Tag: Basavaraj Bommai

ಎರಡು ಉಪ ಚುನಾವಣೆ: ಜೆಡಿಎಸ್ ಕಾಂಗ್ರೆಸ್‌ಗೆ ಏಟು ನೀಡುತ್ತಾ? ಅಥವಾ ಯಡಿಯೂರಪ್ಪ ಫ್ಯಾಕ್ಟರ್ ಕಾಂಗ್ರೆಸ್‌ಗೆ ನೆರವಾಗುತ್ತಾ?

ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಗಳು ಕರ್ನಾಟಕದ ಆಡಳಿತಾರೂಢ ಬಿಜೆಪಿ ಸರ್ಕಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲ, ಆದರೆ ಎಲ್ಲಾ ಮೂರು ಪಕ್ಷಗಳು ಮತ್ತು ...

Read moreDetails

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 28 IAS ಅಧಿಕಾರಿಗಳು ವರ್ಗಾವಣೆ

ಸಿಎಂ ಬಸವರಾಜ್ ಬೊಮ್ಮಾಯಿ ಸಿಎಂ ಆಗಿ ಇನ್ನೂ ಆರು ತಿಂಗಳು ಕಳೆದಿಲ್ಲ ಆಗಲೇ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ. 28 ಐಎಎಸ್ ಅಧಿಕಾರಿಗಳನ್ನು ...

Read moreDetails

ಸಚಿವ ಮುರುಗೇಶ ನಿರಾಣಿಯನ್ನು ಹಾಡಿ ಹೊಗಳಿದ ಮಾಜಿ-ಹಾಲಿ ಸಿಎಂ

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಕೈಗಾರಿಕಾ ಕ್ಷೇತ್ರದಲ್ಲಿ ಸಾಧಿಸಿರುವ ' ಯಶೋಗಾಧೆ' ಯನ್ನು ‌ಹಾಲಿ ಹಾಗೂ ಮಾಜಿ ಸಿಎಂಗಳಿಂದ ಗುಣಗಾನಕ್ಕೆ ...

Read moreDetails

ಸರ್ಕಾರಿ ಕೆಲಸದ ಆಸೆ ಬಿಟ್ಟು ಯುವಕರು ಸ್ವಾವಲಂಬಿಯಾಗಬೇಕು: ಸಚಿವ ನಿರಾಣಿ

ವಿದ್ಯಾವಂತರು ಕೇವಲ ಸರ್ಕಾರಿ ಹುದ್ದೆಗಳನ್ನು ಬಯಸದೆ ಸ್ವತಃ ಉದ್ಯಮಿಗಳಾಗುವ ಮೂಲಕ ದೇಶದ ಪ್ರಗತಿಯಲ್ಲಿ ಕೈ ಜೋಡಿಸಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ...

Read moreDetails

ಚಿಕ್ಕಬಳ್ಳಾಪುರ-ಕೋಲಾರಕ್ಕೆ ನೀರು ಹರಿಸಲು ಇನ್ನೆಷ್ಟು ವರ್ಷ ಬೇಕು? : ಹೆಚ್‌.ಡಿ.ಕೆ

ಎತ್ತಿನಹೊಳೆ ಯೋಜನೆ ಕಾಮಗಾರಿಗಳನ್ನು ವೀಕ್ಷಿಸುವ ಮುನ್ನ ಸಕಲೇಶಪುರದಲ್ಲಿ ಮಾತನಾಡಿದ ಅವರು; “2014ರಲ್ಲಿ ಆರಂಭವಾದ ಯೋಜನೆಯನ್ನು ಮೂರೇ ವರ್ಷದಲ್ಲಿ ಮುಗಿಸಿ ಎರಡೂ ಜಿಲ್ಲೆಗಳಿಗೆ ನೀರು ಹರಿಸುವುದಾಗಿ ಹೇಳಿದ್ದ ಅಂದಿನ ...

Read moreDetails

ಅಶೋಕ Vs ಸೋಮಣ್ಣ: ಬೆಂಗಳೂರು ಉಸ್ತುವಾರಿ ವಿಚಾರದಲ್ಲಿ ಸಚಿವರ ನಡುವೆ ಕಾದಾಟ.!

