ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ ಸಿಂಧು ಗೌಡ ನಿರ್ದೇಶನದ ಹಾಗೂ ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಾಣ ಮಾಡಿರುವ “ಆಪಲ್ ಕಟ್” ಚಿತ್ರದ ಟೀಸರ್ ಗೆ ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಧ್ವನಿ ನೀಡಿದ್ದಾರೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ.
ಹೊಸತಂಡದ ಹೊಸಪ್ರಯತ್ನಕ್ಕೆ ಬೆಂಬಲ ನೀಡಿದ್ದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಚಿತ್ರತಂಡ ಧನ್ಯವಾದ ಹೇಳುವುದರೊಂದಿಗೆ, ಹುಟ್ಟುಹಬ್ಬದ(ಅಕ್ಟೋಬರ್ 8) ಶುಭಾಶಯವನ್ನು ತಿಳಿಸಿದೆ.
ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕಿ ಸಿಂಧು ಗೌಡ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇದು ಅವರ ನಿರ್ದೇಶನದ ಚೊಚ್ಚಲ ಚಿತ್ರ.ಸೂರ್ಯ ಗೌಡ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಅಶ್ವಿನಿ ಪೋಲೆಪಲ್ಲಿ. ಅಪ್ಪಣ್ಣ, ಅಭಿಜಿತ್, ಮೀನಾಕ್ಷಿ, ಬಾಲ ರಾಜವಾಡಿ ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.
ವೀರ್ ಸಮರ್ಥ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್, ಸತ್ಯಪ್ರಕಾಶ್ ಬರೆದಿದ್ದಾರೆ. ವಾಸುಕಿ ವೈಭವ್, ವಿಜಯಶ್ರೀ ಹಾಡಿದ್ದಾರೆ. ರಾಜೇಶ್ ಗೌಡ ಛಾಯಾಗ್ರಹಣ ಹಾಗೂ ಸುಚೇಂದ್ರ ಎನ್ ಮೂರ್ತಿ ಸಂಕಲನ “ಆಪಲ್ ಕಟ್” ಚಿತ್ರಕ್ಕಿದೆ.