• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೈಗಾರಿಕಾ ಇಲಾಖೆಯಿಂದ ಸಿಹಿ ಸುದ್ದಿ :  81 ಹೊಸ ಯೋಜನೆಗಳಿಗೆ 2,689.51 ಕೋಟಿ ರೂ. ಅನುಮೋದನೆ!

Any Mind by Any Mind
June 17, 2022
in ಕರ್ನಾಟಕ
0
ಕೈಗಾರಿಕಾ ಪ್ರದೇಶದಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯ: ಕೊರತೆಯಾದರೆ ಅಧಿಕಾರಿಗಳಿಗ ವಿರುದ್ದ ಕ್ರಮ!: ಸಚಿವ ನಿರಾಣಿ ಖಡಕ್ ಸೂಚನೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ಉತ್ತೇಜನ ನೀಡಿ ಉದ್ಯೋಗಗಳ ಸೃಷ್ಟಿಗೆ ಒತ್ತು ನೀಡು ಸಲುವಾಗಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು 2,689.51 ಕೋಟಿ ರೂ. ಮೌಲ್ಯದ 81 ಕೈಗಾರಿಕಾ ಯೋಜನೆಗಳಿಗೆ ಗುರುವಾರ ಅನುಮೋದನೆ ನೀಡಿದೆ. ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್. ನಿರಾಣಿ ನೇತೃತ್ವದಲ್ಲಿ ನಡೆದ 132ನೇ ರಾಜ್ಯ ಮಟ್ಟದ ಏಕಗವಾಕ್ಷಿ ತೆರವು ಸಮಿತಿ (SLSWCC) ಸಭೆಯು ಈ ಯೋಜನೆಗಳಿಗೆ ಅನುಮೋದನೆ ನೀಡಿದೆ.

ADVERTISEMENT

ಸಮಿತಿಯು 50 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ ಯೋಜನೆಗಳನ್ನು ಪರಿಗಣಿಸಿ ಅನುಮೋದನೆ ನೀಡಿದೆ. 1,229.43 ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 1,734 ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಅಲ್ಲದೆ 132ನೇ ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ ಸಭೆಯಲ್ಲಿ 15 ಕೋಟಿ ರೂ.ಗಿಂತ ಹೆಚ್ಚು ಹಾಗೂ 50 ಕೋಟಿ ರೂ.ಗಿಂತ ಕಡಿಮೆ ಹೂಡಿಕೆಯ 71 ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗಿದೆ ಹಾಗೂ 1,308.06 ಕೋಟಿ ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 5,091 ಜನರಿಗೆ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

151.42 ಕೋಟಿ ರೂ. ಹೂಡಿಕೆಯ ಮೂರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 2,689.51 ಕೋಟಿ ರೂ.ಗಳ ಹೂಡಿಕೆಯೊಂದಿಗೆ 6,825 ಜನರಿಗೆ ಉದ್ಯೋಗಾವಕಾಶವಿರುವ ಒಟ್ಟು 81 ಯೋಜನೆಗಳಿಗೆ ಅನುಮತಿ ನೀಡಲಾಗಿದೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳು:

ಪರ್ಪಲ್‍ ಸ್ಟಾರ್ ಹೈಜೀನ್ ಪ್ರೈವೇಟ್ ಲಿಮಿಟೆಡ್ – ಹೂಡಿಕೆ 270 ಕೋಟಿ ರೂ., ಉದ್ಯೋಗ – 400

ಬೆಳಗಾವಿ ಶುಗರ್ಸ್ ಪ್ರೈವೇಟ್ 240.84 ಕೋಟಿ ರೂ. ಹೂಡಿಕೆ, 170 ಉದ್ಯೋಗ

ಪರತ್ಪರ ಕಾಫಿ ಲಿಮಿಟೆಡ್ -236.8 ಕೋಟಿ ರೂ. ಹೂಡಿಕೆ, 200 ಉದ್ಯೋಗ

ಲಾಜಿಕಲಿ ಇನ್ಫೋ ಮೀಡಿಯಾ ಪ್ರೈವೇಟ್ ಲಿಮಿಟೆಡ್- 228.19 ಕೋಟಿ ರೂ. ಹೂಡಿಕೆ, 614 ಉದ್ಯೋಗ

ಎಎನ್‍ಎಸ್ ಪೇಪರ್ ಪ್ರೈವೇಟ್ ಲಿಮಿಟೆಡ್ -100 ಕೋಟಿ ರೂ. ಹೂಡಿಕೆ, 100 ಮಂದಿಗೆ ಉದ್ಯೋಗ

ಗೋದಾವತ್ ಪುಡ್ ಪ್ರೋ ಪ್ರೈವೇಟ್ ಲಿಮಿಟೆಡ್ -98.60 ಕೋಟಿ ರೂ. ಹೂಡಿಕೆ, ಉದ್ಯೋಗ – 30

ಜ್ಯೋತಿಸ್ನಾ ಲೈ-ಹೈಟೆಕ್ ಪ್ರೈವೇಟ್ ಲಿಮಿಟೆಡ್ – 50 ಕೋಟಿ ರೂ. ಹೂಡಿಕೆ, ಜೊತೆಗೆ 220 ಉದ್ಯೋಗ

ಈ ಹಿಂದೆ ಸಚಿವ ಮುರುಗೇಶ್ ನಿರಾಣಿ ನೇತೃತ್ವದ ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ 2022ರ ಏಪ್ರಿಲ್ 30 ರಂದು ನಡೆದ 131ನೇ ಸಭೆಯಲ್ಲಿ 8,575 ಜನರಿಗೆ ಉದ್ಯೋಗಾವಕಾಶದೊಂದಿಗೆ ರೂ 2,465.94 ಕೋಟಿ ಮೌಲ್ಯದ 60 ಕೈಗಾರಿಕಾ ಯೋಜನೆಗಳಿಗೆ ಅನುಮತಿ ನೀಡಿತ್ತು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಇವಿ ರಮಣರೆಡ್ಡಿ, ಕೈಗಾರಿಕಾ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎನ್ ಶಿವಶಂಕರ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಅಗ್ನಿಪಥ್ ಯೋಜನೆ ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುತ್ತದೆ : ಸಿದ್ದರಾಮಯ್ಯ

Next Post

ರಾಜ್ಯಾದ್ಯಂತ ಭ್ರಷ್ಟ 21 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಿಗ್ಗೆ ACB ದಾಳಿ!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ರಾಜ್ಯಾದ್ಯಂತ ಭ್ರಷ್ಟ 21 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಿಗ್ಗೆ ACB ದಾಳಿ!

ರಾಜ್ಯಾದ್ಯಂತ ಭ್ರಷ್ಟ 21 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಿಗ್ಗೆ ACB ದಾಳಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada