ಆಸ್ಟ್ರೇಲಿಯಾದ ಪ್ರತಿಷ್ಠಿತ ಟಿ-20 ಟೂರ್ನಮೆಂಟ್ ಬಿಗ್ ಬ್ಯಾಷ್ ಲೀಗ್‌ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಅಡಿಲೇಡ್ ಸ್ಟ್ರೈಕರ್ಸ್ ತಂಡವು ಸಿಡ್ನಿ ಥಂಡರ್ಸ್ ತಂಡವನ್ನ 15 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ.
ಈ ಮೂಲಕ ಟಿ-20 ಕ್ರಿಕೆಟ್ ಇತಿಹಾಸದಲ್ಲಿ ದಾಖಲಾದ ಕನಿಷ್ಠ ಮೊತ್ತ ಎಂಬ ಅಪಕೀರ್ತಿಗೆ ಪಾತ್ರವಾಗಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಡಿಲೇಡ್ ಸ್ಟ್ರೈಕರ್ಸ್ ತಂಡವು 9 ವಿಕೆಟ್ ನಷ್ಟಕ್ಕೆ 139 ರನ್‌ಗಳಿಸಿತ್ತು.
ಸುಲಭ ಜಯದ ನಿರೀಕ್ಷೆಯಲ್ಲಿ ಗುರಿ ಬೆನ್ನತ್ತಿದ್ದ ಸಿಡ್ನಿ ಧಂಡರ್ಸ್ ತಂಡವು 5.5 ಓವರ್‌ಗಳಲ್ಲಿ 15 ರನ್‌ಗಳಿಗೆ ಸರ್ವಪತನವಾಗುವ ಮೂಲಕ 124 ರನ್‌ಗಳಿಂದ ಸೋತು ಮುಖಭಂಗ ಅನುಭವಿಸಿತ್ತು.
ಅಡಿಲೇಡ್ ಸ್ಟ್ರೈಕರ್ಸ್ ಪರ ಹೆನ್ರಿ ಥಾರ್ನ್‌ಟನ್(2.5-1-3-5), ವೆಸ್ ಅಗರ್ (2-0-6-4), ಮ್ಯಾಥ್ಯೂ ಶಾರ್ಟ್ (1-0-5-1) ಎದುರಾಳಿ ತಂಡವನ್ನ ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿದ್ದಾರೆ.