ಗುಜರಾತ್: ಮಗಳ ಆಕ್ಷೇಪಾರ್ಹ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಬಿಎಸ್ ಎಫ್ ಯೋಧನೋರ್ವನಿಗೆ ಹತ್ಯೆ ಮಾಡಿರುವ ಘಟನೆ ನಡೆದಿದೆ.
ನದಿಯಾಡ್‌ನ ಚಕ್ಲಾಸಿ ಗ್ರಾಮದಲ್ಲಿ ಬಿಎಸ್‌ಎಫ್ ಯೋಧರೊಬ್ಬರ ಅಪ್ರಾಪ್ತ ಮಗಳ ಆಕ್ಷೇಪಾರ್ಹ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇದನ್ನು ಕಂಡು ಯೋಧ ವಿಡಿಯೋ ಮಾಡಿದ ಬಾಲಕನ ಮನೆಗೆ ತೆರಳಿ ಪ್ರಶ್ನಿಸಿದ್ದಾರೆ.
ಈ ವೇಳೆ ಬಾಲಕನ ಕುಟುಂಬಸ್ಥರು ಕೊಡಲಿ ಹಾಗೂ ದೊಣ್ಣೆಗಳಿಂದ ಯೋಧ ಮತ್ತು ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಬಳಿಕ ಮೃತಪಟ್ಟಿದ್ದಾರೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.