ರಂಗಭೂಮಿ ಪ್ರತಿಭೆ ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಚೊಚ್ಚಲ ಚಿತ್ರ ಸದ್ದು ವಿಚಾರಣೆ ನಡೆಯುತ್ತಿದೆ ಚಿತ್ರವು ಇದೇ ನವೆಂಬರ್ 25ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.
ನೈಜ ಘಟನೆಗಳಿಂದ ಸ್ಪೂರ್ತಿ ಪಡೆದು ಹೆಣೆದ ಈ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದ್ದು ಮುಖ್ಯಬೂಮಿಕೆಯಲ್ಲಿ ರಾಕೇಶ್ ಮಯ್ಯ, ಮಧುನಂದನ್ ಪಾವನ ಗೌಡ ಅಭಿನಯಿಸಿದ್ದಾರೆ. ಇನ್ನುಳಿದಂತೆ ತಾರಗಣದಲ್ಲಿ ಅಚ್ಯುತ್ ಕುಮಾರ್, ಕೃಷ್ಣ ಹೆಬ್ಬಾಳೆ, ರಾಘು ಶಿವಮೊಗ್ಗ, ಜಾಹಂಗೀರ್, ರೋಹಿಣಿ ರಘುನಂನಂದನ್ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.
ಈಗಾಗಲೇ ಟ್ರೈಲರ್ ಹಾಗೂ ಹಾಡುಗಳ ಮೂಲಕ ಚಿತ್ರ ಸಿನಿರಸಿಕರ ಗಮನ ಸೆಳೆದಿದ್ದು ಸಾಕಷ್ಟು ಇಂಟ್ರಸ್ಟಿಂಗ್ ಅಂಶಗಳನ್ನು ಹೊತ್ತ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನವೆಂಬರ್ 25ಕ್ಕೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.