ಬೆಂಗಳೂರು : ಇಂದು ನಡೆದ ಮೂರನೇ ಮತ್ತು ಕೊನೆಯ ಏಕದಿನ (one-day cricket) ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭಮನ್ ಗಿಲ್ ( Shubman Gill) ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಗುಜರಾತಿನ ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್‌ಗಳಿಂದ ಜಯಗಳಿಸಿತು, ಕಳೆದ ಬುಧವಾರ ರಾಜ್‌ಕೋಟ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ನ್ಯೂಜಿಲೆಂಡ್ ಏಳು ವಿಕೆಟ್‌ಗಳ ಜಯದೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿತ್ತು.
ಪ್ರಸಿದ್ಧ್ ಕೃಷ್ಣ ಬದಲಿಗೆ ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್ ತಂಡಕ್ಕೆ ಸೇರ್ಪಡೆಗೊಂಡಿದ್ದು, ಭಾರತ ತಂಡಕ್ಕೆ ಇನ್ನಷ್ಟು ಅನುಕೂಲವಾಗಲಿದೆ. ಆದರೆ ನ್ಯೂಜಿಲೆಂಡ್ ತಂಡವು ಯಾವುದೇ ಬದಲಾವಣೆಗಳಿಲ್ಲದೆ ಕಣಕ್ಕಿಳಿದಿದೆ. ಬ್ಲ್ಯಾಕ್ ಕ್ಯಾಪ್ಸ್ ಭಾರತೀಯ ನೆಲದಲ್ಲಿ ತನ್ನ ಮೊದಲ ಏಕದಿನ ಸರಣಿಯನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಈ ಹಿಂದೆ ನ್ಯೂಜಿಲೆಂಡ್ (New Zealand) ತಂಡವು ಭಾರತದ ವಿರುದ್ಧ ನಡೆದ ಏಳು ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. ಹೋಳ್ಕರ್ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಸೂಕ್ತವಾಗಿದ್ದು, ಆದರೆ ಎತ್ತರದ ಸ್ಕೋರ್ ಸಮವಾಗಿರಬೇಕು. ಅಲ್ಲದೆ ಸಂಜೆಯ ಇಬ್ಬನಿ ಮತ್ತು ಸಣ್ಣ ಬೌಂಡರಿಗಳ ಚೇಸಿಂಗ್ ತಂಡಕ್ಕೆ ಬಲ ನೀಡಲಿವೆ.
ಇದನ್ನೂ ಓದಿ : 25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಈ ನಡುವೆಯೇ ಜನವರಿ 21 ರಂದು ನಾಗ್ಪುರದಲ್ಲಿ ಪ್ರಾರಂಭವಾಗುವ ಐದು ಪಂದ್ಯಗಳ ಸರಣಿಗಾಗಿ ಭಾರತದ ಟಿ20 ತಂಡಕ್ಕೆ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಮತ್ತು ಸ್ಪಿನ್ನರ್ ರವಿ ಬಿಷ್ಣೋಯ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಗಾಯಗೊಂಡ ತಿಲಕ್ ವರ್ಮಾ ಮತ್ತು ವಾಷಿಂಗ್ಟನ್ ಸುಂದರ್ ಬದಲಿಗೆ ಅವರು ತಂಡಕ್ಕೆ ಆಯ್ಕೆಯಾಗಿದ್ದಾರೆ.

ಇನ್ನೂ ಈ ಪಂದ್ಯದಲ್ಲಿ ಎರಡೂ ತಂಡಗಳ ಬಲಾಬಲ ನೋಡಿದಾಗ, ಭಾರತ ತಂಡದಲ್ಲಿ ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ( India captain) ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ಅವರು ತಂಡದಲ್ಲಿದ್ದಾರೆ. ಅದರಂತೆ ನ್ಯೂಜಿಲೆಂಡ್ ಪಡೆಯಲ್ಲಿ ಮೈಕೆಲ್ ಬ್ರೇಸ್‌ವೆಲ್ (ನಾಯಕ) ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹೇ, ಜಕಾರಿ ಫೌಲ್ಕ್ಸ್, ಕೈಲ್ ಜೇಮಿಸನ್, ಕ್ರಿಸ್ಟಿಯನ್ ಕ್ಲಾರ್ಕ್, ಜೇಡನ್ ಲೆನ್ನಾಕ್ಸ್ ಅವರುಗಳು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.












