
ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿದ್ದಕ್ಕೆ ಸಂಭ್ರಮಾಚರಣೆ ಮಾಡಲಾಗಿದೆ. ಯತ್ನಾಳ್ ವಿರೋಧಿ ಬಣದ ಬಿಜೆಪಿ ಕಾರ್ಯಕರ್ತರು ಸಂಭ್ರಮ ಮಾಡಿದ್ದಾರೆ. ಜೋರಾಪುರ ಪೇಟೆಯಲ್ಲಿನ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಪರಸ್ಪರ ಸಿಹಿ ಹಂಚಿ ಸಂತಸ ಪಟ್ಟಿದ್ದಾರೆ. ರಾಜೂ ಹುನ್ನೂರ, ಆಕಾಶ ತೊರವಿ, ಸುಮಿತ್ ಮ್ಯಾಡಿ, ಸುಮೀತ್ ಗೌರ, ಆಕಾಶ ನಾಗನೂರ ಸಾಕಷ್ಟು ಮಂದಿ ಭಾಗಿಯಾಗಿದ್ದರು. ಯತ್ನಾಳ ಉಚ್ಛಾಟನೆ ಸ್ವಾಗತಿಸಿದ್ದಾರೆ ಬಿಜೆಪಿ ಕಾರ್ಯಕರ್ತರು.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದಿಂದ ಉಚ್ಛಾಟನೆ ಮಾಡಿದ್ದಕ್ಕೆ ಮಾಜಿ ಪಾಲಿಕೆ ಸದಸ್ಯ ಉಮೇಶ ವಂದಾಲ ನೇತೃತ್ವದಲ್ಲಿ ಸಂಭ್ರಮ ಮಾಡಲಾಗಿದೆ. ಶಾಹು ನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಿಜೆಪಿಗೆ ಅಂಟಿದ ಕಳಂಕ ತೊಲಗಿತು ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.

ವಿಜಯಪುರದಲ್ಲಿ ಅಪ್ಪು ಪಟ್ಟಣಶೆಟ್ಟಿ ಬಣದ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರನೆ ಮಾಡಿದ್ದಾರೆ. ವಿಜಯಪುರದ ವಾಟರ್ ಟ್ಯಾಂಕ್, ಶಿವಾಜಿ ವೃತ್ತ ಸೇರಿದಂತೆ ನಗರದ ವಿವಿಧ ಕಡೆ ಸಂಭ್ರಮಾಚಣೆ ಮಾಡಿದ್ದು, ಬಿಜೆಪಿಯಲ್ಲಿ ಪಿಡೆ ತೊಲಗಿತು ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ರಾಜಕೀಯ ವಿರೋಧಿ ಅಪ್ಪು ಪಟ್ಟಣಶೆಟ್ಟಿ ಮಾತನಾಡಿ, ಯತ್ನಾಳ್ ಉಚ್ಚಾಟನೆ ಮಾಡಿರೋದು ಖುಷಿ ತಂದಿದೆ. ಬಹಳ ದಿನಗಳ ಹಿಂದೆಯೆ ಉಚ್ಛಾಟನೆ ಮಾಡಬೇಕಿತ್ತು, ಆದರೆ ಈಗ ಆಗಿದೆ. ಮುಂದೆ ಅವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ವಾಪಸ್ ಕರೆಯಬಾರದು. ರಾಜಕೀಯವಾಗಿ ಯತ್ನಾಳ್ ಏನು ಅಲ್ಲ. ಅವರಿಂದ ಪಕ್ಷಕ್ಕೆ ಯಾವುದೇ ಲಾಭವಿಲ್ಲ ಎಂದಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ್ ಹೂಗಾರ ಕಣ್ಣೀರು ಹಾಕಿದ್ದಾರೆ. ಯತ್ನಾಳ್ ಬೆಂಬಲಿಗನಾಗಿರುವ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ್ ಹೂಗಾರ್, ರಾಷ್ಟ್ರೀಯ ನಾಯಕರು ಅನ್ಯಾಯ ಮಾಡಿದ್ದಾರೆ ಎಂದು ಕಣ್ಣಿರು ಹಾಕಿದ್ದಾರೆ. ನಾವು ಎಲ್ಲರು ರಾಜೀನಾಮೆ ನೀಡುತ್ತೇವೆ. ಈಗಾಗಲೇ 20 ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಮತ್ತೊಮ್ಮೆ ಸಭೆ ನಡೆಸುತ್ತೇವೆ. ಸಭೆಯ ಬಳಿಕ ಎಲ್ಲ ಪದಾಧಿಕಾರಿಗಳು ರಾಜೀನಾಮೆ ನೀಡುತ್ತೇವೆ ಎಂದಿದ್ದಾರೆ. ಒಟ್ಟು 160 ಕ್ಕೂ ಅಧಿಕ ಜನ ಸಭೆ ಮಾಡುತ್ತೇವೆ ಎಂದಿದ್ದಾರೆ.
