ರಾಜ್ಯದಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು ಹೆಚ್ಚುತ್ತಲೇ ಇದೆ. ಇತ್ತ ಸರಿಯಾದ ಮಳೆ ಇಲ್ಲದೇ ರಾಜ್ಯ ಭೀಕರ ಬರ ಎದುಸುತ್ತಿರೊ ಹೊತ್ತಿನಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಆಘಾತಕಾರಿ ಆದೇಶವನ್ನು ನೀಡಿದೆ. ಮುಂದಿನ 15 ದಿನಗಳ ಕಾಲ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸೂಚನೆ ನೀಡಲಾಗಿದೆ.
ಮುಂದಿನ 15 ದಿನಗಳ ಕಾಲ ಪ್ರತಿದಿನ 2,600 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಅಕ್ಟೋಬರ್ ಅಂತ್ಯದವರೆಗೂ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿತ್ತು. ಇದೀಗ ಅವಧಿ ಮುಕ್ತಾಯದ ಬಳಿಕ 2,600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.
ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಸದ್ಯಕ್ಕೆ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಹೇಳಿದ್ದಾರೆ. ಕಾವೇರಿ ನೀರಿಗಾಗಿ ಕರ್ನಾಟಕದಲ್ಲಿ ಸಾಕಷ್ಟು ಹೋರಾಟಗಳು ನಡೆಯುತ್ತಿವೆ. ಇತ್ತಿಚೆಗಷ್ಟೇ ಕಾವೇರಿ ಹೋರಾಟಗಾರರು ಐವತ್ತು ದಿನದ ಕರಾಳ ದಿನವನ್ನು ಆಚರಣೆ ಮಾಡಿದ್ದಾರೆ. ಈಗಲೂ ಕಾವೇರಿಗಾಗಿ ಹೋರಾಟ ಮುಂದುವರೆದಿದೆ ಎಂದು ಹೇಳಿದ್ದಾರೆ.
ಕರ್ನಾಟಕದಿಂದ ನಿಜವಾದ ಪರಿಸ್ಥಿತಿಯನ್ನು ಅರ್ಥ ಮಾಡಿಸುವುದಕ್ಕೆ ಪ್ರಯತ್ನ ಪಟ್ಟರು, ಅದು ವ್ಯರ್ಥವಾಗುತ್ತಿದೆ.