ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ತೆಲಂಗಾಣದ ಜನರು ರಾಜ್ಯದ ಪ್ರಗತಿ ಹಾಗೂ ಅಭಿವೃದ್ಧಿಗಾಗಿ ಬದಲಾವಣೆ ಬಯಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಹೈದರಾಬಾದ್ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಗೆಲುವಿಗಾಗಿ ಹೋರಾಡಲಾಗಿದೆ. ನಾನು ಕೆಸಿಆರ್ ಅಥವಾ ಕೆಟಿಆರ್ ಬಗ್ಗೆ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ತೆಲಂಗಾಣದ ಜನತೆ ಅವರಿಗೆ ಉತ್ತರ ನೀಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಅವರು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಟೀಮ್ ಲೀಡರ್ ಆಗಿದ್ದಾರೆ. ಮುಖ್ಯಮಂತ್ರಿ ಯಾರು ಎನ್ನುವುದರ ಬಗ್ಗೆ ನಮ್ಮ ಪಕ್ಷ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದು, ಕರ್ನಾಟಕ ರಾಜ್ಯದ ಕಾಂಗ್ರೆಸ್ನ ಪ್ರಮುಖ ನಾಯಕರು ತೆಲಂಗಾಣದಲ್ಲಿ ಬೀಡುಬಿಟ್ಟಿದ್ದಾರೆ.
https://youtube.com/@pratikshananews5394?si=Z5ii5S1Q1End1K3f