ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಬುಧವಾರ ಕರ್ನಾಟಕದಲ್ಲಿ ಅಂತರ್ಜಾಲ ಸಂಪರ್ಕವನ್ನು ಸುಧಾರಿಸಲು ಕಾರ್ಯಪಡೆ ರಚಿಸಿದ್ದು, ರಾಜೀವ್ ಚಂದ್ರಶೇಖರ್ ಅವರ ಸೂಚನೆಗಳ ಮೇರೆಗೆ ರಾಜ್ಯಕ್ಕೆ ಕಾರ್ಯಪಡೆ ಕಳುಹಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
ನ್ಯಾಷನಲ್ ಇಂಟರ್‌ನೆಟ್ ಎಕ್ಸ್‌ಚೇಂಜ್ ಆಫ್ ಇಂಡಿಯಾ (NIXI) ಮತ್ತು ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI) ಅಧಿಕಾರಿಗಳನ್ನು ಒಳಗೊಂಡ MeitY ಕಾರ್ಯಪಡೆಯು ತಮ್ಮ ಕೆಲಸವನ್ನು ತ್ವರಿತವಾಗಿ ಶುರು ಮಾಡುತ್ತದೆ ಮತ್ತು ಪ್ರತಿ ಜಿಲ್ಲೆಗೆ ಭೇಟಿ ನೀಡಲಿದ್ದು ರಾಜ್ಯದ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ ಮಂತ್ರಿಗಳಿಗೆ ವರದಿಯನ್ನು ಸಲ್ಲಿಸುತ್ತಾರೆ, “ಎಂದು MeitY ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಇತ್ತೀಚೆಗೆ ಚಂದ್ರಶೇಖರ್ ಅವರು ಕರ್ನಾಟಕದ ಆರು ಜಿಲ್ಲೆಗಳಲ್ಲಿ ಕೈಗೊಂಡ ಜನಾಶೀರ್ವಾದ ಯಾತ್ರೆಯಲ್ಲಿ, ಇಂಟರ್ನೆಟ್ ವೇಗವನ್ನು ಸುಧಾರಿಸಲು ಮತ್ತು ಸಂಪರ್ಕವನ್ನು ಪಡೆಯಲು ಹಲವಾರು ವಿನಂತಿಗಳಿದ್ದು ಪ್ರತಿ ಜಿಲ್ಲೆಯ ಕೆಲ ಭಾಗಗಳಲ್ಲಿ ಅಧ್ಯಯನ ಮಾಡಲು ಸಚಿವರು ಟಾಸ್ಕ್ ಫೋರ್ಸ್ ತಂಡವನ್ನು ಕಳುಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಆದ್ಯತೆಯೆಂದರೆ ಎಲ್ಲಾ ಭಾರತೀಯರನ್ನು ಸಂಪರ್ಕಿಸುವುದು ಮತ್ತು ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಸೌಲಭ್ಯವು ಪ್ರತಿ ಭಾರತೀಯನಿಗೂ ತಲುಪುವಂತೆ ಮಾಡುವುದಾಗಿದೆ.