• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯ: ವ್ಯಕ್ತಿಯ ಭೀಕರ ಹತ್ಯೆ- ಮೃತದೇಹ ತುಂಡರಿಸಿ ನಾಲೆಗೆ ಎಸೆದ ಹಂತಕರು

ಪ್ರತಿಧ್ವನಿ by ಪ್ರತಿಧ್ವನಿ
February 23, 2023
in Top Story, ಇದೀಗ
0
ಮಂಡ್ಯ: ವ್ಯಕ್ತಿಯ ಭೀಕರ ಹತ್ಯೆ- ಮೃತದೇಹ ತುಂಡರಿಸಿ ನಾಲೆಗೆ ಎಸೆದ ಹಂತಕರು
Share on WhatsAppShare on FacebookShare on Telegram

ಮಂಡ್ಯ: ದೇಶಾದ್ಯಂತ ಸದ್ದು ಮಾಡಿದ್ದ ದೆಹಲಿಯ ಶ್ರದ್ಧಾ ವಾಕರ್​ ಹತ್ಯೆ ಪ್ರಕರಣ ದೇಶಾದ್ಯಂತ ಚರ್ಚೆ ಆಗಿತ್ತು. ಸಕ್ಕರೆ ನಾಡಿನಲ್ಲೂ ಇದೇ ರೀತಿಯ ಘಟನೆ ನಡೆದಿರುವುದು ಮಂಡ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ.

ADVERTISEMENT

ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಹಂತಕರು ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ನಾಲೆಗೆ ಎಸೆದಿರುವ ಭೀಕರ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಸಿ.ನಾಲೆಯಲ್ಲಿ ಮೃತದೇಹದ ತುಂಡುಗಳನ್ನು ಎಸೆದಿದ್ದು, ತಾಲೂಕಿನ ಹೊಡಾಘಟ್ಟ, ಶಿವಾರ, ಡಣಾಯಕನಪುರ ಹಾಗೂ ಮದ್ದೂರು ತಾಲೂಕಿನ ಗೂಳೂರಿನಲ್ಲಿ ಮೃತದೇಹದ ಭಾಗಗಳು ದೊರೆತಿವೆ.

ದೇಹದ ಅಂಗಾಂಗಗಳ ಆಧಾರ ಹಿನ್ನೆಲೆಯಲ್ಲಿ 30 ರಿಂದ 40 ವರ್ಷದ ಆಸುಪಾಸಿನ ಪುರುಷ ವ್ಯಕ್ತಿ ಇರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ.

ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆಗೈದು ಈ ನಾಲೆಗೆ ಎಸೆದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಹೊಡಾಘಟ್ಟ ಬಳಿ ಮೃತ ವ್ಯಕ್ತಿಯ ತೊಡೆ ಮತ್ತು ಸೊಂಟದ ಭಾಗ ಪತ್ತೆಯಾದರೆ, ಶಿವಾರದ ಸಮೀಪ ಒಂದು ಕಾಲು ಪತ್ತೆಯಾಗಿದೆ. ಡಣಾಯಕನಪುರ ಬಳಿ ಎರಡು ಕೈ, ಒಂದು ಕಾಲು ಕಂಡು ಬಂದರೆ, ಗೂಳೂರು ಬಳಿ ತಲೆಯ ಭಾಗ ಪತ್ತೆಯಾಗಿದೆ.

ಮೃತ ವ್ಯಕ್ತಿಯ ಎಡಗೈ ಮೇಲೆ ಕಾವ್ಯ, ರಘು ಎಂದು ಹಚ್ಚೆ ಕಂಡು ಬಂದಿದ್ದು ಬಲಗೈಯಲ್ಲಿ ವನಜಾ ಎಂದು ಹಚ್ಚೆ ಗುರುತು ಇದೆ.

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಕೆಎಂ ದೊಡ್ಡಿಯ ಕೆರಗೂಡು ಪೊಲೀಸರು ಮೃತದೇಹ ಸಂಗ್ರಹಿಸಿ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಮಂಡ್ಯ ಎಸ್​ಪಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸ್​ಪಿ ಎನ್.ಯತೀಶ್, ತನಿಖೆಗೆ ಪ್ರತ್ಯೇಕ ತಂಡ ರಚನೆಯ ಬಗ್ಗೆ ಚಿಂತನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ಮುಂದಾಗಿರುವ ಪೊಲೀಸರು ಸಮೀಪದ ಪೊಲೀಸ್ ಠಾಣೆಗಳಿಂದ ನಾಪತ್ತೆ ಪ್ರಕರಣಗಳ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

Tags: Mandyamurder
Previous Post

ನಿರುದ್ಯೋಗ ಬಿಕ್ಕಟ್ಟು: 6 ಸಾವಿರ ಹುದ್ದೆಗೆ 12 ಲಕ್ಷಕ್ಕೂ ಅಧಿಕ ಅರ್ಜಿ.!

Next Post

ಕೋವಿಡ್‌ ಭಯಕ್ಕೆ ಮೂರು ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿ ಕಳೆದ ತಾಯಿ.!

Related Posts

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !
Top Story

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

by ಪ್ರತಿಧ್ವನಿ
May 15, 2026
0

ಬೆಂಗಳೂರು : ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಕೋವಿಡ್‌ ಭಯಕ್ಕೆ ಮೂರು ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿ ಕಳೆದ ತಾಯಿ.!

ಕೋವಿಡ್‌ ಭಯಕ್ಕೆ ಮೂರು ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿ ಕಳೆದ ತಾಯಿ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!