• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

ವರುಣನ ಅಬ್ಬರಕ್ಕೆ ಬೀದಿಗೆ ಬಂದ ಬಡ ಕುಟುಂಬಗಳು : ಪರಿಹಾರಕ್ಕಾಗಿ ಜಿಲ್ಲಾಡಳಿತಕ್ಕೆ ಮನವಿ..

ಪ್ರತಿಧ್ವನಿ by ಪ್ರತಿಧ್ವನಿ
July 5, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
Rain Damage

Rain Damage

Share on WhatsAppShare on FacebookShare on Telegram

ಬೆಳಗಾವಿ : ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಒಂದೊಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಈಗಾಗಲೇ ನಗರದ ವಿವಿಧ ಭಾಗಗಳು ಮಳೆಯ ನೀರಿನಿಂದ ಜಲಾವೃತವಾಗಿದ್ದಲ್ಲದೆ, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆಯೇ ನಗರದ ಖಾಸ್‌ಬಾಗ್‌ ಪ್ರದೇಶದಲ್ಲಿ ನಿರಂತರ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ಬೃಹತ್ ಹುಣಸೆ ಮರ ಬಿದ್ದು ನಾಲ್ಕು ಮನೆಗಳಿಗೆ ಅಪಾರ ಹಾನಿಯಾಗಿರುವ ಘಟನೆ ನಡೆದಿದೆ.

ADVERTISEMENT
Karnataka SIR Row : SIR ಲೋಪ ಎತ್ತಿದ ದೋಸ್ತಿ ನಾಯಕರು #pratidhvani #sir #eci #hdkumaraswamy #byvijayendra

ನಿರಂತರ ಮಳೆಯ ಹಿನ್ನೆಲೆಯಲ್ಲಿ ಹಳೆಯ ಮರದ ಬೇರಿಗೆ ನೀರು ತಗುಲಿ ಸುತ್ತಮುತ್ತಲೂ ಜವಳು ಪ್ರದೇಶ ನಿರ್ಮಾಣವಾಗಿದ್ದರಿಂದ ಬೃಹತ್‌ ಪ್ರಮಾಣದ ಮರ ಬಿದ್ದಿದೆ. ಇದರ ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು, ನಾಲ್ಕು ಮನೆಯ ಸದಸ್ಯರು ಸ್ಪಲ್ಪದಲ್ಲೇ ಬಚಾವಾಗಿದ್ದಾರೆ. ಖಾಸ್‌ಬಾಗ್‌ನ ಉಪ್ಪಾರ ಗಲಿಯಲ್ಲಿ ನಡೆದಿರುವ ಈ ಅವಾಂತರಕ್ಕೆ ಸ್ಥಳೀಯರು ಶಾಕ್‌ಗೆ ಒಳಗಾಗಿದ್ದಾರೆ. ಬೆಳಗಿನ ಜಾವ ಎಂದಿನಂತೆ ಮರದ ಕೆಳಗೆ ದಿನನಿತ್ಯದ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮರ ಬೀಳುವ ಲಕ್ಷಣ ಕಂಡು ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ : ಖಾಮಿನೈ ಅಂತ್ಯಸಂಸ್ಕಾರದಲ್ಲೇ ಇರಾನ್ ಸೇನಾ ಮುಖ್ಯಸ್ಥ ಅಮೀರ್ ಹಟಾಮಿ ಪ್ರತಿಜ್ಞೆ! ಜಗತ್ತಿಗೆ ಇರಾನ್‌ನಿಂದ ಮತ್ತೊಂದು ಎಚ್ಚರಿಕೆ!

ಘಟನೆಯ ವೇಳೆ ಮನೆಯಲ್ಲಿದ್ದ ಕೆಲ ಅಗತ್ಯ ವಸ್ತುಗಳು ನಾಶವಾಗಿದ್ದು, ಬಡ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ. ಸದ್ಯ ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವ ಸಂತ್ರಸ್ತ ಕುಟುಂಬಸ್ಥರು ಸರ್ಕಾರ ಹಾಗೂ ಅಧಿಕಾರಿಗಳು ತಮಗೆ ಸೂಕ್ತ ಪರಿಹಾರ ನೀಡಬೇಕೆಂದು ಕಣ್ಣೀರಿಡುತ್ತಾ ಮನವಿ ಮಾಡಿದ್ದಾರೆ.

ಮರ ಬಿದ್ದ ರಭಸಕ್ಕೆ ಇಲ್ಲಿನ ನಿವಾಸಿ ಅನಿಲ್ ಮುಟ್ಕೇಕರ್ ಮನೆಯ ಗೋಡೆ ಕುಸಿದಿದ್ದು, ಆನಂದ್ ಭದ್ವಾಂಕರ್, ಏಕನಾಥ್ ಭದ್ವಾಂಕರ್, ಪ್ರಶಾಂತ್ ಗೋರ್ಲೆ ಮನೆಗಳ ಮುಂಭಾಕ್ಕೆ ಹಾನಿಯುಂಟಾಗಿದೆ. ನಗರದ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ಸ್ಥಳಕ್ಕೆ ದೌಡಾಯಿಸಿ ಧರೆಗುರುಳಿರುವ ಬೃಹತ್ ಮರವನ್ನು ಕತ್ತರಿಸಿ ರಸ್ತೆಯಿಂದ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ.

Tags: Belagavi newsRain
Previous Post

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

Next Post

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

Related Posts

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?
Top Story

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

by ಪ್ರತಿಧ್ವನಿ
July 5, 2026
0

ಬೆಳಗಾವಿ: ಆರ್‌ಎಸ್‌ಎಸ್‌ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಪರೋಕ್ಷವಾಗಿ...

Read moreDetails
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
ಪೊಲೀಸ್ ಇಲಾಖೆ-ಮಾಧ್ಯಮಗಳಿಗೆ ಹೊಸ ನಿಯಮ: ಅನುಮತಿ ಇಲ್ಲದೆ ಮಾಹಿತಿ ಹಂಚಿದರೆ ಕ್ರಮ

ಪೊಲೀಸ್ ಇಲಾಖೆ-ಮಾಧ್ಯಮಗಳಿಗೆ ಹೊಸ ನಿಯಮ: ಅನುಮತಿ ಇಲ್ಲದೆ ಮಾಹಿತಿ ಹಂಚಿದರೆ ಕ್ರಮ

July 4, 2026
‘ಗ್ರಾಮಾಯಣ’ ಚಿತ್ರಕ್ಕೆ ಕಾನೂನು ಸಂಕಷ್ಟ: ಲಹರಿ ವೇಲು ಸ್ಪಷ್ಟನೆ ಇಲ್ಲಿದೆ

‘ಗ್ರಾಮಾಯಣ’ ಚಿತ್ರಕ್ಕೆ ಕಾನೂನು ಸಂಕಷ್ಟ: ಲಹರಿ ವೇಲು ಸ್ಪಷ್ಟನೆ ಇಲ್ಲಿದೆ

July 4, 2026
Next Post
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!