ಜನರನ್ನು ಥಳಿಸುವ ಅಧಿಕಾರ ಪೊಲೀಸರಿಗಿಲ್ಲ, ಸರ್ಕಾರ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು: ಕರವೇ ಅದ್ಯಕ್ಷ ಟಿ.ಎ. ನಾರಾಯಣಗೌಡ

ರಾಜ್ಯಾದ್ಯಂತ ಕರೋನ ಹರಡುತ್ತಿರುವ ಹಿನ್ನೆಲೆ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಯಾಗುತ್ತಿದ್ದಂತೆ ಇಂದು (ಸೋಮವಾರ) ಬೆಳಗ್ಗೆ 10 ಗಂಟೆಯ ನಂತರ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನು ಪೊಲೀಸರು ಜಪ್ತಿ ಮಾಡುವುದರ ಜೊತೆಗೆ ರಸ್ತೆಯಲ್ಲಿ ಜನರು ಕಂಡ ತಕ್ಷಣ ಅವರ ಮೇಲೆ ಲಾಠಿ ಪ್ರಯೋಗ ಮಾಡುತ್ತಿರುವ ಬಗ್ಗೆ ವರದಿಯಾದ ಬೆನ್ನಲ್ಲೇ ಪೋಲಿಸರ ಈ ಅಮಾನವೀಯ ವರ್ತನೆಯನ್ನು ಕರವೇ ಸಂಘಟನೆಯ ರಾಜ್ಯ ಅದ್ಯಕ್ಷ ಟಿ.ಎ ನಾರಾಯಣ ಗೌಡರು ವಿರೋಧಿಸಿದ್ದಾರೆ.

ಕರವೇ ಅದ್ಯಕ್ಷ ಟಿ.ಎ.ನಾರಾಯಣಗೌಡ

ಪೋಲಿಸರ ಈ ನಡವಳಿಕೆಯಿಂದ ಅಸಮಾಧಾನಕೊಂಡ ಕರವೇ ಅದ್ಯಕ್ಷರಾದ ನಾರಾಯಣಗೌಡರು ತಮ್ಮ ಟ್ವೀಟರ್ ನಲ್ಲಿ, “ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆಂಬ ಕಾರಣಕ್ಕೆ ಜನಸಾಮಾನ್ಯರ ಮೇಲೆ ನಿರ್ದಯವಾಗಿ ಲಾಠಿ ಬೀಸುವುದನ್ನು ಪೊಲೀಸ್ ಇಲಾಖೆ ಕೂಡಲೇ ಕೈಬಿಡಬೇಕು. ಹೀಗೆ ಜನರನ್ನು ಥಳಿಸುವ ಯಾವ ಅಧಿಕಾರವೂ ಪೊಲೀಸರಿಗಿಲ್ಲ. ಸರ್ಕಾರ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು” ಎಂದು ಬರೆದುಕೊಂಡಿದ್ದಾರೆ.

ಮುಂದುವರೆದು, “ಜನರು ಈಗಾಗಲೇ ಕೋವಿಡ್ ಸಂಕಷ್ಟಗಳಿಂದ ನರಳುತ್ತಿದ್ದಾರೆ. ಗಾಯದ ಮೇಲೆ ಬರೆ ಎಳೆದಂತೆ ಲಾಕ್ ಡೌನ್ ಕೂಡ ಬಂದಿದೆ. ಇದರ ಪರಿಣಾಮ ಬಡ, ಮಧ್ಯಮ ವರ್ಗದ ಜನರ ಮೇಲಾಗುತ್ತಿದೆ. ಈ ಜನರೇ ಇಂದು ಬೀದಿಯಲ್ಲಿ ಪೊಲೀಸರ ದೌರ್ಜನ್ಯಗಳಿಗೆ ಗುರಿಯಾಗುತ್ತಿದ್ದಾರೆ” ಎಂದು ಕಿಡಿಗಾರಿದ್ದಾರೆ.

“ದಕ್ಷಿಣದ ಇತರ ರಾಜ್ಯಗಳು ಲಾಕ್ ಡೌನ್ ಜತೆಗೇ ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗಾಗಿ ಹಲವು ಯೋಜನೆ ಜಾರಿಗೆ ತಂದಿವೆ. ಆದರೆ ಕರ್ನಾಟಕ ಸರ್ಕಾರ ಇಂಥ ಯಾವುದೇ ಕ್ರಮ ಕೈಗೊಂಡಿಲ್ಲ. ಬಡವರ ಪಾಲಿಗೆ ಕೆಲಸವೂ ಇಲ್ಲ, ಆರೋಗ್ಯವೂ ಇಲ್ಲ, ಆಹಾರವೂ ಇಲ್ಲ ಎಂಬಂಥ ಸ್ಥಿತಿ ನಿರ್ಮಾಣವಾಗಿದೆ” ಎಂದು ನಾಡಿನ ಜನರ ಪರಿಸ್ಥಿತಿ ಕಂಡು ಬೇಸರ ವ್ಯಕ್ತಪಡಿಸಿದ್ದಾರೆ.

“ಕೋವಿಡ್ ಎರಡನೇ ಅಲೆ ನಿರೀಕ್ಷಿತವಾಗಿದ್ದರೂ ಸರ್ಕಾರ ಯಾವುದೇ ಮುಂಜಾಗ್ರತೆ ವಹಿಸದೆ ಇಷ್ಟು ದೊಡ್ಡ ಅನಾಹುತಗಳಿಗೆ ಕಾರಣವಾಗಿದೆ. ತನ್ನ ಹೊಣೆಯನ್ನು ಹೊರಲಾಗದೆ, ಎಲ್ಲ ಭಾರವನ್ನು ಜನರ ಮೇಲೇ ಹೊರೆಸುವುದು ಎಷ್ಟು ಸರಿ? ಇನ್ನಾದರೂ ಸರ್ಕಾರ ತನ್ನ ಜವಾಬ್ದಾರಿ ಅರಿತು ಕ್ರಿಯಾಶೀಲವಾಗಬೇಕು” ಎಂದು ಎಚ್ಚರಿಸಿದ್ದಾರೆ.

“ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಆಸ್ಪತ್ರೆ ಹಾಸಿಗೆ ಇಲ್ಲದೆ, ಆಮ್ಲಜನಕ ಇಲ್ಲದೆ, ಚಿಕಿತ್ಸೆ ಇಲ್ಲದೆ ಅಸುನೀಗುತ್ತಿರುವ ಜನರ ರಕ್ಷಣೆಗೆ ನಿಲ್ಲಬೇಕು. ಇದಕ್ಕಾಗಿ ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಎಲ್ಲ ಜನರಿಗೂ ತ್ವರಿತವಾಗಿ ಮೂರು ತಿಂಗಳೊಳಗೆ ಉಚಿತ ವ್ಯಾಕ್ಸಿನ್ ನೀಡಬೇಕು. ಜನರ ಜೀವ ರಕ್ಷಣೆಯೇ ಈಗ ಸರ್ಕಾರದ ಆದ್ಯ ಕರ್ತವ್ಯವಾಗಬೇಕು” ಎಂದು ಆಗ್ರಹಿಸಿದ್ದಾರೆ.

Related posts

Latest posts

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಇನ್ನಿಲ್ಲ

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಕೊರೊನಾ ಸೋಂಕಿನಿಂದ ಉಂಟಾದ ಹಲವಾರು ಸಮಸ್ಯೆಗಳಿಂದ ಕೊನೆಯುಸಿರೆಳೆದಿದ್ದಾರೆ. ಚಂಡೀಗಡದ ಪಿಜಿಐ ಆಸ್ಪತ್ರೆಯಲ್ಲಿ ತಮ್ಮ 91 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ತಿಂಗಳು ಮಿಲ್ಖಾ ಸಿಂಗ್ ಅವರಿಗೆ...

ಒಂದೇ ದಿನದಲ್ಲಿ ಎರಡು ವಿವಿಧ ಕೋವಿಡ್-19 ಲಸಿಕೆಗಳನ್ನು ಪಡೆದ ಬಿಹಾರದ ಮಹಿಳೆ

ಬಿಹಾರದ 63 ವರ್ಷದ ಮಹಿಳೆಗೆ ಒಂದೇ ದಿನದಲ್ಲಿ ಎರಡು ವಿಭಿನ್ನ ಕಂಪನಿಯ ಕರೋನ ಲಸಿಕೆ ನೀಡಲಾಗಿದೆ. ಅವರು ಈಗ ವೈದ್ಯರ ನಿಗದಲ್ಲಿದ್ದು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಬಿಹಾರದ ಮಹಿಳೆ ಸುನಿಲಾ ದೇವಿ ಎಂಬುವವರಿಗೆ ಜೂನ್ 16...

ಮಸೀದಿಗೆ ಜಾಗ ದಾನ ನೀಡಿದ ಸಿಖ್ ವ್ಯಕ್ತಿ: ಮಸೀದಿಯಲ್ಲಿ ಕಾರ್ಯಕ್ರಮ ಆಯೋಜಿಸಿದ ಗುರುದ್ವಾರ

ಕೋಮು‌‌ ಸಂಘರ್ಷಗಳು, ಪ್ರಚೋದನೆಗಳು ಮತ್ತು ವಿಭಿನ್ನ ಕೋಮಿನ ಜನರ ಮೇಲೆ ವಿನಾಕಾರಣ ಹಲ್ಲೆ, ಕೊಲೆ ನಡೆಯುವ ವಿದ್ಯಮಾನಗಳ ನಡುವೆ ಪಂಜಾಬಿನ‌ ಎರಡು ಜಿಲ್ಲೆಗಳು ಕೋಮುಸಾಮರಸ್ಯವನ್ನು ಉತ್ತೇಜಿಸುವಂತಹ ಘಟನೆಗೆ ಸಾಕ್ಷಿಯಾಗಿವೆ. ಸ್ವಾಭಿಮಾನಕ್ಕೆ, ಕೆಚ್ಚೆದೆಗೆ ಹಠಕ್ಕೆ...