• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಣಂತಿಯರು, ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
December 13, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೆಳಗಾವಿ:ಬಾಣಂತಿ – ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ADVERTISEMENT

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಜೊತೆಗೂಡಿ ಶುಕ್ರವಾರ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗಿಂದು (ಬಿಮ್ಸ್) ಭೇಟಿ ನೀಡಿದ ಸಚಿವರು, ಈ ವೇಳೆ ವಿವಿಧ ಘಟಕಗಳಿಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದುಕೊಂಡರು.ಬಳಿಕ ನೂತನ ಕಟ್ಟಡಕ್ಕೂ ಸಚಿವರು ಭೇಟಿ ನೀಡಿದರು.

ಬಳಿಕ ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಸಭೆ ನಡೆಸಿ, ಕುಂದು‌ ಕೊರತೆಗಳ ಬಗ್ಗೆ ವಿಚಾರಿಸಿದರು. ಬಾಣಂತಿಯರು ಹಾಗೂ ಹಸಿಗೂಸುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಬಿಮ್ಸ್ ಗೆ ಉತ್ತಮ ಹೆಸರು ತರಲು ಎಲ್ಲರೂ ಪ್ರಯತ್ನಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು‌.

ಇದೇ ವೇಳೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮೂರು ದಿನದ ನವಜಾತ ಹೆಣ್ಣು ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಆರೂವರೆ ತಿಂಗಳ ಗರ್ಭಿಣಿ ಕಾಲು ಜಾರಿ ಬಿದ್ದಿದ್ದಾರೆ. ತೀವ್ರ ನೋವಿನ ಕಾರಣಕ್ಕೆ ಬೈಲಹೊಂಗಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್‌ಗೆ ಕರೆ ತರಲಾಗಿತ್ತು. ಮಗುವಿನ ಅಂಗಾಂಗ ಬೆಳವಣಿಗೆ ಆಗಿರಲಿಲ್ಲ, ಆದರೂ ಸಮರ್ಪಕ ಚಿಕಿತ್ಸೆ ನೀಡಲಾಗಿತ್ತು. ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿ ಬಿಟ್ಟು ತಾಯಿ ಪರಾರಿ ಆಗಿದ್ದು ದುರ್ದೈವ.ಈಗಾಗಲೇ ಎಫ್ಐಆರ್ ದಾಖಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Narendra Swamy on Muniratna: ಸದನದಿಂದ ವಾಕ್​ಔಟ್ ಮಾಡಿದ ವಿಪಕ್ಷ ನಾಯಕ ಅಶೋಕ್ ಮತ್ತು ಸದಸ್ಯರು #pratidhvani

ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ರಾಜು ಸೇಠ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್, ಬಿಮ್ಸ್ ನಿರ್ದೇಶಕರಾದ ಅಶೋಕ್ ಶೆಟ್ಟಿ, ಅಧೀಕ್ಷಕರಾದ ಡಾ.ವೀರಣ್ಣ ಪಲ್ಲೆದ್, ಮುಖ್ಯ ಆಡಳಿತಾಧಿಕಾರಿ ಸಿದ್ದು ಹುಲ್ಲಳ್ಳಿ, ಜಿಲ್ಲಾ ಸರ್ಜನ್ ಡಾ.ವಿಠಲ್ ಶಿಂಧೆ, ಶಿಲ್ಪಾ ವಾಲಿ, ಡಾ.ಸರೋಜ ತಗಡಿ, ಡಾ.ಉಮೇಶ್ ಕುಲಕರ್ಣಿ ‌ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Tags: (BIMS)Ashok ShettyBelagaviChief Administrative Officer Siddu HullalliCongress PartyDirector of BIMSDistrict Surgeon Dr. Vithal ShindeDr. Saroja TagadiMinister Lakshmi Hebbalkarminister sharan prakash patilMinisters visited BIMSMLA of Belgaum North ConstituencyMohammad Moseennewborns:Principal Secretary of Medical Education DepartmentRaju SethShilpa WaliSuperintendent Dr. Veeranna PalledTake extra care of the poor
Previous Post

ನಟ ದರ್ಶನ್‌, ಪವಿತ್ರಾ ಸೇರಿ 7 ಮಂದಿಗೆ ಜಾಮೀನು!

Next Post

ಈ ವಾರ ಬಿಗ್ ಮನೆಯಲ್ಲಿ ಜೋಡಿ ಕಳಪೆ – ಮನೆಯ ಕ್ಯಾಪ್ಟನ್ ಗೋಲ್ಡ್ ಸುರೇಶ್.!

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಈ ವಾರ ಬಿಗ್ ಮನೆಯಲ್ಲಿ ಜೋಡಿ ಕಳಪೆ – ಮನೆಯ ಕ್ಯಾಪ್ಟನ್ ಗೋಲ್ಡ್ ಸುರೇಶ್.!

ಈ ವಾರ ಬಿಗ್ ಮನೆಯಲ್ಲಿ ಜೋಡಿ ಕಳಪೆ - ಮನೆಯ ಕ್ಯಾಪ್ಟನ್ ಗೋಲ್ಡ್ ಸುರೇಶ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada