ಶ್ರೀನಗರ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವ ಘಟನೆ ನಡೆದಿದ್ದು, 10 ಜನ ಬಲಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ (Jammu Kashmir) ರಿಯಾಸಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಯಾತ್ರಾರ್ಥಿಗಳಿದ್ದ ಬಸ್ ಶಿವಖೋಡಾದಿಂದ ಕತ್ರಾಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ (Terrorists Attack) ನಡೆಸಿದ್ದಾರೆ.
ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿರುವ ಭಯೋತ್ಪಾದಕರ ಗುಂಪು ಗುಂಡಿನ ದಾಳಿ ನಡೆಸಿದೆ. ಕೂಡಲೇ ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ.