ಶಿಮ್ಲಾ: ಶಿಕ್ಷಕನೊಬ್ಬ ಅಶ್ಲೀಲ ವಿಡಿಯೋ ತೋರಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಹಿಮಾಚಲ ಪ್ರದೇಶದ (Himachal Pradesh)ಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ (Teacher) 9ನೇ ತರಗತಿಯ ವಿದ್ಯಾರ್ಥಿನಿಗೆ ಅಶ್ಲೀಲ ವೀಡಿಯೋ ತೋರಿಸಿ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ದೌರ್ಜನ್ಯದ ಆರೋಪದ ಮೇಲೆ ಧಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಂಗಾ ಎಂಬಲ್ಲಿ ಈ ಕೃತ್ಯ ನಡೆದಿದೆ. ಸರ್ಕಾರಿ ಪ್ರೌಢಶಾಲೆಯ ಡ್ರಾಯಿಂಗ್ ಶಿಕ್ಷಕ, ಮೇ 2 ರಂದು ಶಾಲೆಯಲ್ಲಿ ಬಲವಂತವಾಗಿ ವಿದ್ಯಾರ್ಥಿನಿಗೆ ಅಶ್ಲೀಲ ವೀಡಿಯೋ ತೋರಿಸಿದ್ದಾನೆ. ಅನುಚಿತವಾಗಿ ವಿದ್ಯಾರ್ಥಿನಿಯನ್ನು ಸ್ಪರ್ಶಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಆರೋಪಿಯ ವಿರುದ್ಧ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್ 10 ಮತ್ತು 12ರ ಅಡಿಯಲ್ಲಿ ಲೈಂಗಿಕ ಕಿರುಕುಳ ಮತ್ತು ಹಲ್ಲೆಯ ಯತ್ನದ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.