ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲ ಶಂಕಿತ ಉಗ್ರನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಭಾನುವಾರ ರಾತ್ರಿ 7 ಗಂಟೆಗೆ ತಿಲಕನಗರದ ಮನೆಯೊಂದರಲ್ಲಿ ಅಡಗಿದ್ದ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಸ್ವಿಗ್ಗಿ, ಜೊಮೊಟೊ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅಖ್ತರ್ ಹುಸೇನ್ ಕಳೆದ ಒಂದು ವರ್ಷದಿಂದ ಉಗ್ರರ ಸಂಪರ್ಕ ಹೊಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಲ್ ಖೈದಾ ಜೊತೆ ಸಂಪರ್ಕ ಹೊಂದಿದ್ದ ಎಂದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಅಖ್ತರ್ ನ ಚಲನವಲನಗಳನ್ನು ಕಳೆದ 15 ದಿನಗಳಿಂದ ಪೊಲೀಸರು ನಿಗಾ ವಹಿಸಿದ್ದು, ಈತ ಫೇಸ್ ಬುಕ್ ಮತ್ತು ಟೆಲಿಗ್ರಾಂ ಮೂಲಕ ಸಂಪರ್ಕ ಹೊಂದಿದ್ದ ಎಂದು ತಿಳಿದು ಬಂದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.