ಬಿಜೆಪಿ ಸಚಿವರಾದ ಆರ್‌. ಅಶೋಕ ಹಾಗೂ ವಿ ಸೋಮಣ್ಣ ನಡುವಿನ ಜಗಳ ಈಗ ಮತ್ತೆ ತಾರಕಕ್ಕೇರಿದೆ. ಬೆಂಗಳೂರಿನ ಈ ಸಚಿವದ್ವಯರ ಬಹಿರಂಗ ಕಾದಾಟ ರಾಜ್ಯ ಬಿಜೆಪಿಗೆ ಬಗೆ ...

Read moreDetails

2021 ಮೈಸೂರು ದಸರಾ ಉದ್ಘಾಟನೆ: ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಎಸ್‌ಎಂ ಕೃಷ್ಣ

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು 2021ರ ನಾಡ ಹಬ್ಬ ದಸರಾವನ್ನು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ಉದ್ಘಾಟಿಸಿದ್ದಾರೆ. ಬೆಳ್ಳಿ ರಥದಲ್ಲಿ ಇರಿಸಿದ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ...

Read moreDetails

ವಿಜಯನಗರ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಆರು ಮಂದಿ ಸಾವು!

ಕರ್ನಾಟಕದಲ್ಲಿ ಹೊಸದಾಗಿ ರಚಿಸಿದ ವಿಜಯನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಪ್ಟೆಂಬರ್ 23ರಿಂದ ಇದುವರೆಗೆ ಆರು ಜನರು ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ...

Read moreDetails

ಧಾರವಾಡದ 2 ಸ್ಥಾನಗಳಿಗೆ ಎಂಎಲ್‌ಸಿ ಚುನಾವಣೆ: ಬಿಜೆಪಿಯಿಂದ ಪ್ರದೀಪ್ ಶೆಟ್ಟರ್, ಕಾಂಗ್ರೆಸ್‌ನಲ್ಲಿ 28 ಆಕಾಂಕ್ಷಿಗಳು, ಒಳ ಒಪ್ಪಂದವೇ ಚುನಾವಣಾ ನೀತಿ!

ಅವಿಭಜಿತ ಧಾರವಾಡ ಜಿಲ್ಲೆಯಿಂದ (ಧಾರವಾಡ, ಗದಗ, ಹಾವೇರಿ ಜಿಲ್ಲೆಗಳು) 2 ಎಂಎಲ್‍ಸಿ ಸ್ಥಾನಗಳಿಗೆ ಡಿಸೆಂಬರ್‍ನಲ್ಲಿ ಚುನಾವಣೆ ನಡೆಯಲಿದೆ. ಆದರೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‍  ಪಕ್ಷಗಳಲ್ಲಿ ಚುನಾವಣಾ ...

Read moreDetails

ಕಲ್ಲಿದ್ದಲು ಸ್ಥಾವರಗಳು ಬೆಂಗಳೂರಿನ ವಾಯುಮಾಲಿನ್ಯವನ್ನು ಹತ್ತುವರ್ಷಗಳಲ್ಲಿ ದ್ವಿಗುಣಗೊಳಿಸಲಿವೆ: ಅಧ್ಯಯನ

ಬೆಂಗಳೂರಿನ ವಾಯು ಮಾಲಿನ್ಯವು ಡಬ್ಲ್ಯುಎಚ್‌ಒ ಮಾರ್ಗಸೂಚಿಗಿಂತ ಈಗಾಗಲೇ ಮೂರು ಪಟ್ಟು ಹೆಚ್ಚಿದ್ದು, ಕೇಂದ್ರ ಸರ್ಕಾರವು ಕಲ್ಲಿದ್ದಲು ಸ್ಥಾವರಗಳನ್ನು 28 ಪ್ರತಿಶತದಷ್ಟು ವಿಸ್ತರಿಸಲು ಯೋಜಿಸಿದರೆ, ಮುಂದಿನ 10 ವರ್ಷಗಳಲ್ಲಿ ...

Read moreDetails

ಬಂಡವಾಳ ಹೂಡಿಕೆದಾರರ ಸಮಾವೇಶ ಬಳಿಕ 10 ಲಕ್ಷ ಉದ್ಯೋಗ ಸೃಷ್ಟಿ – ಸಚಿವ ಮುರುಗೇಶ್ ನಿರಾಣಿ

ಮುಂದಿನ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು *ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು  ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ...

Read moreDetails

ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆ ಈಡೇರದಿದ್ದರೆ ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಲು ಹಾಲಕ್ಕಿ ಜನಾಂಗದ ಸುಕ್ರಿ ಬೊಮ್ಮುಗೌಡ ನಿರ್ಧಾರ !

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಾಗಿರುವ ಬುಡಕಟ್ಟು ಸಮುದಾಯದ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಹೋರಾಟ ಇದೀಗ ತೀವ್ರಗೊಂಡಿದೆ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವ ಹಿನ್ನಲೆಯಲ್ಲಿ ಜಾನಪದ ಕಲಾವಿದೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮುಗೌಡ ಅವರು ಇದೀಗ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ಸು ಮಾಡಲು ಮುಂದಾಗಿದ್ದಾರೆ.ಹೋರಾಟಕ್ಕೆ ಇಳಿದ ಸುಕ್ರಿ ಬೊಮ್ಮುಗೌಡ!ಹಾಲಕ್ಕಿ ಒಕ್ಕಲಿಗರು ಉತ್ತರ ಕನ್ನಡದಲ್ಲಿ ನೆಲೆಸಿರುವ ವಿಶಿಷ್ಟ ಬುಡಕಟ್ಟು ಜನಾಂಗವಾಗಿದ್ದು, ಕರಾವಳಿ ತಾಲೂಕುಗಳಾದ ಅಂಕೋಲಾ, ಕಾರವಾರ, ಕುಮಟಾ ಹಾಗೂ ಹೊನ್ನಾವರದಲ್ಲಿ ಹೆಚ್ಚಾಗಿ ಕಂಡುಬರುತ್ತಾರೆ. ತಮ್ಮ ವೇಷಭೂಷಣದಲ್ಲಿಯೇ, ಅದರಲ್ಲೂ ಮಗ್ಗದ ಚೌಕುಳಿ ಸೀರೆಯನ್ನು ಮೊಣಕಾಲಿನವರೆಗೆ ನೆರಿಗೆ ಮಾಡಿ ಇಳಿಬಿಟ್ಟು ಎಡ ಬಾಜುವಿಗೆ ಸೆರಗನ್ನು ತಂದು ಗಂಟು ಕಟ್ಟಿ ಉಡುವ, ಕುಪ್ಪಸವಿಲ್ಲದ ಭುಜಗಳ ತುಂಬ ಕರಿಮಣಿ ಸರಗಳನ್ನು ಧರಿಸುವ ಮಹಿಳೆಯರನ್ನು ನೋಡಿಯೇ ಹೇಳಬಹುದು ಇವರು ಬುಡಕಟ್ಟು ಜನಾಂಗಕ್ಕೆ ಸೇರಿದವರು ಎಂದು. ಆದರೆ ಈ ಜನಾಂಗ ಹಲವಾರು ವರ್ಷಗಳಿಂದ ಸರ್ಕಾರಗಳ ನಿರ್ಲಕ್ಷಕ್ಕೆ ತುತ್ತಾಗಿದ್ದು, ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದರೂ ಇಂದಿಗೂ ನ್ಯಾಯ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಇದೇ ಸಮುದಾಯಕ್ಕೆ ಸೇರಿದ ಅಂಕೋಲಾ ತಾಲೂಕಿನ ಬಡಗೇರಿಯ, ಜಾನಪದ ಕೋಗಿಲೆ ಖ್ಯಾತಿಯ, ನಾಡೋಜ, ಪದ್ಮಶ್ರೀ ಸುಕ್ರಿ ಬೊಮ್ಮುಗೌಡ ಇದೀಗ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಹಾಲಕ್ಕಿ ಸಮುದಾಯದ ಕಡೆಗಣನೆ !ಸುಮಾರು 1.5 ಲಕ್ಷ ಜನಸಂಖ್ಯೆ ಇರುವ ಹಾಲಕ್ಕಿ ಒಕ್ಕಲಿಗ ಜನಾಂಗವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಜಿಲ್ಲೆಯ ಜನಾಂಗದವರ ಬಹುದೊಡ್ಡ ಬೇಡಿಕೆ. ಈ ನಿಟ್ಟಿನಲ್ಲಿ ಕಳೆದ 2000ನೇ ಇಸವಿಯಿಂದಲೂ ಹೋರಾಟ ನಡೆಸುತ್ತಲೇ ಬಂದಿದ್ದು ಇಂದಿಗೂ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಮಾತ್ರ ಸೇರಿಸಿಲ್ಲ. ಈ ನಿಟ್ಟಿನಲ್ಲಿ ತಮ್ಮ ಸಮುದಾಯದ ಒಳಿತಿಗಾಗಿ ಮುಂದಾಗಿರುವ ಜಾನಪದ ಕೋಗಿಲೆ ಸುಕ್ರಿ ಬೊಮ್ಮುಗೌಡ ತಮ್ಮ ಜನಾಂಗವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸುವಂತೆ ಸರ್ಕಾರವನ್ನ ಒತ್ತಾಯಿಸಿದ್ದಾರೆ. ಸರ್ಕಾರದ ಸೌಲಭ್ಯದಿಂದ ಜನಾಂಗ ವಂಚಿತವಾಗಿದ್ದು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಒಂದಿಷ್ಟು ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಸುಕ್ರಜ್ಜಿ, ತಮ್ಮ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತನ್ನ ಕಲೆಯನ್ನ ಗುರುತಿಸಿ ಕೇಂದ್ರ ಸರ್ಕಾರ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನ ವಾಪಸ್ ಮಾಡುವುದಾಗಿ ತಿಳಿಸಿದ್ದಾರೆ.ಬೇಡಿಕೆ ಈಡೇರದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ !ಹಾಲಕ್ಕಿ ಜನಾಂಗವನ್ನ ಈ ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ದೊಡ್ಡ ಹೋರಾಟ ನಡೆದ ಪರಿಣಾಮ ರಾಜ್ಯ ಸರ್ಕಾರ ಜನಾಂಗವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಈ ಬಗ್ಗೆ ಹಲವಾರು ಮುಖಂಡರು ದೆಹಲಿಗೆ ಸಹ ತೆರಳಿ ಐದಾರು ವರ್ಷದಿಂದ ಒತ್ತಡ ಹೇರಿದ್ದರೂ ಇಂದಿಗೂ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾಗಿಲ್ಲ. ಕಳೆದ 20 ವರ್ಷದಿಂದ ಹೋರಾಟ ಮಾಡುತ್ತಿದ್ದರೂ ಇಂದಿಗೂ ಪರಿಶಿಷ್ಟ ಪಂಗಡಕ್ಕೆ ಸೇರಿಸದೇ ನಿರ್ಲಕ್ಷ ಮಾಡಲಾಗುತ್ತಿದೆ ಅಂತಾ ಸುಕ್ರಜ್ಜಿ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಇಂದಿಗೂ ಬಹುತೇಕ ಹಾಲಕ್ಕಿಗರು ಕೂಲಿ ಕೆಲಸ, ಪುಟ್ಟ ಜಮೀನಿನಲ್ಲಿ ಕೃಷಿ ಕೆಲಸವನ್ನ ಮಾಡಿಕೊಂಡೇ ಜೀವನ ಸಾಗಿಸುತ್ತಿದ್ದು, ಶಿಕ್ಷಿತರ ಸಂಖ್ಯೆ ಸಹ ಬಹಳ ಕಡಿಮೆ ಇದೆ. ಈ ನಿಟ್ಟಿನಲ್ಲಿ ಹಿಂದುಳಿದಿರುವ ಬುಡಕಟ್ಟು ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎನ್ನುವುದು ನ್ಯಾಯಯುತ ಬೇಡಿಕೆಯಾಗಿದ್ದು ಸರ್ಕಾರ ಇದನ್ನ ಈಡೇರಿಸದಿದ್ದಲ್ಲಿ ಮುಂದಿನ ದಿನದಲ್ಲಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಸಹ ಸಿದ್ಧರಾಗಿದ್ದೇವೆ ಎನ್ನುತ್ತಾರೆ ಹಾಲಕ್ಕಿ ಜನಾಂಗದ ನಾಟಿ ವೈದ್ಯ ಹನುಮಂತ ಗೌಡ.ಎಷ್ಟೇ ಮನವಿ ನೀಡಿದ್ರು ಸ್ಪಂದಿಸಿದ ವ್ಯವಸ್ಥೆ !ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿಯನ್ನೂ ಸಲ್ಲಿಸಿರುವ ಉತ್ತರ ಕನ್ನಡ ಜಿಲ್ಲಾ ಹಾಲಕ್ಕಿ ಒಕ್ಕಲಿಗರ ಸಂಘ, ಹಾಲಕ್ಕಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಕ್ಕಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಆಯಾ ಸಂದರ್ಭದಲ್ಲಿ ಅಧಿಕಾರದಲ್ಲಿರುವ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಲೇ ಬಂದಿದ್ದೇವೆ. ರಾಜ್ಯದಿಂದ ಕೇಂದ್ರಕ್ಕೆ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಶಿಫಾರಸ್ಸು ಮಾಡಲಾಗಿತ್ತು. ಆದರೆ ಇದುವರೆಗೂ ಸೇರಿಸದೆ ಇರುವುದು ದುರದೃಷ್ಟಕರ ಎಂದು ಅಳಲು ತೋಡಿಕೊಂಡಿದ್ದಾರೆ.

