• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ

ಪ್ರತಿಧ್ವನಿ by ಪ್ರತಿಧ್ವನಿ
November 12, 2025
in Top Story, ಕರ್ನಾಟಕ, ರಾಜಕೀಯ
0
ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಡುವೆ ವಾಕ್ಸಮರ ಜೋರಾಗಿದೆ. ದೆಹಲಿ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಹೇಳಿಕೆ ನೀಡುವಾಗ ಸಂತೋಷ್‌ ಲಾಡ್‌ ಬಳಸಿದ ಪದ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಉಭಯ ಪಕ್ಷಗಳ ನಾಯಕರು ಒಬ್ಬರ ಹೇಳಿಕೆಗೆ ಇನ್ನೊಬ್ಬರು ತಿರುಗೇಟು ನೀಡುತ್ತಿದ್ದಾರೆ.

ಅಷ್ಟಕ್ಕೂ ಆಗಿದ್ದೇನು..?

ದೆಹಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಟೀಕಿಸುವ ಬರದಲ್ಲಿ ಸಚಿವ ಸಂತೋಷ್ ಲಾಡ್ ಅವರು ಜನರಿಗೆ ಟೀ ಕಾಫಿ ಕುಡಿಸುವ ಬದಲು *** ಕುಡಿಸಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಕಾಂಗ್ರೆಸ್‌ ಸಚಿವರ ಈ ಹೇಳಿಕೆಗೆ ತಿರುಗೇಟು ನೀಡಿದ ಬಿ.ವೈ ವಿಜಯೇಂದ್ರ, ಪದ ಸಂಸ್ಕೃತಿ ವ್ಯಕ್ತಿತ್ವದ ಮುಖಬಿಂಬ ಪ್ರತಿಬಿಂಬಿಸುತ್ತದೆ. ಪದ ಸಂಸ್ಕೃತಿಯನ್ನು ಮರೆತ ಸಚಿವ ಸಂತೋಷ್ ಲಾಡ್ ಅವರು ತಮ್ಮ ಕೀಳು ಮಟ್ಟದ ವ್ಯಕ್ತಿತ್ವವನ್ನು ಅನಾವರಣ ಮಾಡಿಕೊಂಡಿದ್ದಾರೆ.

ಸಂತೋಷ್ ಲಾಡ್ ಅವರ ಎಲುಬಿಲ್ಲದ ನಾಲಿಗೆಯಲ್ಲಿ ಹೊಲಸು ಮಾತುಗಳು ಹೊಮ್ಮತ್ತಿದೆ. ಕೀಳುಮಟ್ಟದ ಪದ ಬಳಸುವ ಮೂಲಕ ಕನ್ನಡದ ಪದ ಸಂಸ್ಕೃತಿಯನ್ನು ಮಲಿನಗೊಳಿಸಿದ್ದಾರೆ. ಕನ್ನಡಿಗರ ಸಂಸ್ಕಾರ ನಡವಳಿಕೆಯನ್ನು ಅವಮಾನಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ತಮ್ಮ ಸರ್ಕಾರದ ಘನತೆಯ ಕುರಿತು ಕನಿಷ್ಠ ಬದ್ಧತೆಯಿದ್ದರೆ ಈ ಕೂಡಲೇ ಸಚಿವ ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ವಜಾಗೊಳಿಸುವ ಮೂಲಕ ರಾಜ್ಯದ ಗೌರವ ಉಳಿಸಬೇಕು ಎಂದು ಆಗ್ರಹಿಸಿದ್ದರು.

DelhiRedFortBlast: ರೋಚಕ ತಿರುವು ಪಡೆದ ದೆಹಲಿ ಕಾರು ಸ್ಫೋಟ ಪ್ರಕರಣ..! #DelhiCarBlast #DelhiCarExplosion

ಇದಕ್ಕೆ ತಿರುಗೇಟು ನೀಡಿರುವ ಸಚಿವ ಲಾಡ್‌ ಅವರು, ನಿಮ್ಮ ಮನೆಯ ಮಕ್ಕಳನ್ನೆಲ್ಲ ಸುಖದ ಸುಪ್ಪತ್ತಿಗೆಯಲ್ಲಿಡುತ್ತೀರಿ. ಆದರೆ ಬಡವರ ಮನೆಯ ಮಕ್ಕಳ ತಲೆಯಲ್ಲಿ ಧರ್ಮದ ವಿಷಬೀಜ ಬಿತ್ತಿ, ಬೀದಿಗೆ ಬಿಟ್ಟು ಬಲಿ ಹಾಕುತ್ತೀರಿ. ಮಾತು ಎತ್ತಿದರೆ ದೇಶ, ಧರ್ಮ, ಸಂಸ್ಕೃತಿ ಎನ್ನುತ್ತೀರಿ, ಆದರೆ ಅದೇ ಧರ್ಮದ ಹೆಸರಲ್ಲಿ ದೇಶದ ಜನರ ಭಾವನೆಗಳೊಂದಿಗೆ ಆಟವಾಡಿ, ದಾರಿ ತಪ್ಪಿಸುತ್ತೀರಿ ಎಂದು ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ.

ಇನ್ನು ದೆಹಲಿ ಸ್ಫೋಟದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಚಿವ ಸಂತೋಷ್‌ ಲಾಡ್‌, ಘನತೆ, ಯೋಗ್ಯತೆ, ಆಚಾರ-ವಿಚಾರ, ಪದ ಸಂಸ್ಕೃತಿ, ಶಿಸ್ತು ಅಂತೆಲ್ಲ ದೊಡ್ಡ ದೊಡ್ಡ ಪದಗಳನ್ನಾಡುತ್ತೀರಿ, ಆದರೆ ಯಾವಾಗಲೂ ನೀಚ, ಚಿಲ್ಲರೆ ರಾಜಕೀಯವನ್ನೇ ನೀವು ಮಾಡುತ್ತಾ ಬಂದಿದ್ದೀರಿ. ನೀವು ಮತ್ತು ನಿಮ್ಮ‌ ಪಕ್ಷ ಮಾಡಿದ್ದನ್ನೇ ನಾನು ನೇರವಾಗಿ ಹೇಳಿದರೆ, ನನ್ನ ಮಾತಿನಲ್ಲಿ ಸಭ್ಯತೆ ಹುಡುಕುತ್ತೀರಿ, ಆದರೆ ನಿಮ್ಮದೇ ವ್ಯಕ್ತಿತ್ವದಲ್ಲಿ ಇಷ್ಟೆಲ್ಲ ವಿಷವಿಟ್ಟುಕೊಂಡಿದ್ದೀರಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಮಾತು ಮುಂದುವರಿಸಿದ ಅವರು, ನಿಮ್ಮ ಅಂತರಂಗದ ನೀಚತನಕ್ಕೂ, ಬಹಿರಂಗದ ಸಾಚಾತನಕ್ಕೂ ಒಂದಕ್ಕೊಂದು ಸಂಬಂಧವಿಲ್ಲ, ನಿಮಗಾಗಲಿ, ನಿಮ್ಮ ಪಕ್ಷಕ್ಕಾಗಲಿ ಸಮಾಜದಲ್ಲಿ ದ್ವೇಷ ಬಿತ್ತುವುದನ್ನು ಬಿಟ್ಟು ಬೇರೆ ಏನೂ ಗೊತ್ತೂ ಇಲ್ಲ. ಇಷ್ಟರ ಹೊರತು ನಿಮ್ಮ ಬಗ್ಗೆ ನನಗ್ಯಾವ ಅಭಿಪ್ರಾಯವೂ ಉಳಿದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

C M Siddaramaiah  : ಸಿದ್ದರಾಮಯ್ಯನ ಇಂಗ್ಲೀಷ್‌ ಭಾಷಣ #pratidhvani
Tags: BJPBY VijayendracongressKarnataka PoliticsPoliticssanthosh lad
Previous Post

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

Next Post

ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada