ICC T20 ವಿಶ್ವಕಪ್ ಟೂರ್ನಿಯಲ್ಲಿಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಡಲು ವೇದಿಕೆ ಸಜ್ಜಾಗಿದೆ. ನಸ್ಸೌ ಕೌಂಟಿ ಮೈದಾನದಲ್ಲಿ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ತಂಡಗಳ ನಡುವಿನ ರೋಚಕ ಪಂದ್ಯ ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಉಭಯ ಟೀಂ ರೆಡಿಯಿದ್ದು, ಹೈ ವೋಲ್ಟೇಜ್ ಮ್ಯಾಚ್ ವೀಕ್ಷಿಸಲು ಅಭಿಮಾನಿಗಳು ಕಾತುರರಾಗಿದ್ದಾರೆ . ಟೀಂ ಇಂಡಿಯಾ ಒಂದು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. .ಈಗಾಗಲೇ ನ್ಯೂಯಾರ್ಕ್ನ ಪಿಚ್ ತೀವ್ರ ಟೀಕೆಗೆ ಗುರಿಯಾಗಿದ್ದು, ಇಲ್ಲಿಯವರೆಗೆ ಈ ಮೈದಾನದಲ್ಲಿ ಆಡಿದ ಎಲ್ಲ ಪಂದ್ಯಗಳಲ್ಲೂ ಕಡಿಮೆ ರನ್ ದಾಖಲಾಗಿದೆ. ಐರ್ಲೆಂಡ್ ವಿರುದ್ಧದ ಪಂದ್ಯದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಬ್ಯಾಟಿಂಗ್ ವೇಳೆ ಭುಜ ಭಾಗಕ್ಕೆ ಚೆಂಡು ಬಡಿದಿದ್ದರಿಂದ ಹಿಟ್ಮ್ಯಾನ್ ಅರ್ಧದಲ್ಲೇ ಮೈದಾನ ತೊರೆದಿದ್ದರು.
ಈ ಪಂದ್ಯದ ಬಳಿಕ ಅವರು ಅಭ್ಯಾಸದಲ್ಲೂ ಕಾಣಿಸಿಕೊಂಡಿರಲಿಲ್ಲ. ಶನಿವಾರ ನಡೆದ ಅಭ್ಯಾಸ ಶಿಬಿರದಲ್ಲಿ ಹಿಟ್ಮ್ಯಾನ್ ಮತ್ತೆ ಕಾಣಿಸಿಕೊಂಡಿದ್ದಾರೆ. ಅಲ್ಲದೆ ನೆಟ್ಸ್ನಲ್ಲೂ ಬ್ಯಾಟಿಂಗ್ ಪ್ರಾಕ್ಟೀಸ್ ಮಾಡಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ಚೇತರಿಸಿಕೊಂಡಿರುವುದು ಖಚಿತವಾಗಿದೆ. ಪಾಕಿಸ್ತಾನ ತನ್ನ ಮೊದಲ ಪಂದ್ಯವನ್ನ ಸೋತಿದೆ. ಹೀಗಾಗಿ ಗೆಲ್ಲಲೇಬೇಕಾದ ಅನಿವಾರ್ಯ ಒತ್ತಡದಲ್ಲಿದೆ .
ಭಾರತ ಟಿ20 ವಿಶ್ವಕಪ್ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಸಂಜು ಸ್ಯಾಮ್ಸನ್, ಶಿವಂ ದುಬೆ.
ಪಾಕಿಸ್ತಾನದ ಟಿ20 ವಿಶ್ವಕಪ್ ತಂಡ
ಬಾಬರ್ ಅಜಮ್ (ನಾಯಕ), ಸೈಮ್ ಅಯೂಬ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಅಜಮ್ ಖಾನ್, ಶಾದಾಬ್ ಖಾನ್, ಇಮಾದ್ ವಾಸಿಮ್, ಹಾರಿಸ್ ರೌಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಅಬ್ಬಾಸ್ ಅಫ್ರಿದಿ, ಉಸ್ಮಾನ್ ಖಾನ್, ಅಬ್ರಾರ್ ಅಹಮದ್.