ತಮಿಳುನಾಡಿಗೆ ಈಗಲೂ ಕದ್ದುಮುಚ್ವಿ ನೀರನ್ನು ಹರಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪವನ್ನು ಮಾಡಿದ್ದಾರೆ, ಈ ಕುರಿತು ಮಾತನಾಡಿದ ಅವರು, ʼʼಈಗಲೂ ಡ್ಯಾಂಗೆ ಹೋಗಿ ನೋಡಿ, ಹೊರಹರಿವು ಪ್ರಮಾಣ ಪರೀಕ್ಷೆ ಮಾಡಿ, ಈ ವಿಚಾರವಾಗಿ ನಾನು ಚಾಲೆಂಜ್ ಮಾಡುತ್ತೇನೆ, ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ, ಸೆ.13 ರಿಂದ ನೀರು ಹರಿಸಲಾಗುತ್ತಿದೆ, ನಾವು ಈ ವಿಚಾರವಾಗಿ ಹೋರಾಟ ಮಾಡುತ್ತೇವೆ, ಹೇಮಾವತಿ ಡ್ಯಾಂ ನಲ್ಲಿ 12 ಟಿಎಂಸಿ ಇದೆ, ಹಾರಂಗಿ, ಕಬಿನಿ ಡ್ಯಾಂಗಳು ಬರಿದಾಗಿದೆ, ಈಗಿರುವ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕು ನೀರು ಕೊಡಬಾರದು, ಕುಡಿಯುವ ನೀರಿನ ಉದ್ದೇಶಕ್ಕೆ ನೀರನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕುʼʼ

ಸರ್ವ ಪಕ್ಷ ಸಭೆಗೆ ಪ್ರಧಾನಿ ಟೈಮ್ ಕೊಡುತ್ತಿಲ್ಲ ಎಂಬ ಕಾಂಗ್ರೆಸ್ ಹೇಳಿಕೆ ವಿಚಾರಕ್ಕೆ ಸಂಬಂಧ ಪಟ್ಟ ಹಾಗೆ ಪ್ರತಿಕ್ರಿಯೆ ನೀಡಿದ ಅವರು, ʼʼಒಬ್ಬ ಜನ ಪ್ರತಿನಿಧಿಗೆ ಸಾಮಾನ್ಯ ಜ್ಞಾನ ಇರಬೇಕು, ಮೋದಿ ಅಲ್ಲ ಮನಮೋಹನ್ ಸಿಂಗ್ ಬಂದರು ಈ ವಿಚಾರದಲ್ಲಿ ಏನು ಮಾಡೋಕಾಗಲ್ಲ, ಕಾವೇರಿ ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಡಿಸೈಡ್ ಆಗ್ಬೇಕು, ಸಿದ್ದರಾಮಯ್ಯ ಅವ್ರು ಮೋದಿ ಬದಲು ಸ್ಟಾಲಿನ್ ಅವರಿಗೆ ಕರೆ ಮಾಡಲಿ, ನೀರು ಬಿಡೋದಕ್ಕೆ ಆಗಲ್ಲ ಎಂದು ಹೇಳಲಿ, ಇವರಿಗೆ ಲೋಕಸಭಾ ಚುನಾವಣೆ ಮುಖ್ಯನಾ ರಾಜ್ಯದ ಜನರ ಹಿತಸಾಕ್ತಿ ಮುಖ್ಯನಾ, ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ಅದ್ದೂರಿ ದಸರಾ ವಿಚಾರಕ್ಕೆ ಸಂಬಂಧ ಪಟ್ಟ ಹಾಗೆ ಪ್ರತಿಕ್ರಿಯೆ ನೀಡಿದ ಅವರು, ʼʼಅದ್ದೂರಿ ಸರಳ ದಸರಾ ಚರ್ಚೆಯಲ್ಲಿ ನಾನಿಲ್ಲ, ಸಾಂಪ್ರದಾಯಕವಾಗಿ ದಸರಾ ಮಾಡಲಿ, ದಸರಾ ಮಾಡುವಾಗ ಒಂದಷ್ಟು ಹಣ ಖರ್ಚಾಗುತ್ತದೆ, ಅಂದ ಮಾತ್ರಕ್ಕೆ ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯ ಮುರಿಯುವುದು ಬೇಡ, ದಸರಾ ಅಂದ್ರೆ ಜಂಬೂಸವಾರಿ, ದೀಪಾಲಂಕಾರ, ಕ್ರೀಡೆ ಗೋಷ್ಠಿ ಇರುತ್ತದೆ,ಇದಕ್ಕೆಲ್ಲ ಖರ್ಚು ಆಗೇ ಆಗುತ್ತದೆ, ಬರ ಎಂದು ಸಂಪ್ರದಾಯ ಮುರಿಯುವುದು ಬೇಡ ಎಂದು ಹೇಳಿಕೆ ನೀಡಿದ್ದಾರೆ.