ಹೈದರಾಬಾದ್:ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ತೆಲಂಗಾಣ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ) ಅಧಿಕಾರ ವಹಿಸಿಕೊಂಡಿದ್ದಾರೆ.ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಈ ವರ್ಷದ ಆರಂಭದಲ್ಲಿ ಟಿ20 ವಿಶ್ವಕಪ್ ಯಶಸ್ಸು ಸೇರಿದಂತೆ ಭಾರತ ತಂಡಕ್ಕೆ ಸಲ್ಲಿಸಿದ ಸೇವೆಗಾಗಿ ಸಿರಾಜ್ ಅವರಿಗೆ ಗ್ರೂಪ್-1 ಸರ್ಕಾರಿ ಹುದ್ದೆಯನ್ನು ನೀಡಲಾಗುವುದು ಎಂದು ಘೋಷಿಸಿದ್ದರು.
ತೆಲಂಗಾಣ ಪೊಲೀಸ್ ಇಲಾಖೆಯಲ್ಲಿ ಡಿಎಸ್ಪಿ ಹುದ್ದೆಯ ಜೊತೆಗೆ, ಹೈದರಾಬಾದ್ನ ಜುಬಿಲಿ ಹಿಲ್ಸ್ನ ರಸ್ತೆ ಸಂಖ್ಯೆ 78 ರ ಬಳಿ ಸರ್ಕಾರವು 600 ಚದರ ಗಜಗಳಷ್ಟು ಭೂಮಿಯನ್ನು ಕೂಡ ಮಂಜೂರು ಮಾಡಿದೆ. ಸಿರಾಜ್ ಪೊಲೀಸ್ ಸಮವಸ್ತ್ರದಲ್ಲಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಗೌರವಕ್ಕಾಗಿ ಸಿರಾಜ್ ಅವರು ಸಿಎಂಗೆ ಅಪಾರ ಮೆಚ್ಚುಗೆ ಮತ್ತು ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ.