• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶಾಂತಿ ಹಾಳು ಮಾಡುತ್ತಿರುವ VHP, ಭಜರಂಗದಳದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
March 31, 2022
in ಕರ್ನಾಟಕ
0
ಶಾಂತಿ ಹಾಳು ಮಾಡುತ್ತಿರುವ VHP, ಭಜರಂಗದಳದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಸಮಾಜದ ಶಾಂತಿ ಕದಡುತ್ತಿರುವ ಹಿಂದೂ ಪರಿಷತ್, ಭಜರಂಗದಳದ ಕೆಲ ಕಿಡಿಗೇಡಿಗಳು ನಿಜಕ್ಕೂ ಸಮಾಜಘಾತುಕರು. ದಿನ ಬೆಳಗಾದರೆ ಕರಪತ್ರಗಳನ್ನು ಹಂಚುತ್ತಾ ಜನರ ಮನಸ್ಸನ್ನು ಕೆಡಿಸುತ್ತಿರುವ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ADVERTISEMENT

ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಹಿಂಸೆ ಹಾಗೂ ಶಾಂತಿಗೆ ಭಂಗ ತರುತ್ತಿರುವ ಸಂಘಟನೆಗಳ ವಿರುದ್ಧ ಕಿಡಿಕಾರಿದರು. ದಿನ ಬೆಳಗಾದರೆ ತಹಸೀಲ್ದಾರ್ ಬಳಿ ಹೋಗಿ ಅರ್ಜಿ ಕೊಡೋದು, ಅಂಗಡಿಗಳಿಗೆ ಹೋಗಿ ಕರಪತ್ರ ಕೊಡೋದನ್ನು ಇವರು ಮಾಡುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಅನಾಹುತ ಉಂಟಾಗುತ್ತಿದೆ ಎಂದು ಅವರು ಹೇಳಿದರು.

ಹಿಂದೂ ಪರಿಷತ್, ಭಜರಂಗದಳದವರು ಕಿಡಿಗೇಡಿಗಳು, ಸಮಾಜಘಾತುಕರು. ಇವರಿಗೆ ರೈತರ ಬದುಕು ಗೊತ್ತಿದೆಯಾ? ನಮ್ಮ ರೈತರು ಕತ್ತರಿಸುವ ಮಾಂಸ ಸ್ವಚ್ಚ ಮಾಡಲು ಅದೇ ಸಮಾಜದವರೇ ಬರಬೇಕು. ಈಗ ಇವರು ಬಂದು ಹಲಾಲ್ ಕಟ್ – ಜಟ್ಕಾ ಕಟ್ ಅಂತಿದ್ದಾರೆ. ರೈತರಿಂದ ಮಾವು, ದ್ರಾಕ್ಷಿ, ರೇಷ್ಮೆ ಖರೀದಿ ಮಾಡಲಿಕ್ಕೆ ಈ ಪೋಲಿಗಳು ಬರುತ್ತಾರಾ? ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಅಕಾಲಿಕ ಮಳೆಯಿಂದಾಗಿ ಮಾವು ನಷ್ಟವಾಗಿದೆ. ರೈತರ ಕಷ್ಟ ಕಾಲಕ್ಕೆ ಇವರು ನೆರವಿಗೆ ಬರುತ್ತಾರಾ? ಬೆಳೆ ಖರೀದಿ ಮಾಡುತ್ತಾರ ಎಂದು ಪ್ರಶ್ನೆ ಮಾಡಿದ ಅವರು, ಇದಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದವರು ಬರುತ್ತಾರಾ? ಇವರ ಹೊಟ್ಟೆಪಾಡಿಗೆ, ದೇಶ ಹಾಳು ಮಾಡಲು ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ ಎಂದರು.

ಇಷ್ಟು ವರ್ಷ ಹಲಾಲ್ ತಿಂದಿದ್ದೇವೆ, ಏನಾಗಿದೆ ಚೆನ್ನಾಗಿದ್ದೀವಲ್ಲ. ಈಗ ಹಲಾಲ್ ತಿಂದರೆ ತೊಂದರೆ ಆಗುತ್ತದಾ? ನಮ್ಮ ದೇವರು ಮೆಚ್ಚಲ್ವ? ಹಲವಾರು ವರ್ಷಗಳಿಂದ ಹಲಾಲ್ ನಡೆಯುತ್ತಿದೆ, ಈಗಿನದ್ದಲ್ಲ. ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರು. ಆ ಸಂದರ್ಭವನ್ನು ಸರಕಾರ ಹೇಗೆ ನಿರ್ವಹಣೆ ಮಾಡಿತು ಎನ್ನುವುದನ್ನು ನಾವೆಲ್ಲ ನೋಡಿದ್ದೇವೆ. ಬಿಜೆಪಿ ಸರಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಅಗಲಿಲ್ಲ. ಆಗ ಎಲ್ಲಿದ್ದರು ವಿಶ್ವ ಹಿಂದೂ ಪರಿಷತ್ , ಭಜರಂಗದಳದವರು? ಎಂದು ಕುಮಾರಸ್ವಾಮಿ ಗುಡುಗಿದರು.

ಮುಖ್ಯಮಂತ್ರಿ ಮೌನ ಸರಿಯಲ್ಲ:

ರಾಜ್ಯದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಏನು ಗೊತ್ತಿಲ್ಲದಂತೆ ಸರಕಾರ ಮೌನವಾಗಿರಬಾರದು. ಮುಖ್ಯಮಂತ್ರಿಗಳ ಮೌನಕ್ಕೆ ಅರ್ಥ ಏನು? ಸಮಾಜ ಒಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ. ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಪಡಿಸಿದರು.

ಯಾವ ಸಂವಿಧಾನಕ್ಕೆ ಗೌರವಿಸುತ್ತಿದ್ದೀರಿ, ಯಾಕೆ ಅಂಬೇಡ್ಕರ್ ಜಯಂತಿ ಆಚರಿಸುತ್ತೀರಿ? ಅದೆಲ್ಲ ತವ ಪುರುಷಾರ್ಥಕ್ಕೆ? ಇಂಥದ್ದನ್ನು ನಡೆಯಲು ಬಿಟ್ಟು ಸಂವಿಧಾನ, ಅಂಬೇಡ್ಕರ್ ಅವರ ಹೆಸರು ಹೇಳಿದರೆ ಏನು ಪ್ರಯೋಜನ? ಎಂದ ಅವರು, ನನಗೆ ವೋಟ್ ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಬದುಕಬೇಕು. ಅದು ಮುಖ್ಯ ನನಗೆ. ನಾನು ಮೌನವಾಗಿರಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ನವರಿಗೆ ಮಾತನಾಡಲು ತಾಕತ್ತಿಲ್ಲ. ನಾನು ಸುಮ್ಮನಿರಲಾರೆ. ಹಿಂದೂಗಳು ವೋಟ್ ಹಾಕ್ತಾರೋ ಇಲ್ಲವೋ ಎಂಬ ಭಯ ನನಗಿಲ್ಲ. ಉತ್ತರ ಪ್ರದೇಶದಲ್ಲಿ ನಿಮ್ಮ ಆಟ ಆಡಿಕೊಳ್ಳಿ, ಇಲ್ಲಿ ಬೇಡ ಎಂದು ಪ್ರಚೋದನೆ ನೀಡುತ್ತಿರುವ ಸಂಘಟನೆಗಳಿಗೆ ಎಚ್ಚರಿಕೆ ನೀಡಿದರು ಅವರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಶಾಂತಿ ಹಾಳುಹೆಚ್.ಡಿ.ಕುಮಾರಸ್ವಾಮಿ
Previous Post

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಟಿಎಂಸಿ, ಬಿಜೆಪಿ ಶಾಸಕರ ನಡುವೆ ಮಾರಾಮಾರಿ!

Next Post

ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ: ಕೂಡಲೇ ಕ್ರಮಕೈಗೊಳ್ಳುವಂತೆ ಕಾಂಗ್ರೆಸ್‌ ಸಂಸದ ಜೆಸಿ ಚಂದ್ರಶೇಖರ್‌ ಆಗ್ರಹ

Related Posts

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
0

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ...

Read moreDetails
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ: ಕೂಡಲೇ ಕ್ರಮಕೈಗೊಳ್ಳುವಂತೆ ಕಾಂಗ್ರೆಸ್‌ ಸಂಸದ ಜೆಸಿ ಚಂದ್ರಶೇಖರ್‌ ಆಗ್ರಹ

ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ: ಕೂಡಲೇ ಕ್ರಮಕೈಗೊಳ್ಳುವಂತೆ ಕಾಂಗ್ರೆಸ್‌ ಸಂಸದ ಜೆಸಿ ಚಂದ್ರಶೇಖರ್‌ ಆಗ್ರಹ

Please login to join discussion

Recent News

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!