ಚೆನೈ : ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಪ್ರಕ್ರಿಯೆಗಳು ವಿಳಂಬವಾಗಿರುವ ಹಿನ್ನೆಲೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿಯಾಗಿದ್ದ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ರಾಜ್ಯಪಾಲರ ನಡೆಯನ್ನು ಟೀಕಿಸಿರುವ ಸ್ಟಾಲಿನ್, ನೂತನ ಸರ್ಕಾರ ರಚನೆಯಾಗುವುದು ಕೇವಲ ಸಮಯದ ವಿಷಯವಲ್ಲ, ಬದಲಿಗೆ ಪ್ರಜಾಪ್ರಭುತ್ವದ ಅತ್ಯಂತ ಮುಖ್ಯವಾದ ಕಾರ್ಯವೂ ಆಗಿದೆ! ಎಂದು ಚಾಟಿ ಬೀಸಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಚುನಾವಣಾ ಆಯೋಗವು ವಿಧಾನಸಭೆಗೆ ಆಯ್ಕೆಯಾದ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯಪಾಲರು ಅಸ್ತಿತ್ವದಲ್ಲಿರುವ ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವಿಧಾನಸಭೆಯ ಚುನಾಯಿತ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಕಲ್ಯಾಣವನ್ನು ಮುನ್ನಡೆಸುವಲ್ಲಿ ರಾಜ್ಯಪಾಲರು ಗಮನ ಹರಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ಪರಿಸ್ಥಿತಿಯಲ್ಲಿ, ಸರ್ಕಾರ ರಚನೆಯಲ್ಲಿ ಆಗುವ ವಿಳಂಬವನ್ನು ತಪ್ಪಿಸಲು, ದ್ರಾವಿಡ ಮುನ್ನೇತ್ರ ಕಳಗಂ ಸಿದ್ಧವಾಗಿದೆ, ಸಂವಿಧಾನದ ಪ್ರಕಾರ ನೂತನ ಸರ್ಕಾರ ರಚಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಲ್ಲಿ ಸ್ಟಾಲಿನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್! : ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್..!
234 ಸದಸ್ಯ ಬಲದ ತಮಿಳುನಾಡಿನ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ 107 ಸ್ಥಾನಗಳನ್ನು ಪಡೆಯುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರ್ಕಾರ ರಚನೆಯ ಕಸರತ್ತಿನಲ್ಲಿ ತೊಡಗಿದೆ. ಆದರೆ ಅಂತಿಮವಾಗಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್ ಸೇರಿದಂತೆ ಎಡಪಕ್ಷಗಳು ತಮ್ಮ ಬೆಂಬಲ ಸೂಚಿಸಿವೆ.






