ಖ್ಯಾತ ತಮಿಳು ನಟಿ ಚೆನ್ನೈನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ನಟಿ ದೀಪಾ ಆಕಾ ಪಾಲಿನ್ ಜೆಸ್ಸಿಕಾ(29)ಭಾನುವಾರ ಚೆನ್ನೈನ ವೀರುಗಾಂಬಿಕಾಂ ನಗರದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ದುಪ್ಪಟ್ಟದಿಂದ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ನಟಿಯ ಶವಪತ್ತೆಯಾಗಿದೆ.
ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ದೀಪಾ ನಾಸಿರ್ ಮುಖ್ಯಪಾತ್ರದಲ್ಲಿದ್ದ ‘ವೈದಾ‘ ಸಿನಿಮಾದಲ್ಲಿ ನಾಯಕಿಯಾಗಿದ್ದರು. ‘ಥುಪ್ಪಾರುವಿಲನ್‘ಸೇರಿದಂತೆ ಕೆಲ ಚಿತ್ರಗಳಲ್ಲಿ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ್ದರು.
ವಿರುಗಂಬಾಕ್ಕಂನಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ದೀಪಾ ಏಕಾಂಗಿಯಾಗಿ ವಾಸಿಸುತ್ದಿದ್ದರು ಎನ್ನಲಾಗಿದೆ. ಭಾನುವಾರ ಮಧ್ಯಾಹ್ನ ತಮ್ಮ ಕೋಣೆಯಲ್ಲಿ ದುಪ್ಪಟ್ಟಾದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯವರು ನಿರಂತರವಾಗಿ ಕರೆ ಮಾಡಿದರೂ ಸ್ವೀಕರಿಸದೇ ಇದ್ದುದ್ದರಿಂದ ಗಾಬರಿಗೊಂಡು ಸ್ನೇಹಿತೆ ಬಳಿ ವಿಚಾರಿಸಿದ್ದಾರೆ. ಆಕೆ ದೀಪಾ ಇರುವ ಫ್ಲಾಟ್‌ಗೆ ಹೋಗಿ ನೋಡಿದ್ದಾರೆ. ಈ ವೇಳೆ ಕೋಣೆಯಲ್ಲಿ ದೀಪಾ ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಬೆಳಕಿಗೆ ಬಂದಿದೆ. ನಟಿ ದೀಪಾ ಹಲವು ವರ್ಷಗಳಿಂದ ಮನೆಯವರಿಂದ ದೂರವಿದ್ದು, ಒಬ್ಬರೇ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಅಲ್ಲದೇ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರವೂ ಬಹುದು ಅಂತ ಶಂಕಿಸಲಾಗಿದೆ.