ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ ಮಾಡಿದ್ದಾರೆ. ಬೊಮ್ಮನಹಳ್ಳಿಯ ಹೊಂಗಸಂದ್ರ ಬಸ್ ನಿಲ್ದಾಣದಿಂದ ಮಂಗಮ್ಮನಪಾಳ್ಯದವರೆಗೆ ರೋಡ್ ಶೋ ಮಾಡಿದ್ರು. ಸಿಎಂ ಸಿದ್ದರಾಮಯ್ಯಗೆ ಹೂವಿನ

ಸುರಿಮಳೆಗೈದು ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ರು. ಸಚಿವ ರಾಮಲಿಂಗಾರೆಡ್ಡಿ, ಮಾಜಿ ಎಂಎಲ್ಸಿ ನಾರಾಯಣಸ್ವಾಮಿ, ಕಾಂಗ್ರೆಸ್ ಮುಖಂಡ ಉಮಾಪತಿ ಸೇರಿದಂತೆ ಹಲವರು ಸಾಥ್ ನೀಡಿದ್ರು.

ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕಕ್ಕೆ ಅನ್ಯಾಯ ಆದಾಗ ಯಾವತ್ತೂ ಪಾರ್ಲಿಮೆಂಟ್ನಲ್ಲಿ ಧ್ವನಿ ಎತ್ತಿಲ್ಲ. ಇಂತಹ ನಿಷ್ಪ್ರಯೋಜಕ ಸಂಸದ ತೇಜಸ್ವಿ ಸೂರ್ಯ ಪಾರ್ಲಿಮೆಂಟ್ಗೆ ಹೋಗಬಾರದು. ಈಗ ಚುನಾವಣೆ ಬಳಿಕ ಗ್ಯಾರಂಟಿಗಳು

ಮುಂದುವರಿಯುವುದಿಲ್ಲ ಅಂತಿದ್ದಾರೆ. ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ. ನೀವೆಲ್ಲಾ ತೇಜಸ್ವಿ ಸೂರ್ಯನನ್ನ ಸೋಲಿಸಿ ಎಂದು ಕರೆ ಕೊಟ್ಟಿದ್ದಾರೆ.













