ತಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸಾಫ್ಟ್’ವೇರ್ ಟೆಕ್ಕಿ ಜೋಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಮೃತರನ್ನು ಅರಸಿಕೆರೆ ಮೂಲದ ರಘು(35) ಮತ್ತು ತಿಗಳನಹಳ್ಳಿ ಮೂಲದ ಅನುಷಾ(28 ) ಎಂದು ಗುರುತಿಸಲಾಗಿದೆ.

ರಘು ಮತ್ತು ಅನುಷಾ ದಂಪತಿ ಇಬ್ಬರೂ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಸಾಫ್ಟ್ ವೇರ್ ಎಂಜಿನಿಯರ್’ಗಳಾಗಿದ್ದು ಸಂಬಂಧಿಕರ ಮದುವೆಗೆಂದು ಬಳ್ಳಾರಿ ಕಡೆಗೆ ತೆರಳುತ್ತಿದ್ದಾಗ ಹುಳಿಯಾರ್ ಗೇಟ್ ಬಳಿ ಅಪಘಾತ ಸಂಭವಿಸಿದೆ.
ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






