• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನೂರು ಸುಳ್ಳು ಹೇಳಿ, ಮುಖ್ಯಮಂತ್ರಿ ವಿರುದ್ಧದ ಸುಳ್ಳು ಆರೋಪ ನಿಜ ಮಾಡಲಾಗದು: ಜಾರ್ಜ್‌

ಪ್ರತಿಧ್ವನಿ by ಪ್ರತಿಧ್ವನಿ
November 7, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram
  • ಅನಂತಕುಮಾರ್‌ ಹೇಳಿಕೊಟ್ಟ ತಂತ್ರವನ್ನು ಬಿಜೆಪಿ ಇಂದಿಗೂ ಪಾಲಿಸುತ್ತಿದೆ

ಚನ್ನಪಟ್ಟಣ, ನವೆಂಬರ್‌ 7, 2024: ನೂರು ಸುಳ್ಳು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪವನ್ನು ನಿಜ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ADVERTISEMENT

ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರ ಗುರುವಾರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮೂಡಾ ವಿಷಯದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಪತ್ನಿಯ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ. ಬಿಜೆಪಿಯವರು ನೂರು ಸುಳ್ಳು ಪೋಣಿಸಿದರೂ ಅದನ್ನು ಸತ್ಯ ಎಂದು ರುಜುವಾತು ಮಾಡಲಾಗದು,”ಎಂದು ಹೇಳಿದರು.

“ಮುಡಾದಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ತಮ್ಮ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿರುವ ಪ್ರತಿಪಕ್ಷಗಳಿಗೆ ಮುಖ್ಯಮಂತ್ರಿಯವರು ಪತ್ರಿಕಾಗೋಷ್ಠಿಯಲ್ಲಿ ದಾಖಲೆ ಸಹಿತ ಸ್ಪಷ್ಟನೆ ನೀಡಿದ್ದರೂ ಸುಳ್ಳನ್ನು ಸತ್ಯ ಮಾಡುವ ಪ್ರಯತ್ನ ನಡೆಸುತ್ತಿವೆ. ಇದರಲ್ಲಿ ಅವರು ಎಂದೂ ಸಫಲರಾಗುವುದಿಲ್ಲ. ಸತ್ಯ ಗೆಲ್ಲುತ್ತದೆ,”ಎಂದು ಅವರು ಹೇಳಿದರು.

“ಹಿಂದೊಮ್ಮೆ ಪತ್ರಿಕಾಗೋಷ್ಠಿಯಲ್ಲಿ ಯಡಿಯೂರಪ್ಪ ಅವರು ಮೈಕ್‌ ಆನ್‌ ಇತ್ತು ಎಂಬ ವಿಷಯ ತಿಳಿಯದೇ, ಹೈ ಕಮಾಂಡ್‌ಗೆ ದುಡ್ಡು ಕಳುಹಿಸಿದ್ದೇವೆ. ಮತ್ತಷ್ಟು ಕಳುಹಿಸಬೇಕಿದೆ ಎಂಬ ಮಾತುಗಳನ್ನು ಆಡಿದ್ದರು. ಆಗ ಅನಂತಕುಮಾರ್‌ ಅವರು ಒಂದು ಸಲಹೆ ನೀಡಿದ್ದರು. ಸಗಣಿ ಮೇಲೆ ಒಂದು ಕಲ್ಲು ಬಿಸಾಡಿ, ಅದು ಎಲ್ಲರ ಮೇಲೆ ಎಗರುತ್ತದೆ. ಆಗ ಅದೇ ವಿಷಯ ಚಾಲ್ತಿಯಲ್ಲಿರುತ್ತದೆ ಎಂದಿದ್ದರು, ಅವರು ಅಂದು ಹೇಳಿಕೊಟ್ಟ ತಂತ್ರವನ್ನು ಬಿಜೆಪಿ ಇಂದಿಗೂ ಪಾಲಿಸುತ್ತಿದೆ. ತಮ್ಮ ಹುಳಕನ್ನು ಮುಚ್ಚಿಹಾಕಿಕೊಳ್ಳಲು ಬೇರೆಯವರ ಮೇಲೆ ಕೆಸರೆರಚುತ್ತಾರೆ. ಈ ತಂತ್ರ ಫಲಿಸದು,”ಎಂದು ಜಾರ್ಜ್‌ ಹೇಳಿದರು.

“ಇಂಥ ಯಾವ ಪೊಳ್ಳು ಆರೋಪಗಳು ಸಿದ್ದರಾಮಯ್ಯ ಅವರನ್ನು ಅಲುಗಾಡಿಸುವುದಿಲ್ಲ. ಇಂಥ ಕುತಂತ್ರಗಳಿಗೆ ನಾವು ಬಲಿಯಾಗಬಾರದು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಕೈ ಬಲ ಪಡಿಸಲು ಈ ಉಪ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಚನ್ನಪಟ್ಟಣದಲ್ಲಿ ನಮ್ಮ ಅಭ್ಯರ್ಥಿಗೆ ಜಯ ಖಚಿತ. ಯೋಗೇಶ್ವರ್‌ ನನ್ನ ಸ್ನೇಹಿತರು, ನೇರ ಮಾತಿನ ವ್ಯಕ್ತಿ, ಬಿಜೆಪಿಯವರಿಂದ ಮೋಸ ಹೋಗಿ ನಮ್ಮ ಪಕ್ಷಕ್ಕೆ ವಾಪಸ್‌ ಬಂದಿದ್ದಾರೆ. ಕಾಂಗ್ರೆಸ್‌ ಇಲ್ಲಿ ಗೆದ್ದರೆ ರಾಜ್ಯಕ್ಕೆ ಮಾತ್ರವಲ್ಲ ಇಡೀ ರಾಷ್ಟ್ರಕ್ಕೆ ಒಳಿತಾಗುವುದು,”ಎಂದು ತಿಳಿಸಿದರು.

ಕರ್ನಾಟಕದ ಆರ್ಥಿಕ ಮಾದರಿ ಯಶಸ್ವಿಯಾಗಿದೆ

“ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ನಾವು ಆರ್ಥಿಕವಾಗಿ ದಿವಾಳಿಯಾಗುತ್ತೇವೆ ಎಂಬ ಪ್ರತಿಪಕ್ಷಗಳ ದುರಾಲೋಚನೆ ಸುಳ್ಳಾಗಿದೆ. ಕರ್ನಾಟಕ ಆರ್ಥಿಕವಾಗಿ ಸದೃಢವಾಗಿದೆ. ಇತ್ತೀಚಿನ ವರದಿಯಿಂದ ಅದು ಸಾಬೀತು ಆಗಿದೆ. ಪ್ರಸ್ತುತ ಹಣಕಾಸು ಸಾಲಿನ ಆರಂಭಿಕ ಏಳು ತಿಂಗಳ ಅವಧಿಯಲ್ಲಿ ಕರ್ನಾಟಕವು ಗಣನೀಯ ಆರ್ಥಿಕ ಪ್ರಗತಿ ಸಾಧಿಸಿದ್ದು, 1,03,683 ಕೋಟಿ ರೂ. ಆದಾಯ ಸಂಗ್ರಹ ಮಾಡಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ಹಲವು ಜನಪರ ಯೋಜನೆಗಳು ಹಾಗೂ ಅಭಿವೃದ್ಧಿಯ ಫಲ ಎಲ್ಲವರ್ಗಗಳಿಗೂ ತಲುಪಿರುವುದನ್ನು ಇದು ಖಾತರಿಪಡಿಸಿದೆ. ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಪ್ರಗತಿಯನ್ನು ಒಂದುಗೂಡಿಸುವ ‘ಕರ್ನಾಟಕದ ಆರ್ಥಿಕ ಮಾದರಿ’ಯ ಯಶಸ್ಸನ್ನು ಸಾಬೀತುಪಡಿಸುತ್ತದೆ,”ಎಂದು ಹೇಳಿದರು.

Tags: BJPChannapattana By ElectionCongress PartyCP YogeshwarK J Georgesiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉತ್ತಮ ಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತದೆ ಕನ್ನಡಿಗರ ಮನಸ್ಸು .

Next Post

‘ವಕ್ಫ್ ಬೋರ್ಡ್ ಅಂದ್ರೆ, ಸಾಬ್ರು ಬೋರ್ಡ್’:ವಕ್ಫ್​ ಕಾನೂನಿನ ವಿರುದ್ದ ಕಿಡಿಕಾರಿದ ಆರ್​​. ಅಶೋಕ್​

Related Posts

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
0

ಅಕ್ಕ ಸತ್ತರೆ ಅಮಾಸೆ ನಿಲ್ಲಲ್ಲ ಎಂಬ ನುಡಿಯೂ ಇದೆ.ಇಂದಿನದು ಇಂದಿಗೆ, ನಾಳಿನದು ನಾಳೆಗೆ ಎಂಬುದು ನಿಮ್ಮ ನಿಮ್ಮ ದೃಷ್ಟಿಕೋನಕ್ಕೆ ನಿಲುಕಿದ್ದು;ನಿಮಿಷದಲ್ಲಿ ಬದುಕುವವನಿಗೆ ನಾಳೆ ಹಗಲು ಇದೆ.ನಿಜದಲ್ಲಿ ಜೀವಿಸುವವನಿಗೆ...

Read moreDetails
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post

'ವಕ್ಫ್ ಬೋರ್ಡ್ ಅಂದ್ರೆ, ಸಾಬ್ರು ಬೋರ್ಡ್':ವಕ್ಫ್​ ಕಾನೂನಿನ ವಿರುದ್ದ ಕಿಡಿಕಾರಿದ ಆರ್​​. ಅಶೋಕ್​

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!