ಛತ್ತೀಸ್ ಘಡ: ಬಲೋಡಾ ಬಜಾರ್ – ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಟ್ರಕ್ ಹಾಗೂ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಬಲೋಡಾಬಜಾರ್’ನ ಅರ್ಜುನಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ವೇಗವಾಗಿ ಬಂದ ಟ್ರಕ್ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಸಿಮ್ಗಾ ಪ್ರದೇಶದ ಖಿಲೋರಾ ಗ್ರಾಮದ ನಿವಾಸಿಗಳಾದ ಸಂತ್ರಸ್ತರು ಅರ್ಜುನಿ ಪ್ರದೇಶದಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.