ಬೆಂಗಳೂರು (Bengaluru): ಲೋಕಸಭಾ ಚುನಾವಣೆ (Loksabha Election) ಹೊಸ್ತಿಲಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ (State Government Employees) ಸರ್ಕಾರ ಬಂಪರ್ ಆಫರ್ ಕೊಟ್ಟಿದೆ.
ರಾಜ್ಯ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಶೇ. 3.5ರಷ್ಟು ತುಟ್ಟಿಭತ್ಯೆ ಹೆಚ್ಚಿಸಲು ಆದೇಶಿಸಿದೆ.
ತುಟ್ಟಿಭತ್ಯೆ ಪ್ರಮಾಣವನ್ನು ಶೇ. 38.75ರಿಂದ ಶೇ. 42.50ಕ್ಕೆ ಹೆಚ್ಚಿಸಲಾಗಿದೆ. ನಿವೃತ್ತ ರಾಜ್ಯ ಸರ್ಕಾರಿ ನೌಕರರನ್ನು ಒಳಗೊಂಡು UGC ICR ಮತ್ತು ಜಿಲ್ಲಾ ಪಂಚಾಯತ್ ನೌಕರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಈ ವೇತನ ಹೆಚ್ಚಳ ಅನ್ವಯವಾಗಲಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.38.75ರಿಂದ ಶೇ.42.5ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಸರ್ಕಾರದ ಆರ್ಥಿಕ ಇಲಾಖೆಗಳ ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು ಸಹಿ ಮಾಡಿರುವ ಆದೇಶದಲ್ಲಿ ತಿಳಿಸಲಾಗಿದೆ.
ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, 2023ರ ಜುಲೈ 1ರಿಂದ ಜಾರಿಗೆ ಬರುವಂತೆ ಶೇ. 3.75 ರಷ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ ತುಟ್ಟಿ ಭತ್ಯೆ ಶೇ.38.75ಗೆ ಏರಿಸಲಾಗಿತ್ತು.
#karnataka #bengaluru #stategovernment #government #employees





