ಜಮ್ಮುಕಾಶ್ಮೀರದ (Jammu & kashmir) ಶ್ರೀನಗರ ಬಳಿ ಮತ್ತೊಂದು ಉಗ್ರ ದಾಳಿ ನಡೆದಿದ್ದು, ಗ್ರೆನೇಡ್ ಸ್ಫೋಟದಿಂದಾಗಿ (Grened blast) ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ. ಇಲ್ಲಿ ವಾರಕ್ಕೊಮ್ಮೆ ನಡೆಯುವ ಸಂಡೇ ಮಾರ್ಕೆಟ್ಗೆ ಭಾರಿ ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಇದನ್ನೇ ಟಾರ್ಗೆಟ್ ಮಾಡಿಕೊಂಡು ಈ ಸ್ಫೋಟ ನಡೆಸಲಾಗಿದೆ.
ಈ ಸಂಡೆ ಮಾರ್ಕೆಟ್ (Sunday market) ನಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದ ವೇಳೆ ಮಾರುಕಟ್ಟೆ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡ ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಉಗ್ರರ ದಾಳಿಯನ್ನಿ ಜಮ್ಮು ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲ (Omar abdullah) ಖಂಡಿಸಿದ್ದಾರೆ. ಉಗ್ರರ ದಾಳಿಯ ಬೆನ್ನಲ್ಲೇ ಶ್ರೀನಗರದಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ಪ್ರತಿಯೊಂದು ವಾಹನಗಳನ್ನು ಪರಿಶೀಲಿಸಲಾಗುತ್ತಿದೆ.