• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಣ್ಣ ಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ..? ತೇಜಸ್ವಿ ಪ್ರಹಸನಕ್ಕೆ ಸಿದ್ದರಾಮಯ್ಯ ತಿರುಗೇಟು

Any Mind by Any Mind
May 5, 2021
in ಕರ್ನಾಟಕ
0
ಸಣ್ಣ ಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ..? ತೇಜಸ್ವಿ ಪ್ರಹಸನಕ್ಕೆ ಸಿದ್ದರಾಮಯ್ಯ ತಿರುಗೇಟು
Share on WhatsAppShare on FacebookShare on Telegram

ಬಿಜೆಪಿ ಸಂಸದ ತೇಜಸ್ವಿಸೂರ್ಯ ನೇತೃತ್ವದ ತಂಡ ನಗರದಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಗುಪ್ತ ಕಾರ್ಯಚರಣೆ ನಡೆಸುತ್ತಿದ್ದು, ಈ ವಿಚಾರ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ತೇಜಸ್ವಿ ಸೂರ್ಯ, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರೇ, ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು ಬಿಬಿಎಂಪಿಯಲ್ಲಿರುವ ಅಧಿಕಾರಿಗಳ ವಿರುದ್ಧ ಅಲ್ಲ, ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿಗಳು, ಸಚಿವರು ಮತ್ತು ಬಿಜೆಪಿ ಶಾಸಕರು ಮತ್ತು ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ..? ಎಂದು ತೇಜಸ್ವಿ ಸೂರ್ಯ ಅವರನ್ನು ಪ್ರಶ್ನಿಸಿದ್ದಾರೆ.

ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಎಂದು ಸಲಹೆ ಕೊಟ್ಟಿದ್ದಾರೆ.

ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು? ಎಂದು ಅಸಮಾಧಾನಗೊಂಡಿದ್ದಾರೆ.

ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕರೋನಾ ರೋಗಕ್ಕೂ ಯಾಕೆ ಎಳೆದುತರ್ತೀರಿ ತೇಜಸ್ವಿ ಸೂರ್ಯ? ಕರೋನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ ಎಂದು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. ‘ಯಥಾ ರಾಜಾ ತಥಾ ಮಂತ್ರಿ’. ‘ಮೈ ಬೀ ಕಾವೂಂಗಾ, ತುಮ್ ಬಿ ಕಾವೋ’ ಎನ್ನುವುದೇ ನಿಮ್ಮ ನರೇಂದ್ರ ಮೋದಿಯವರ ನಿಜವಾದ ಘೋಷಣೆ. ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಎಂದು ವ್ಯಂಗ್ಯ ಮಾಡಿದ್ದಾರೆ.

ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕರೋನಾವನ್ನು ಯಾಕೆ ಬಳಸಿಕೊಳ್ತೀರಿ..? ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದುಕಟ್ಟೆ ಹಾಕಿದೆ ಅದನ್ನೂ ರಾಜ್ಯದ ಜನತೆಗೆ ತಿಳಿಸಿ ಎಂದಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ, ಸ್ಮಶಾನದಲ್ಲಿ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ನರೇಂದ್ರ ಮೋದಿಯವರ ಅಚ್ಚೇ ದಿನ್..? ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು ಹಣ ಸಂದಾಯವಾಗಿದೆ..? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ವೆಂಟಿಲೇಟರ್, ಐಸಿಯು, ಆಕ್ಸಿಜನ್ ರಾಜ್ಯಕ್ಕೆ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ಮೋದಿ ರಕ್ಷಿಸುತ್ತಿರುವುದು ಯಾರನ್ನು..? ತಮ್ಮನ್ನೋ..? ಅಧಿಕಾರಿಗಳನ್ನೋ..? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಕರೋನಾ ರೋಗಿಗಳಿಗೆ ಬೆಡ್ ಕೊಡಿ, ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಮುಖ್ಯಮಂತ್ರಿಗಳು ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ.? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ..? ಎಂದು ಸಿದ್ದರಾಮಯ್ಯ ರಾಜ್ಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Previous Post

ಉತ್ತರ ಪ್ರದೇಶದ ಮೂಲಕ‌ ದೆಹಲಿ ಗದ್ದುಗೆ ತಲುಪುವ ಬಿಜೆಪಿ ಗುರಿಗೆ ಚೂರಿ ಇರಿದ ರಾಮನ ನಾಡು!

Next Post

ಪಶ್ಚಿಮ ಬಂಗಾಳ, ಮಮತಾ ಬ್ಯಾನರ್ಜಿ ಮತ್ತು ಹಿಂಸಾತ್ಮಕ ರಾಜಕೀಯ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಪಶ್ಚಿಮ ಬಂಗಾಳ, ಮಮತಾ ಬ್ಯಾನರ್ಜಿ ಮತ್ತು ಹಿಂಸಾತ್ಮಕ ರಾಜಕೀಯ

ಪಶ್ಚಿಮ ಬಂಗಾಳ, ಮಮತಾ ಬ್ಯಾನರ್ಜಿ ಮತ್ತು ಹಿಂಸಾತ್ಮಕ ರಾಜಕೀಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada