• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸದನದಿಂದ ಶಾಸಕರ ಅಮಾನತು; ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿ

Any Mind by Any Mind
July 19, 2023
in ರಾಜಕೀಯ
0
ʻಯುಪಿಯಲ್ಲಿ ರಾಜಕೀಯ ಮಾಡೋದಕ್ಕೂ, ಕರ್ನಾಟಕದ ರಾಜಕೀಯಕ್ಕೂ ವ್ಯತ್ಯಾಸವಿದೆʼ: ಹೆಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಬಿಜೆಪಿ ಜೊತೆ ಪ್ರತಿಭಟನೆಗೆ ಕುಳಿತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು.

ಪ್ರತಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟು, ಇವತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಸರ್ಕಾರದ ‌ಬಲ್ಡೋಜ್ ನೀತಿ ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪೀಠದಲ್ಲಿ ದಲಿತರು ಕುಳಿತುಕೊಂಡಿದ್ದಾರೆ ಅನ್ನುವ ಕಾಂಗ್ರೆಸ್ ಆರೋಪದ ಬಗ್ಗೆ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು: ಇದು ಕ್ಷುಲ್ಲಕ, ‌ಕೀಳು ಮಟ್ಟದ ಅಭಿರುಚಿ. ದಲಿತರ ಅನುಕುಂಪ ಪಡೆಯಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಆ ಪೀಠದಲ್ಲಿ ‌ಕುಳಿತಿರೋರು ಉಪ ಸಭಾಧ್ಯಕ್ಷರು. ಆ ವಿಷಯವನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು ಎಂದರು.

ಕಳೆದ ಎರಡು ದಿನಗಳ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಮಹಾ ಘಟಬಂಧನ್ ಸಭೆಗೆ ಬಂದಿದ್ದ ಹೊರ ರಾಜ್ಯಗಳ ರಾಜಕಾರಣಿಗಳಿಗೆ ಶಿಷ್ಟಾಚಾರ ಬದಿಗೊತ್ತಿ, ರಾಜ್ಯದ ಘನತೆಯನ್ನು ಹತ್ತಿಕ್ಕಿ ಐಎಎಸ್ ಚಾಕರಿಗೆ ನಿಯೋಜಿಸಿದ್ದು ಸರಿಯಲ್ಲ. ರಾಜ್ಯ ಸರ್ಕಾರ ಅಧಿಕಾರ ದುರ್ಬಳಿಕೆ ಮಾಡಿಕೊಂಡಿದೆ. ಐಎಎಸ್ ಅಧಿಕಾರಿಗಳನ್ನು ರಾಜಕೀಯ ಸಭೆಗೆ ಬಳಸಿಕೊಂಡಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳನ್ನ ದುರ್ಬಳಕೆ ‌ಮಾಡಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸದನದಲ್ಲಿ ಇವತ್ತು ಈ ವಿಚಾರವಾಗಿ ಜೆಡಿಎಸ್, ಬಿಜೆಪಿ ಶಾಸಕರು ಸೇರಿ ಚರ್ಚೆ ನಡೆಸಲು ಮುಂದಾದೆವು. ಪ್ರತಿಷ್ಠೆಯಿಂದ ನಾವು ಮಾಡಿದ್ದೆ ಅನ್ನೋ ಸರಿ ಅಂತ ಕಾಂಗ್ರೆಸ್ ‌ನವರು ನಡೆದುಕೊಂಡಿದ್ದಾರೆ. ಹಿಂದೆ ನಾವು ಅಧಿಕಾರದಲ್ಲಿ ಇದ್ದಾಗ ಯಾವುದೇ ರೀತಿಯ ಗಣ್ಯರಿಗೆ ಸೇವೆ ಮಾಡಲು ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. 2018ರಲ್ಲಿ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಗಣ್ಯರನ್ನು ಸ್ವಾಗತಿಸಲು ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. ಅವರನ್ನು ಕಳಿಸಿ ಗಣ್ಯರನ್ನ ಬರ ಮಾಡಿಕೊಂಡಿಲ್ಲ ಎಂದು ಅವರು ತಿಳಿಸಿದರು.

ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಯಾವುದೇ ಶಿಷ್ಟ ಚಾರ ಉಲ್ಲಂಘನೆ ‌ಮಾಡಿಲ್ಲ. ಅಧಿಕಾರಿಗಳನ್ನು ಗುಲಾಮರಾನ್ನಾಗಿ ಮಾಡಿಕೊಂಡು ಅಧಿಕಾರಿಗಳನ್ನು ಯಾರ ಮನೆ ಬಾಗಿಲುಗೂ‌ ಕಳುಹಿಸಿಲ್ಲ. ಈ ಸರ್ಕಾರ ಸುಳ್ಳು ‌ಹೇಳಿದೆ. ವಿರೋಧ ಪಕ್ಷಗಳ ಬಲ್ಡೋಜ್ ಮಾಡಲು ಹೊರಟಿರೋದು ಸರ್ಕಾರದ ಉದ್ಧಟತನ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಬಿಜೆಪಿ ನಾವು ಸೇರಿ ಹೋರಾಟ ಮಾಡ್ತಾ ಇದ್ದೇವೆ ಎಂದು ಅವರು ಘೋಷಣೆ ಮಾಡಿದರು.

ಕೆಲವು ಮಂತ್ರಿಗಳು ಶಾಸಕರನ್ನು ಹೆದರಿಸುವ ಕೆಲಸ ಮಾಡಿದ್ದಾರೆ. ನಿಮ್ಮನ್ನು ಮುಗಿಸುವುದಾಗಿ ಸದನದಲ್ಲಿ ಬೆದರಿಕೆ ಹಾಕಿದ್ದಾರೆ. ಇದು ಪ್ರಜಾಪ್ರಭುತ್ವವೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

Tags: BJP JDS AllianceHD KumaraswamyHDKJDS
Previous Post

ಕರ್ನಾಟಕದ ಸ್ತ್ರೀಯರಿಗೆ ಆರ್ಥಿಕ ಸ್ವಾತಂತ್ರ್ಯ, ಗೃಹ ಲಕ್ಷ್ಮಿ ಯೋಜನೆಗೆ ಸಿಎಂ ಚಾಲನೆ

Next Post

ಕುಸಿದು ಬಿದ್ದ ಯತ್ನಾಳ್‌ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಕುಸಿದು ಬಿದ್ದ ಯತ್ನಾಳ್‌ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ

ಕುಸಿದು ಬಿದ್ದ ಯತ್ನಾಳ್‌ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada