• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ದಕ್ಷಿಣ ಭಾರತದ ರಾಜ್ಯಗಳ ಹಕ್ಕು ಉಳಿಸುವ ಸವಾಲು ನಮ್ಮ ಮುಂದಿದೆ : ಡಿಕೆ ಶಿವಕುಮಾರ್..

ಪ್ರತಿಧ್ವನಿ by ಪ್ರತಿಧ್ವನಿ
April 21, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌
Share on WhatsAppShare on FacebookShare on Telegram

ಕೃಷ್ಣಗಿರಿ : ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ. ಇದನ್ನು ಅರಿತೇ ಪನ್ನೀರ್‌ ಸೆಲ್ವಂ ಡಿಎಂಕೆ ಸೇರಿದ್ದಾರೆ ಎಂದು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.‌

ADVERTISEMENT
Zameer Ahmed: ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರೆ ದಾಖಲೆ ಕೊಡಬೇಕಲ್ವಾ? ಜಮೀರ್ ಪ್ರಶ್ನೆ! #pratidhvani

ತಮಿಳುನಾಡಿನ ಕೃಷ್ಣಗಿರಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚೆಲ್ಲಕುಮಾರ್ ಪರ ಕೆಪಿಸಿಸಿ ರೋಡ್ ಶೋ ನಡೆಸಿ, ಪ್ರಚಾರ ಭಾಷಣ ಮಾಡಿ, ಅಣ್ಣಾಮಲೈಗೆ ಬಿಜೆಪಿಯವರು ಟಿಕೆಟ್‌ ಕೊಡಲಿಲ್ಲ. ಇನ್ನು ಅಣ್ಣಾ ಡಿಎಂಕೆಯನ್ನು ಅವರು ಬಿಡುತ್ತಾರೆಯೇ? ಬಿಹಾರದಲ್ಲಿ ನಿತೀಶ್‌ ಕುಮಾರ್‌ ಅವರನ್ನು ಬಲಿ ಪಡೆದು ಬಿಜೆಪಿಯವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಈ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಪಕ್ಷ ಕಾಂಗ್ರೆಸ್‌. ಈ ದೇಶದ ಉಸಿರಿನಲ್ಲಿ ಕಾಂಗ್ರೆಸ್‌ ಪಕ್ಷವಿದೆ, ಅಭಿವೃದ್ದಿ ಸೇರಿದಂತೆ ಪ್ರತಿಯೊಂದು ವಿಚಾರದಲ್ಲೂ ಕಾಂಗ್ರೆಸ್‌ ಪಕ್ಷ ತನ್ನ ತ್ಯಾಗ ಬಲಿದಾನದಿಂದ ಈ ದೇಶವನ್ನು ತಳಮಟ್ಟದಿಂದ ಕಟ್ಟಿದೆ ಎಂದು ತಿಳಿಸಿದ್ದಾರೆ.

ತಮಿಳು, ಕನ್ನಡ, ತೆಲುಗು, ಮಲೆಯಾಳಂ ಸೇರಿದಂತೆ ಅನೇಕ ವೈವಿದ್ಯತೆಯನ್ನು ದಕ್ಷಿಣ ಭಾರತ ಹೊಂದಿದೆ. ನಮ್ಮ ದಕ್ಷಿಣ ಭಾರತದ ಅಸ್ಮಿತೆ ಉಳಿಸುವ ತುರ್ತು ಈ ದೇಶದಲ್ಲಿ ನಮ್ಮ ಮುಂದೆ ಎದುರಾಗಿದೆ. ಇದಕ್ಕಾಗಿ ನೀವು ಡಿಎಂಕೆ, ಕಾಂಗ್ರೆಸ್‌, ಮಿತ್ರಪಕ್ಷಗಳಿಗೆ ಜನ ಆಶೀರ್ವಾದ ಮಾಡಬೇಕು. ನಮ್ಮ ಪಾಲಿನ ತೆರಿಗೆ ಹಣವನ್ನು ಲೂಟಿ ಮಾಡಲಾಗುತ್ತಿದೆ. ಇದಕ್ಕೆ ನ್ಯಾಯ ಒದಗಿಸಬೇಕು. ಇಡೀ ದೇಶ ನಮ್ಮ ಕಡೆ ನೋಡುತ್ತಿದೆ. ನಾವು ನ್ಯಾಯ, ಸತ್ಯದ ಪರವಾಗಿದ್ದೇವೆ ಎಂದು ಇಡೀ ದೇಶಕ್ಕೆ ಸಂದೇಶ ನೀಡಬೇಕು. ತಮಿಳುನಾಡಿನ ಅಸ್ತಿತ್ವ, ಸ್ವಾತಂತ್ರ್ಯ ನಿಮ್ಮ ಅಸ್ಮಿತೆಯನ್ನು ಉಳಿಸಲು ಸ್ಟಾಲಿನ್‌ ಅವರು ಬಿಜೆಪಿ ಹಾಗೂ ಮೋದಿಯವರ ವಿರುದ್ಧ 20 ಮಿತ್ರ ಪಕ್ಷಗಳನ್ನು ಕಟ್ಟಿಕೊಂಡು ಹೋರಾಡುತ್ತಿದ್ದಾರೆ ಎಂದು ಸ್ಟಾಲಿನ್‌ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ : ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಸ್ಟಾಲಿನ್‌ ಅವರ ನೇತೃತ್ವದಲ್ಲಿ ಮತ್ತೊಮ್ಮೆ ಡಿಎಂಕೆ ಮೈತ್ರಿಕೂಟ ಅಧಿಕಾರಕ್ಕೆ..

ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರು ಎಲ್ಲರೂ ನಮ್ಮ ಬದುಕಿಗೆ ಶಕ್ತಿಯಾಗಿ ನಿಂತ ಡಿಎಂಕೆ, ಕಾಂಗ್ರೆಸ್‌ ಮೈತ್ರಿಕೂಟಕ್ಕೆ ಮತ ಚಲಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಮತ್ತೊಮ್ಮೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಅನೇಕ ಜನಕಲ್ಯಾಣ ಯೋಜನೆಗಳನ್ನು ಈ ಹಿಂದೆ ಜಾರಿಗೆ ತರಲಾಗಿತ್ತು. ಅದರಂತೆ ನಾವು ಸಹ ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಕ್ರಾಂತಿ ಮಾಡಿದ್ದೇವೆ. ಮಹಿಳೆಯರಿಗೆ ಉಚಿತ ಬಸ್‌, ತಿಂಗಳಿಗೆ ಎರಡು ಸಾವಿರ, ಯುವಕರಿಗೆ ಪ್ರೋತ್ಸಾಹ ಧನ, ಉಚಿತ ವಿದ್ಯುತ್‌ ನೀಡುತ್ತಿದ್ದೇವೆ. 1.36 ಕೋಟಿ ಮಹಿಳೆಯರಿಗೆ ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ 2 ಸಾವಿರ ಹಣ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Basangouda Patil Yatnal : ಬದಲಾವಣೆ ಗಾಳಿ ಬೀಸ್ತಿದೆ ಇನ್ಮೇಲೆ Mahatma Gandhi, ನೆಹರು ಯುಗ ದೇಶದಲ್ಲಿ ಮುಗಿತು

ಕಾಂಗ್ರೆಸ್‌, ಡಿಎಂಕೆ ಪಕ್ಷ ಜನರ ಸ್ವಾಭಿಮಾನ ಉಳಿಸಲು ಬದ್ದವಾಗಿವೆ. ಅತಿ ಹೆಚ್ಚು ತೆರಿಗೆ ನೀಡುವ ನಮ್ಮನ್ನು ಕಡೆಗಣಿಸಲಾಗಿದೆ. ಲೋಕಸಭಾ ಕ್ಷೇತ್ರಗಳನ್ನು ಕಡಿಮೆ ಮಾಡುವ ಹುನ್ನಾರ ಮಾಡಲಾಗುತ್ತಿದೆ. ಈ ಸಂಚಿನ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಜನರೂ ಸಹ ಇದಕ್ಕೆ ಕೈ ಜೋಡಿಸಬೇಕು. ಹಿಂದೂ ಧರ್ಮದಲ್ಲಿ ಕೃಷ್ಣನಿಗೆ ಮಹತ್ವದ ಸ್ಥಾನವಿದೆ. ಕೃಷ್ಣ ಎಲ್ಲಾ ರಂಗದಲ್ಲೂ ಚಾಣಾಕ್ಷ. ಇಂತಹ ಕೃಷ್ಣನ ಹೆಸರನ್ನು ಹೊಂದಿರುವ ಕ್ಷೇತ್ರ ಕಾಂಗ್ರೆಸ್‌ ಪಕ್ಷದ ಪಾಲಿಗೆ ವರವಿದ್ದಂತೆ. ದೇವರು ಕೊಟ್ಟ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಡಿಕೆ ಶಿವಕುಮಾರ್‌ ಮತದಾರರಿಗೆ ಕರೆ ನೀಡಿದ್ದಾರೆ.

ಪಕ್ಷದ ಹಿರಿಯ ಕಾರ್ಯಕರ್ತ ಚೆಲ್ಲಕುಮಾರ್‌ ಅವರು ಸಂಸದರಾಗಿ ನಿಮ್ಮ ಸೇವೆ ಮಾಡಿದ್ದವರು. ಈಗ ಶಾಸಕರಾಗಿ ನಿಮ್ಮ ಸೇವೆಗೆ ಅವಕಾಶ ಕೇಳುತ್ತಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್‌ ಅವರಿಗೆ ಈ ಸ್ಥಾನವನ್ನು ಚೆಲ್ಲಕುಮಾರ್‌ ಅವರು ಸ್ಪರ್ಧಿಸಲು ಅವಕಾಶ ನೀಡಿದ್ದಕ್ಕೆ ಕೋಟಿ ಕೋಟಿ ವಂದನೆಗಳನ್ನು ತಿಳಿಸುತ್ತೇನೆ. ಇಂತಹ ಅನುಭವಿ, ದಕ್ಷ ಅಭ್ಯರ್ಥಿ ಬೇರೆ ಯಾವುದೇ ಪಕ್ಷದಿಂದಲೂ ಸಿಗಲು ಸಾಧ್ಯವಿಲ್ಲ. ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಅವರು ನಿಮ್ಮ ಮಡಿಲಿಗೆ ಹಾಕಿದ್ದಾರೆ ಎಂದು ಭಾವನಾತ್ಮಕವಾಗಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಸಿನಿಮಾ ಡೈಲಾಗ್ ತೆರೆ ಮೇಲೆ ನೋಡಲು ಚೆಂದ..

ಕೆಲವರು ಸಿನಿಮಾ ಡೈಲಾಗ್ ಹೊಡೆದು ಎಂಜಿಆರ್ ರೀತಿ ಗೆಲ್ಲಬಹುದು ಎಂದು ಭಾವಿಸಿದ್ದಾರೆ. ಸಿನಿಮಾ ಡೈಲಾಗ್ ತೆರೆ ಮೇಲೆ ನೋಡಲು ಚೆಂದ. ವಾಸ್ತವದಲ್ಲಿ ಅವು ಕಾರ್ಯಗತವಾಗುವುದಿಲ್ಲ. ಜನರ ಬದುಕಿಗೆ ಬದಲಾವಣೆ ತರಲು ಜನಪರ ಕಾರ್ಯಕ್ರಮ ತರುವ ಸರ್ಕಾರ ಬರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಟಿವಿಕೆಯ ಥಳಪತಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Tags: A Chellakumarcongress karnatakaDMKguarantee schemesindia blocKrishnagiriMallikarjun KhargeO Paneer SelvamPratidhvaniRahul GandhiShakti YojanaTamilnadu Assembly ElectionTamilnadu CongressThalapthy VijayTVKVoters
Previous Post

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

Next Post

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

Related Posts

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?
Top Story

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

by ಪ್ರತಿಧ್ವನಿ
August 28, 2026
0

ರಿಯಲ್ ಸ್ಟಾರ್ ಉಪೇಂದ್ರ ಅವರು ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ...

Read moreDetails
‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

August 28, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada