ವಿಶ್ವಕಪ್ ಟೂರ್ನಿಯ ಸೂಪರ್ 8ರ ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತ್ತು.
ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಲು ಅಷ್ಟೇ ಶಕ್ತವಾಯ್ತು. 24 ರನ್‌ಗಳಿಂದ ಆಸ್ಟ್ರೇಲಿಯಾ ಮಣಿಸಿದ ಭಾರತ ತಂಡ ಸೋಲಿಲ್ಲದ ಸರದಾರ ಎನ್ನುವಂತೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಸೋಲಿನ ಮೂಲಕ ಆಸೀಸ್ ತಂಡದ ಸೆಮೀಸ್ ಕನಸು ಭಗ್ನಗೊಂಡ್ರೆ, ಟೀಂ ಇಂಡಿಯಾ ಗೆಲುವಿನ ನಾಗಾಲೋಟದ ಮೂಲಕ ಅಫ್ಘಾನ್ ತಂಡದ ಆಸೆ ಚಿಗುರೊಡೆದಿದೆ. ಮುಂದಿನ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಅಪ್ಘಾನಿಸ್ತಾನ ಗೆಲುವು ಸಾಧಿಸಿದ್ರೆ, ಸೆಮೀಸ್ ಕನಸು ನನಸಾಗಲಿದೆ.
ಟಿ-20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರಿಸಿದ್ರೆ, ಮತ್ತೊಂದು ಕಡೆ, ಯುವ ಪಡೆ ಜಿಂಬಾಬ್ವೆ ಪ್ರವಾಸಕ್ಕೆ ಸಿದ್ಧತೆ ಮಾಡ್ತಿದೆ. ಜಿಂಬಾಬ್ವೆ ಟೂರ್‌ಗೆ ಬಿಸಿಸಿಐ 15 ಸದಸ್ಯರ ತಂಡ ಪ್ರಕಟಿಸಿದೆ. ತಂಡದ ನಾಯಕತ್ವವನ್ನು ಶುಭ್ಮನ್ಗಿಲ್ಗೆ ನೀಡಲಾಗಿದೆ. ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ.