ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಶ್ಮೀರದಲ್ಲಿನ ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
April 23, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ಶೋಧ
0
Share on WhatsAppShare on FacebookShare on Telegram

ಇಂತಹ ಉಗ್ರ ಸಂಘಟನೆಗಳನ್ನು ಸದೆಬಡಿಯಬೇಕು, ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆಯಲಿ, ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ, ರಾಜಕೀಯ ಮಾಡುವುದಿಲ್ಲ.

ADVERTISEMENT

“ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. “ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ (Minister Santhosh Lad) ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ” ಎಂದು ತಿಳಿಸಿದರು..

“ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು” ಎಂದು ಹೇಳಿದರು.

“ಈ ಘಟನೆ ವಿದೇಶಾಂಗ ನೀತಿಯಿಂದ ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದು, ಮೃತರ ಕುಟುಂಬದವರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ” ಎಂದರು.

“ಧರ್ಮದ ಆಧಾರದ ಮೇಲೆ ಹತ್ಯೆ ಮಾಡಿರುವ ದಾಳಿಯನ್ನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ನಮ್ಮ ಸಮಾಜ ಎತ್ತ ಸಾಗುತ್ತಿದೆ ಎಂದು ಆಘಾತವಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.

ಗುಪ್ತಚರ ಇಲಾಖೆ ವೈಫಲ್ಯ ಇದೆ ಎಂದು ಭಾವಿಸುತ್ತೀರಾ ಎಂದು ಕೇಳಿದಾಗ, “ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಈ ವಿಚಾರವನ್ನು ಚರ್ಚಿಸಬೇಕು. ದೇಶವನ್ನು ರಕ್ಷಣೆ ಮಾಡುವುದು ನಮ್ಮ ಮೊದಲ ಆದ್ಯತೆ” ಎಂದು ತಿಳಿಸಿದರು.

Tags: Amith ShaBJPCentral GovtCentral InteligenceDK ShivakumarIndiaJammu & KashmirKarnatakaMallikarjun KhargeNarendra ModiPahalgamPM Modisanthosh ladShivamoggasiddaramaiahterrorist
Previous Post

ಉಗ್ರರನ್ನು ಸದೆ ಬಡಿಯುವ ಕೆಲಸವನ್ನು ಕೇಂದ್ರ ಮಾಡಬೇಕು..

Next Post

ಮಾಧ್ಯಮ ಹಾಗೂ ಪ್ರೇಕ್ಷಕರು ತೋರಿದ ಒಲವು ಅದುವೆ “ಯುದ್ದಕಾಂಡ”ದ ಗೆಲುವು ಅಜಯ್ ರಾವ್…!!

Related Posts

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
0

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕೆ‌ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.ಕಾಶ್ಮೀರದ ಪಹಲ್ಗಾಮ್'ನಲ್ಲಿ (Pahalgam terror attack) ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ...

Read moreDetails
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

May 16, 2025
Next Post

ಮಾಧ್ಯಮ ಹಾಗೂ ಪ್ರೇಕ್ಷಕರು ತೋರಿದ ಒಲವು ಅದುವೆ "ಯುದ್ದಕಾಂಡ"ದ ಗೆಲುವು ಅಜಯ್ ರಾವ್...!!

Please login to join discussion

Recent News

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Top Story

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

by ಪ್ರತಿಧ್ವನಿ
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!