ದೆಹಲಿ : ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ. ಮೂವರು ನಾಯಕರು ತೆಲಂಗಾಣ ವಿಧಾನಸಭಾ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣಾ ಪೂರ್ವ ಮೈತ್ರಿಯ ಬಗ್ಗೆ ಚರ್ಚಿಸಿದ್ದಾರೆ.

ಸುಮಾರು ಅರ್ಧ ಗಂಟೆಗೂ ಅಧಿಕ ಹಾಗೂ ಬಿಜೆಪಿ ನಾಯಕರು ಹಾಗೂ ಚಂದ್ರಬಾಬು ನಾಯ್ಡು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುವ ಬಗ್ಗೆ ಚರ್ಚೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಟಿಡಿಪಿ 2014ರಲ್ಲಿ ಎನ್ಡಿಎ ಭಾಗವಾಗಿತ್ತು. ಆದರೆ 2019ರ ಚುನಾವಣೆಗೂ ಒಂದು ವರ್ಷ ಮುನ್ನ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದಲ್ಲಿ ಟಿಡಿಪಿ ಮೈತ್ರಿಕೂಟವನ್ನು ತ್ಯಜಿಸಿ ಹೊರಬಂದಿತ್ತು. ಇದಾದ ಬಳಿಕ ಇತ್ತೀಚೆಗೆ ನಡೆದಿದ್ದ ಮುನ್ಸಿಪಲ್ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಂದಾಗಿದ್ದವು.