Read moreDetails

ರಿಯಲ್ ಎಸ್ಟೇಟ್ ನೆರಳಲ್ಲಿ ವಿಜಯನಗರ ಜಿಲ್ಲೆಯ ವೈಭವೋಪೇತ ಉದ್ಘಾಟನೆ: ಆನಂದಸಿಂಗ್ ಅಕ್ಕಪಕ್ಕದಲ್ಲಿ ಯಡಿಯೂರಪ್ಪ-ಬೊಮ್ಮಾಯಿ

ಹೊಸಪೇಟೆ (ಈಗ ವಿಜಯನಗರ) ನಗರದಲ್ಲಿ ಭವ್ಯವಾದ ವೇದಿಕೆಗಳು ಸಿದ್ಧವಾಗಿವೆ. ಇಲ್ಲಿವರೆಗೂ ಯಾವ ಹೊಸ ಜಿಲ್ಲೆಯ ಉದ್ಘಾಟನೆಯೂ ಇಂತಹ ಅದ್ದೂರಿತನದಿಂದ ಜರುಗಿಲ್ಲ. ಆದರೆ ಸರ್ಕಾರಿ ವೆಚ್ಚದಲ್ಲಿ ಈ ವೈಭವದ ...

Read moreDetails

ಶಿಕ್ಷಣವನ್ನು ಕೇಸರಿಕರಣ ಹಾಗೂ ಖಾಸಗೀಕರಣ ಮಾಡುವ ಹುನ್ನಾರವೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ: ಧೃವನಾರಾಯಣ್

‘ಶ್ರೇಣಿಕೃತ  ವ್ಯವಸ್ಥೆ ಮೇಲೆ ನಂಬಿಕೆ ಇಟ್ಟಿರುವ ಮನುವಾದಿ ಬಿಜೆಪಿ ದೇಶದ ಶಿಕ್ಷಣವನ್ನು ಕೇಸರಿಕರಣ ಮಾಡುವುದರ ಜತೆಗೆ ಖಾಸಗೀಕರಣ ಮಾಡಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆತುರದಲ್ಲಿ ಜಾರಿಗೆ ...

