ಜೆಡಿಎಸ್ ನ ರಾಜ್ಯ ಅಧ್ಯಕ್ಷರನ್ನು ಉಚ್ಚಾಟನೆ ಬೆನ್ನಲ್ಲೇ ಹಂಗಾಮಿ ಅಧ್ಯಕ್ಷರಾಗಿ ಎಚ್ ಡಿ ಕುಮಾರಸ್ವಾಮಿ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ, ಯಾವ ಆಧಾರದ ಮೇಲೆ ಹಂಗಾಮಿ ಅಧ್ಯಕ್ಷರು ಅಂತಾ ಮಾಡಿದ್ದೀರಿ ಎಂದು ಸಿಎಂ ಇಬ್ರಾಹಿಂ ವಾಗ್ಧಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ಅವರು, ದೇವರು ಮತ್ತು ಜನ ನನ್ನ ಕೈಹಿಡಿಯುತ್ತಾರೆ. ಎಲ್ಲವನ್ನೂ ಹೊರಗೆ ತಂದರೆ ಒಳ್ಳೆಯದಲ್ಲ, ವಿಸರ್ಜನೆ ತಪ್ಪು. ಆದೇಶ ವಾಪಸ್ ಪಡೆದು ಪಕ್ಷದ ಸಭೆ ಕರೆಯಿರಿ. ಇಷ್ಟು ದೊಡ್ಡ ವಯಸ್ಸಿನಲ್ಲಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಯಾವ ಆಧಾರದಲ್ಲಿ ಹಂಗಾಮಿ ಅಧ್ಯಕ್ಷ ಮಾಡಿದ್ದೀರಿ? ನಾನು ಹಾಸನ, ಮಂಡ್ಯ, ಹೊಳೆನರಸೀಪುರಕ್ಕೆ ಹೋಗಿ ಸಭೆ ಮಾಡುತ್ತೇನೆ ಎಂದು ಸಿಎಂ ಇಬ್ರಾಹಿಂ ಹೇಳಿದರು.






