• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ..!!

ಪ್ರತಿಧ್ವನಿ by ಪ್ರತಿಧ್ವನಿ
July 1, 2024
in Top Story, ಅಂಕಣ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ತಿಳಿಸಿದರು.

ADVERTISEMENT

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿ.ಎಸ್. ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ 2024-25 ನೇ ಸಾಲಿನ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಪ್ರಜಾ ಸರ್ಕಾರಕ್ಕೂ ಮುನ್ನ ರಾಜರುಗಳ ಕಾಲದಿಂದಲೂ ತೆರಿಗೆ ಪದ್ಧತಿ ಇತ್ತು ಎನ್ನುವುದನ್ನು ಅನೇಕ ಶಾಸನಗಳಲ್ಲಿ ನಾವು ಕಾಣ ಬಹುದು. ಕದಂಬರು ಕರ್ನಾಟಕದಲ್ಲಿ ಮಾರಾಟ ತೆರಿಗೆಯನ್ನು ಪ್ರಾರಂಭಿಸಿದರು ಎಂದು ಶಾಸನಗಳು ಹೇಳುತ್ತವೆ. ರಾಜ್ಯ ನಡೆಸಲು ತೆರಿಗೆ ಅಗತ್ಯ. ತೆರಿಗೆ ಕೊಡಲು ಸಾಧ್ಯವಿದ್ದವರು ಮಾತ್ರ ತೆರಿಗೆಯನ್ನು ಕೊಡುತ್ತಾರೆ. ಪ್ರತಿ ಸರ್ಕಾರವೂ ಕೂಡ ತೆರಿಗೆಗಳನ್ನು ಸಂಗ್ರಹ ಮಾಡಿಯೇ ದೇಶವನ್ನು, ರಾಜ್ಯವನ್ನು ನಡೆಸುತ್ತದೆ. ಸಂವಿಧಾನ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರ ಕೊಟ್ಟಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕು

ಕರ್ನಾಟಕ ಸರ್ಕಾರ ಜಿ. ಎಸ್.ಟಿ (GST) ಗೂ ಮುನ್ನವೇ ವ್ಯಾಟ್ ಮೂಲಕ ತೆರಿಗೆ ವಸೂಲು ಮಾಡುತ್ತಿತ್ತು. ಜಿ ಎಸ್. ಟಿ (GST) ಪರೋಕ್ಷ ತೆರಿಗೆಯಾಯಾಗಿದೆ. ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ ಎಂಬ ಕೂಗು ಎದ್ದಿದೆ. ಪ್ರಸ್ತುತ 16 ನೇ ಹಣಕಾಸು ಆಯೋಗ ರಚನೆಯಾಗುತ್ತಿದೆ. ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕೆಂದು ನಾವು ಪ್ರತಿಪಾದಿಸುತ್ತಿದ್ದೇವೆ. 15 ನೇ ಹಣಕಾಸು ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ ಪ್ರಧಾನಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ . ಹೆಚ್ಚು ತೆರಿಗೆ ಸಂಗ್ರಹವಾದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದರು.

ಸಮಾನತೆ ಸಾಧಿಸಲು ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ

ಗ್ಯಾರಂಟಿ ಯೋಜನೆಗಳಿಗೆ 60,000 ಕೋಟಿ ರೂಪಾಯಿಗಳ ಅಗತ್ಯವಿದೆ. ಸಮಾಜದ ಅಸಮಾನತೆ ಹೋಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬರಬೇಕು. ಆಗ ಮಾತ್ರ ಸಮಾನತೆ ಬರಲು ಸಾಧ್ಯ. ಆರ್ಥಿಕವಾಗಿ ದುರ್ಬಲರಾದವರಿಗೆ ವಿಶೇಷ ಕಾರ್ಯಕ್ರಮ ನೀಡಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ಧರ್ಮದ, ಎಲ್ಲಾ ಜಾತಿಗಳ ಬಡವರಿಗೆ ಶಕ್ತಿ ತುಂಬಬೇಕಾದರೆ ಸಂಪನ್ಮೂಲ ಇರಬೇಕಾದುದ್ದು ಅಗತ್ಯ ಎಂದರು.

ವಾಣಿಜ್ಯ ತೆರಿಗೆ ಇಲಾಖೆಯ ಕಾರ್ಯವೈಖರಿಗೆ ಸಿಎಂ ಮೆಚ್ಚುಗೆ

ತೆರಿಗೆ ಸೋರಿ ಹೋಗದಂತೆ ವಾಣಿಜ್ಯ ತೆರಿಗೆ ಇಲಾಖೆ (Commercial Taxes Department) ಪ್ರಯತ್ನ ಮಾಡುತ್ತದೆ. 2022-23 ನೇ ಸಾಲಿನಲ್ಲಿ 1.22,821 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ. 2023-24 ನೇ ಸಾಲಿನಲ್ಲಿ 1,45,266 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿ ವಾಣಿಜ್ಯ ತೆರಿಗೆ ಇಲಾಖೆ ಉತ್ತಮ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಚ್ಚಿನ ತೆರಿಗೆ ಸಂಗ್ರಹಕ್ಕೆ ಕಾರ್ಯಕ್ರಮ ಪ್ರೇರಣೆಯಾಗಲಿ
ವಾಣಿಜ್ಯ ತೆರಿಗೆ ಇಲಾಖೆಯ (Commercial Taxes Department) 65 ಜನರಿಗೆ ಪ್ರಶಸ್ತಿಗಳನ್ನು ಇಂದು ವಿತರಿಸಲಾಗಿದ್ದು, ಉಳಿದ ಆರು ಸಾವಿರ ಅಧಿಕಾರಿಗಳು ಸಹ ಪ್ರಶಸ್ತಿ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಈ ಕಾರ್ಯಕ್ರಮ ಇತರರಿಗೆ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ: ಕೆ.ಗೋವಿಂದರಾಜು (Dr. K Govindaraju) ಹಾಗೂ ನಜೀರ್ ಅಹ್ಮದ್ (Nazeer Ahmed), ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ( L k Ateek), ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ (Commercial Tax Department Commissioner C. Shikha) ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್ (Finance Department Secretary PC Zafar) ಮತ್ತಿತರು ಉಪಸ್ಥಿತರಿದ್ದರು.

Tags: BJPcongressCongress Partysiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚನ್ನಪಟ್ಟಣಕ್ಕೆ ಬಂದು ಎತ್ತಿನಗಾಡಿ ಹತ್ತಿಳಿದ DCM D.K.Shivakumar

Next Post

ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ..!!

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ..!!

ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada