Tag: ತೆಲಂಗಾಣ

ತೆಲಂಗಾಣ | ‌ಚುನಾವಣೆ ಘೋಷಣೆಗೂ ಮುನ್ನ ಬಿಆರ್‌ಎಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಸಿಎಂ ಕೆ.ಚಂದ್ರಶೇಖರ್‌ ರಾವ್

ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ತಮ್ಮ ...

Read moreDetails

ಅಚ್ಚರಿ ಆದರೂ ಸತ್ಯ ! ಕಳವಾದ ಮೊಬೈಲ್‌ಗಳ ಪತ್ತೆಯಲ್ಲಿ ದೇಶದಲ್ಲೇ ಕರ್ನಾಟಕವೇ ಮೊದಲು

ಸೆಂಟ್ರಲ್ ಎಕ್ಯೂಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ ( ಸಿಇಐಆರ್‌) ಪೋರ್ಟ್ ಮೂಲಕ ಕಳವಾದ ಮೊಬೈಲ್ ಗಳ ಪತ್ತೆಹಚ್ಚಿ, ವಾರಸುದಾರರಿಗೆ ಮರಳಿಸುವ ಕಾರ್ಯದಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ ಎಂದು ...

Read moreDetails

ತೆಲಂಗಾಣ | ಭಾರೀ ಮಳೆ ; ಜನರಿಗೆ ಮನೆಯಲ್ಲೇ ಉಳಿಯುವಂತೆ ಸೂಚನೆ

ತೆಲಂಗಾಣ  ರಾಜ್ಯದ ಹೈದರಾಬಾದ್‌ನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ನಗರದ ಉತ್ತರ ಹಾಗೂ ಕೇಂದ್ರ ಭಾಗದಲ್ಲಿನ ಬಹುತೇಕ ಪ್ರದೇಶಗಳು ಮುಳುಗಡೆಯಾಗಿವೆ. ಜು 20 ರಂದು ...

Read moreDetails

ಕೇರಳ, ತೆಲಂಗಾಣದಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿ ಪ್ರಯತ್ನ

ದೇಶದ ಬಹುತೇಕ ರಾಜ್ಯಗಳಲ್ಲಿ ಅಧಿಕಾರವನ್ನು ಪಡೆಯಲು ಬಿಜೆಪಿ ಯಶಸ್ವಿಯಾಗಿದ್ದರೂ, ದಕ್ಷಿಣ ಭಾರತದಲ್ಲಿ ಮಾತ್ರ ಹೆಚ್ಚಿನ ಯಶಸ್ಸು ಗಳಿಸಲು ಸಾಧ್ಯವಾಗಲಿಲ್ಲ. ಕರ್ನಾಟಕ, ಗೋವಾ ಹೊರತಾಗಿ ಬೇರೆ ಯಾವುದೇ ರಾಜ್ಯದಲ್ಲಿ ಅಧಿಕಾರಿ ಪಡೆಯಲು ಬಿಜೆಪಿ ವಿಫಲವಾಗಿದೆ. ಪ್ರಮುಖವಾಗಿ ಕೇರಳ ಹಾಗೂ ತೆಲಂಗಾಣದಲ್ಲಿ ಬಿಜೆಪಿ ಪ್ರದರ್ಶನ ಅತ್ಯಂತ ಕಳಪೆಯಾಗಿದ್ದು, ಈಗ ಈ ರಾಜ್ಯಗಳಲ್ಲಿ ಬಿಜೆಪಿಗೆ ಜೀವ ತುಂಬುವ ಪ್ರಯತ್ನ ನಡೆಸಲಾಗುತ್ತಿದೆ.  2016ರಲ್ಲಿ ಕೇರಳ ವಿಧಾನಸಭೆಗೆ ಬಿಜೆಪಿ ಮೊತ್ತಮೊದಲು ಪ್ರವೇಶ ಪಡೆದಿತ್ತು.2021ರಲ್ಲಿ ಆ ಸ್ಥಾನವನ್ನೂ ಕಳೆದುಕೊಂಡು ವಿಧಾನಸಭೆಯಲ್ಲಿ ಅಸ್ಥಿತ್ವವೇ ಇಲ್ಲದ ಪರಿಸ್ಥಿಗೆ ಬಿಜೆಪಿ ಇಳಿದಿದೆ. ಇನ್ನು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ತಮ್ಮನ್ನು ತಾವೇ ಮುಂದಿನ ಪ್ರಧಾನಿ ಹುದ್ದೆಯ ಅಭ್ಯರ್ಥಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ.  ಇವೆರಡೂ ರಾಜ್ಯಗಳಲ್ಲಿ ಬಿಜೆಪಿಯ ಪ್ರಭಾವ ಅಷ್ಟಕ್ಕಷ್ಟೇ. ಈ ಕಾರಣಕ್ಕೆ, ಕೇರಳ ಹಾಗು ತೆಲಂಗಾಣದಲ್ಲಿ ಬಿಜೆಪಿ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಲು ಹಾಗೂ ಮುಂಬರುವ ಚುನಾವಣೆಗಳಿಗೆ ತಯಾರಿಯಾಗಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಇಂದು ಮತ್ತು ನಾಳೆ ಭೇಟಿ ನೀಡಲಿದ್ದಾರೆ. ಈ ವೇಳೆ ಸರಣಿ ಸಭೆಗಳನ್ನು ನಡೆಸಿ, ಪಕ್ಷದ ಅಸ್ಥಿತ್ವನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಚರ್ಚೆ ನಡೆಸಲಿದ್ದಾರೆ.  ತೆಲಂಗಾಣದಲ್ಲಿ ಬಿಜೆಪಿ ಜೊತೆಗಿನ ವೈಮನಸ್ಯವನ್ನು ಟಿಆರ್ಎಸ್ ಮುಂದುವರೆಸಿದೆ. ಈ ಕಾರಣಕ್ಕೆ ಅಲ್ಲಿ ರೈತರ ಸಮಸ್ಯೆಗಳನ್ನು ಚುನಾವಣಾ ಸರಕಾಗಿಸಿ ಪ್ರಚಾರ ಪಡೆಯುವ ಕುರಿತು ಚಿಂತನೆ ನಡೆದಿದೆ. ಕಳೆದ ಚುನಾವಣೆಯಲ್ಲಿ ಕೇವಲ ಮೂರು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವಲ್ಲಿ ಸಫಲವಾಗಿದ್ದ ಬಿಜೆಪಿ, ಮುಂದಿನ ಚುನಾವಣೆಗೆ ಈಗಾಗಲೇ ನೀಲಿ ನಕ್ಷೆ ತಯಾರಿಸಿದೆ.  ಟಿಆರ್ಎಸ್ ಸರ್ಕಾರದ ವೈಫಲ್ಯಗಳು, ರೈತರ ಸಮಸ್ಯೆ ಹಾಗೂ ಇನ್ನಿತರ ವಿಚಾರಗಳನ್ನು ಮುಂದಿಟ್ಟುಕೊಂಡು ಕ್ಷೇತ್ರವಾರು ಪ್ರಚಾರಕ್ಕೆ ತಯಾರಿ ನಡೆಸಲಾಗಿದೆ. ಇದರೊಂದಿಗೆ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸುವ ಸಲುವಾಗಿ ಹಾಗೂ ಅವರಲ್ಲಿ ಆತ್ಮವಿಶ್ವಾಸ ತುಂಬಿಸಲು ಜೆ ಪಿ ನಡ್ಡಾ ಅವರು ಮೆಹಬೂಬ್ ನಗರದಲ್ಲಿ ಬಹಿರಂಗ ಸಮಾವೇಶವನ್ನೂ ಹಮ್ಮಿಕೊಳ್ಳಲಿದ್ದಾರೆ.  ಕೇರಳದ ಕಲ್ಲಿಕೋಟೆಯಲ್ಲಿಯೂ ಬಹಿರಂಗ ಸಮಾವೇಶವನ್ನು ಏರ್ಪಡಿಸಲಾಗಿದೆ. ಇಲ್ಲಿಯೂ ಪಕ್ಷದ ಪ್ರಮುಖರ ಸಭೆ ಕರೆದು, ಮುಂದಿನ ಲೋಕಸಭಾ ಹಾಗೂ ನಾಲ್ಕು ವರ್ಷಗಳ ನಂತರ ಬರುವ ವಿಧಾನಸಭಾ ಚುನಾವಣೆಗೆ ಈಗಿಂದಲೇ ತಯಾರಿ ನಡೆಸುವ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ವರದಿಯಾಗಿದೆ.  “ರಾಜ್ಯದ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲು ರಾಷ್ಟ್ರ ನಾಯಕರು ಆಗಿಸುತ್ತಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಡಿಜಿಟಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಗೊಳಿಸುವ ಕುರಿತು ಚರ್ಚೆ ನಡೆಸಲಾಗುತ್ತದೆ,” ಎಂದು ಕೇರಳದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.  ಒಟ್ಟಿನಲ್ಲಿ, ನೆಲೆಯಿಲ್ಲದ ಕಡೆಗಳಲ್ಲಿ ಹೊಸತೊಂದು ನೆಲೆ ಕಂಡುಕೊಳ್ಳಲು ಬಿಜೆಪಿ ಶ್ರಮಪಡುತ್ತಿದೆ. ಎಡರಂಗ ಹಾಗು ಪ್ರಾದೇಶಿಕ ಪಕ್ಷದ ಪ್ರಭಾವವನ್ನು ಮೀರಿ ನಿಂತು ಸರ್ಕಾರ ರಚಿಸಲು ಬಿಜೆಪಿಗೆ ಸಾಧ್ಯವಾಗಬಹುದೇ ಎಂದು ಕಾದುನೋಡಬೇಕಿದೆ. 

