ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ(Shivam Dube) 60* ಬಿರುಸಿನ ಬ್ಯಾಟಿಂಗ್ ನೆರವಿನಿಂದ ಅಫ್ಘಾನಿಸ್ತಾನ(Afghanistan) ವಿರುದ್ಧದ ಮೊದಲ ಟಿ20(T20I) ಪಂದ್ಯದಲ್ಲಿ ಭಾರತ(Team India) 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ.

ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಅಫ್ಘಾನಿಸ್ತಾನ ಸಂಘಟಿತ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 158 ರನ್‌ಗಳಿಸಿತು. ಅಫ್ಘಾನಿಸ್ತಾನದ ಪರ ಮೊಹಮ್ಮದ್ ಅಬಿ(42), ಅಝ್ಮತ್‌ವುಲ್ಲ(29), ನಾಯಕ ಝದ್ರಾನ್(25) ಉಪಯುಕ್ತ ರನ್‌ಗಳಿಸಿ ತಂಡಕ್ಕೆ ಆಸರೆಯಾದರೆ. ಭಾರತದ ಪರ ಮುಖೇಶ್ ಹಾಗೂ ಅಕ್ಸರ್ ಪಟೇಲ್ ತಲಾ 2 ವಿಕೆಟ್ ಹಾಗೂ ದುಬೆ 1 ವಿಕೆಟ್ ಪಡೆದರು.
ಅಫ್ಘಾನಿಸ್ತಾನ ನೀಡಿದ 159 ರನ್‌ಗಳ ಟಾರ್ಗೆಟ್ ಚೇಸ್ ಮಾಡಿದ ಭಾರತ ಇನ್ನಿಂಗ್ಸ್ ಮೊದಲ ಓವರ್‌ನಲ್ಲೇ ನಾಯಕ ರೋಹಿತ್ ಶರ್ಮ(0) ವಿಕೆಟ್ ಕಳೆದುಕೊಂಡಿತು. ನಂತರ ಜೊತೆಯಾದ ಶುಭ್ಮನ್ ಗಿಲ್(23) ಹಾಗೂ ತಿಲಕ್ ವರ್ಮ(26) ತಂಡಕ್ಕೆ ಸ್ವಲ್ಪಮಟ್ಟಿನ ಚೇತರಿಕೆ ನೀಡಿದರು. ಈ ಹಂತದಲ್ಲಿ ಕಣಕ್ಕಿಳಿದ ಶಿವಂ ದುಬೆ(60* ರನ್, 40 ಬಾಲ್, 5 ಬೌಂಡರಿ, 2 ಸಿಕ್ಸ್) ಬಿರುಸಿನ ಬ್ಯಾಟಿಂಗ್‌ನಿಂದ ತಂಡದ ಗೆಲುವಿಗೆ ಕಾರಣರಾದರು. ಇವರಿಗೆ ಸಾಥ್ ನೀಡಿದ ಜಿತೇಶ್ ಶರ್ಮ(31) ಹಾಗೂ ರಿಂಕು ಸಿಂಗ್(16*) ತಂಡವನ್ನು ಗೆಲುವಿನ ದಡಸೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಅಫ್ಘಾನಿಸ್ತಾನದ ಪರ ಮುಜೀಬ್ 2, ಒಮರ್ಜಾಯಿ 1 ವಿಕೆಟ್ ಪಡೆದರು.