Read moreDetails

ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಯ್ಕೆ

 ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಇದೇ ಮೊದಲ ಬಾರಿಗೆ ರಾಜಕಾರಿಣಿಯೊಬ್ಬರು ನಾಡ ಹಬ್ಬ ದಸರಾವನ್ನು ಉದ್ಘಾಟಿಸುತ್ತಿರುವುದು ವಿಶೇಷ ಸಂಗತಿ. ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರನ್ನು ರಾಜ್ಯ ...

Read moreDetails

ಮತಾಂತರ ನಿಷೇಧ ಕಾಯ್ದೆ ಎಂಬ ಪಾಲಿಟಿಕಲ್ ಗಿಮಿಕ್: ಆಕಸ್ಮಿಕ ಜಾರಿಗೆ ಬಂದರೆ ದಲಿತರೇ ಬಲಿಪಶು, ಮುಸ್ಲಿಮರಲ್ಲ!

ಕರ್ನಾಟಕ ಸರ್ಕಾರ ಈಗ ಮುಗಿದ ಅಧಿವೇಶನದಲ್ಲಿ ಪಾಲಿಟಿಕಲ್ ಗಿಮಿಕ್ ಎನ್ನಬಹುದಾದ ಎರಡು ವಿವಾದಾತ್ಮಕ ಮಸೂದೆಗಳನ್ನು ಮಂಡಿಸಿದೆ. ರಾಜ್ಯದ ಜನರ ಸಂಕಷ್ಟಗಳು ಮತ್ತು ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಜನರ ...

Read moreDetails

ರೈತರದ್ದು ಪ್ರಾಯೋಜಿತ ಪ್ರತಿಭಟನೆ ಎಂದ ಸಿಎಂ ಬೊಮ್ಮಾಯಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಮಸೂದೆ ವಿರುದ್ಧದ ರೈತರ ಪ್ರತಿಭಟನೆಯನ್ನು ಪ್ರಾಯೋಜಿತ ಪ್ರತಿಭಟನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರನ್ನು ಅವಮಾನಿಸದ್ದಾರೆ ...

Read moreDetails

ಅಕ್ರಮ ಒತ್ತುವರಿಯ ಧಾರ್ಮಿಕ ದೇವಸ್ಥಾನಗಳ ತೆರವು: ಬಿಜೆಪಿಯ ಕೋಮುವಾದವೂ, ಕಾಂಗ್ರೆಸ್‍ ಜೆಡಿಎಸ್‍ಗಳ ‘ಸಾಫ್ಟ್‌’ ಹಿಂದುತ್ವವೂ

ವೋಟುಗಳ ಬೇಟೆಯಲ್ಲಿ ಎಲ್ಲ ಪಕ್ಷಗಳು ಸಮಾನಮನಸ್ಕರರೇ? ಎಂಬ ಪ್ರಶ್ನೆ ಈಗ ಜನರನ್ನು ಕಾಡತೊಡಗಿದೆ. ಹೈಕೋರ್ಟ್‍, ಸುಪ್ರೀಂಕೋರ್ಟ್‍ಗಳ ಆದೇಶದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ, ಅದರಲ್ಲೂ ರಸ್ತೆಗೆ ಹೊಂದಿಕೊಂಡ ಜಾಗಗಳಲ್ಲಿ ...

Read moreDetails

ಟಾಂಗಾ ಜಾಥಾ: ಮಾನ ಮರ್ಯಾದೆ ಇಲ್ಲದ ಈ ಬಿಜೆಪಿ ಸರ್ಕಾರವನ್ನು ಜನರೇ ಕಿತ್ತೊಗೆಯಬೇಕು – ಡಿಕೆಶಿ

ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದರೂ ಸ್ಪಂದಿಸದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಟಾಂಗಾ ಜಾಥಾ ನಡೆಸುವ ಮೂಲಕ ಶುಕ್ರವಾರ ಪ್ರತಿಭಟಿಸಿದ್ದಾರೆ. ಈ ವೇಳೆ ಮಾತನಾಡಿದ ಕೆಪಿಸಿಸಿ ...

Read moreDetails
Page 15 of 20 1 14 15 16 20

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!