Read moreDetails

ಅಮಾನುಷತೆಯ ನಡುವೆ ಸಂವೇದನೆಯ ಹುಡುಕಾಟ

ದೇಶದಲ್ಲಿ ಇತ್ತೀಚೆಗೆ ನಡೆದ ಕೆಲವು ಸಮಾಜಘಾತುಕ, ಸ್ತ್ರೀವಿರೋಧಿ ಘಟನೆಗಳು ಸಮಾಜದ ಸುಪ್ತ ಪ್ರಜ್ಞೆಯನ್ನೂ ಬಡಿದೆಬ್ಬಿಸುವಂತಿವೆ. ಸೂಕ್ಷ್ಮತೆಯನ್ನು ಕಳೆದುಕೊಂಡು ಜಡಗಟ್ಟಿರುವ ಸಮಾಜವೂ ಸಹ ಈ ಘಟನೆಗಳಿಂದ ಮೈಕೊಡವಿ ನಿಲ್ಲುವಂತಾಗಿದೆ. ...

Read moreDetails

ಅವಕಾಶವಾದಿ ರಾಜಕಾರಣ ಪ್ರಾದೇಶಿಕತೆಗೆ ಕುತ್ತು

ಭಾರತದಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷಗಳ ಸುದೀರ್ಘ ಇತಿಹಾಸವೇ ಇದೆ. ವಿಭಿನ್ನ ಕಾರಣಗಳಿಗಾಗಿ ರಾಷ್ಟ್ರ ರಾಜಕಾರಣದ ಪ್ರಾಬಲ್ಯ ಮತ್ತು ನಿಯಂತ್ರಣಗಳ ಹೊರತಾಗಿಯೂ ಕರ್ನಾಟಕವೂ ಸೇರಿದಂತೆ ಬಹುತೇಕ ಎಲ್ಲ ರಾಜ್ಯಗಳಲ್ಲೂ ...

Read moreDetails

ಧ್ವೇಷ ಭಾಷಣ: ಬಿಜೆಪಿ ಶಾಸಕ ರಾಜಾಸಿಂಗ್‌ ಖಾತೆಯನ್ನು ರದ್ದುಗೊಳಿಸಿದ ಫೇಸ್‌ಬುಕ್

ಘೋಷ್‌ಮಹಲ್‌ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ‌ ಬಿಜೆಪಿಯ ರಾಜಾಸಿಂಗ್‌ ಮೇಲೆ 60 ಕ್ಕಿಂತಲೂ ಹೆಚ್ಚು ಪ್ರಕರಣಗಳಿವೆ.

Read moreDetails

ಸಾಯಿಶ್ರೀ ಪ್ರಯತ್ನಕ್ಕೆ ಸಿಕ್ಕ ಪ್ರತಿಫಲ; ಕೊನೆ ಕ್ಷಣದಲ್ಲಿ ʼಕ್ರೆಡಿಟ್‌ʼ ಪಡೆಯಲು ಮುಂದಾದ ಶಾಸಕ!?

ಸಾಯಿಶ್ರೀ ಪ್ರಯತ್ನಕ್ಕೆ ಸಿಕ್ಕ ಪ್ರತಿಫಲ; ಕೊನೆ ಕ್ಷಣದಲ್ಲಿ ʼಕ್ರೆಡಿಟ್‌ʼ ಪಡೆಯಲು ಮುಂದಾದ ಶಾಸಕ!?

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!