
ಚಿಟಗುಪ್ಪ : ಸರ್ಕಾರಿ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಹಣಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಗ್ರಾಮ ಲೆಕ್ಕಾಧಿಕಾರಿಯನ್ನು ಅಮಾನತು ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ತಹಶೀಲ್ದಾರ್ ಮಂಜುನಾಥ್ ಪಂಚಾಳ್ ಮಾಹಿತಿ ನೀಡಿದ್ದಾರೆ.ತಾಲ್ಲೂಕಿನ ಕಂದುಗುಳ್ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಧನರಾಜ್‌ನನ್ನು ಹಣದ ಬೇಡಿಕೆ ಆರೋಪದಡಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.