ಜೆ ಇದು ಎಂದು ಕಾಂಗ್ರೆಸ್ ಬಣ್ಣಿಸಿದೆ.

ರಾಜ್ಯ ಸರ್ಕಾರದ ಈ ಕ್ರಮವನ್ನು, ಕರ್ನಾಟಕ ಕಾಂಗ್ರೆಸ್ ರಣದೀಪ್ ಸಿಂಗ್ ಸುರ್ಜೆವಾಲ ಸ್ವಾಗತಿಸಿದ್ದಾರೆ. ಬ್ಯಾಲೆಟ್ ಪೇಪರ್ ಮತ್ತು ಪ್ರತ್ಯೇಕ ಮತದಾರರ ಪಟ್ಟಿಯಿಂದ ಹೊಸ ಭರವಸೆ ಮೂಡಲಿದೆ ಎಂದಿದ್ದಾರೆ ಬ್ಯಾಲೆಟ್ ಪೇಪರ್ ಮರುಬಳಕೆ, ಇವಿಎಂ ಮೇಲಿನ ಅನುಮಾನಗಳನ್ನು ಹೋಗಲಾಡಿಸಿ, ಮತದಾನದ ಪಾರದರ್ಶಕತೆಯನ್ನು ಹೆಚ್ಚಿಸಲು ಕೈಗೊಂಡ ದಿಟ್ಟ ನಿರ್ಧಾರ ಎಂದಿದ್ದಾರೆ.

ಸ್ಥಳೀಯ ಚುನಾವಣೆಗಳಿಗೆ ನಿಖರ ಮತ್ತು ಪರಿಪೂರ್ಣ ಮತದಾರರ ಪಟ್ಟಿ ಸಿದ್ಧಪಡಿಸುವ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಸರ್ಕಾರ ಪ್ರಜಾಪ್ರಭುತ್ವದ ಮೂಲಭೂತ ಆಶಯಗಳನ್ನು ಬಲಪಡಿಸುವ ಮೂಲಕ ದೇಶಕ್ಕೆ ಮಾದರಿಯಾಗುವ ಹೆಜ್ಜೆ ಇಟ್ಟಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪತ್ರಗಳ ಮೂಲಕ ನಡೆಸಲು ಮುಂದಾಗಿರುವ ನಿರ್ಧಾರವನ್ನು ನಾನು ಮನಃಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ನಿರ್ಧಾರವು ನಮ್ಮ ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವ ಮತ್ತು ಮತದಾರರ ನಂಬಿಕೆಯನ್ನು ಮರುಸ್ಥಾಪಿಸುವ ಒಂದು ದಿಟ್ಟ ಹೆಜ್ಜೆಯಾಗಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.











