ರಾಜಸ್ಥಾನದ ಬೆನ್ನಲ್ಲೇ ಬ್ಲ್ಯಾಕ್‌ ಫಂಗಸನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿದ ತೆಲಂಗಾಣ

ಬ್ಲ್ಯಾಕ್‌ ಫಂಗಸ್‌ ಅಥವಾ ಕಪ್ಪು ಶಿಲೀಂಧ್ರವನ್ನು (ಮ್ಯೂಕೋರ್ಮೈಕೋಸಿಸ್) ಸಾಂಕ್ರಾಮಿಕ ರೋಗವೆಂದು ರಾಜಸ್ಥಾನ ಸರ್ಕಾರ ಘೋಷಿಸಿದ ಬೆನ್ನಲ್ಲೇ ತೆಲಂಗಾಣ ಸರ್ಕಾರ ಕೂಡಾ ಇದನ್ನು ಸಾಂಕ್ರಾಮಿಕ ರೋಗ ಕಾಯ್ದೆ 1897 ಅಡಿಯಲ್ಲಿ ಅಧಿಸೂಚಿತ ರೋಗವೆಂದು ಘೋಷಿಸಿದೆ.

“ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತ ಸರ್ಕಾರ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು (ICMR) ಹೊರಡಿಸಿದ ಮ್ಯೂಕೋರ್ಮೈಕೋಸಿಸ್ ನ ತಪಾಸಣೆ, ರೋಗನಿರ್ಣಯ ಮತ್ತು ನಿರ್ವಹಣೆಗೆ ಮಾರ್ಗಸೂಚಿಗಳನ್ನು ಅನುಸರಿಸಬೇಕು” ಎಂದು ಸರ್ಕಾರದ ಅಧಿಸೂಚನೆ ಹೇಳಿದೆ.

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಪ್ಪು ಶಿಲೀಂಧ್ರದ ಶಂಕಿತ ಹಾಗೂ ಧೃಡೀಕರಿಸಿದ ಪ್ರಕರಣವನ್ನು ಆರೋಗ್ಯ ಇಲಾಖೆಯ ಗಮನಕ್ಕೆ ತರುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಆಸ್ಪತ್ರೆಗಳ ವೈದ್ಯಕೀಯ ಅಧೀಕ್ಷಕರು ಮಾರ್ಗಸೂಚಿಯ ಅನುಸರಣೆ ಕಟ್ಟುನಿಟ್ಟಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಮತ್ತು ಅಂತಹ ಪ್ರಕರಣಗಳ ಬಗ್ಗೆ ದೈನಂದಿನ ವರದಿಯನ್ನು ಕಳುಹಿಸಬೇಕು ಎಂದು ಅಧಿಸೂಚನೆಯಲ್ಲಿ ನಿರ್ದೇಶಿಸಲಾಗಿದೆ.

ರಾಜಸ್ಥಾನದಲ್ಲಿ ಕಪ್ಪು ಶಿಲೀಂದ್ರವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿದ ಒಂದೇ ದಿನದಲ್ಲಿ ತೆಲಂಗಾಣ  ಸರ್ಕಾರದ ಈ ಅಧಿಸೂಚನೆ ಬಂದಿದೆ. ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಕೂಡಾ ಕಪ್ಪು ಶಿಲೀಂಧ್ರ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡಿದೆ.

ಮ್ಯೂಕೋರ್ಮೈಕೋಸಿಸ್ ಅಥವಾ ಕಪ್ಪು ಶಿಲೀಂಧ್ರವು ಪರಿಸರದಲ್ಲಿ ನೈಸರ್ಗಿಕವಾಗಿ ಕಂಡುಬರುವ ಮ್ಯೂಕಾರ್ಮೈಸೆಟ್ಸ್ ಎಂದು ಕರೆಯಲ್ಪಡುವುದರಿಂದ ಉಂಟಾಗುತ್ತದೆ. ಇದು ಮೂಗಿನ ಮೂಲಕ ಹರಡಿ ದೇಹದ ಇತರ ಭಾಗಗಳಲ್ಲಿ ಮುಖ್ಯವಾಗಿ ಕಣ್ಣುಗಳ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹ ಹೊಂದಿರುವ ಜನರು ಈ ಸೋಂಕಿಗೆ ಹೆಚ್ಚು ಗುರಿಯಾಗುತ್ತಾರೆ ಎಂದು ಹೇಳಲಾಗಿದೆ.

ಅಂಗಾಂಗ ಕಸಿಗೆ ಒಳಗಾದವರು, ಅಥವಾ ದೀರ್ಘಕಾಲದವರೆಗೆ ವೆಂಟಿಲೇಟರ್‌ನಲ್ಲಿದ್ದವರಿಗೆ ಕೂಡಾ ಶಿಲೀಂಧ್ರಗಳ ಸೋಂಕಿಗೆ ತುತ್ತಾಗುವ ಅಪಾಯ ಹೆಚ್ಚಿದೆ. ಇತ್ತೀಚಿನ ವರದಿ ಪ್ರಕಾರ ಕೋವಿಡ್‌ ರೋಗಿಗಳ ಚೇತರಿಕೆಗೆ ನೀಡುವ ಸ್ಟಿರಾಯಿಡ್‌ಗಳ ಪರಿಣಾಮವಾಗಿ ಕಪ್ಪು ಶಿಲೀಂದ್ರ ಸೋಂಕಿಗೆ ತುತ್ತಾಗುತ್ತಾರೆ ಎನ್ನಲಾಗಿದೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...