• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂಘ ಪರಿವಾರಕ್ಕೆ ಸೇರಿದ ತಿಳಿಗೇಡಿಯಿಂದ ಪಠ್ಯಪರಿಷ್ಕರಣೆ : ರೋಹಿತ್ ಚಕ್ರತೀರ್ಥಗೆ ಸಿದ್ಧರಾಮಯ್ಯ ಫುಲ್‌ ಕ್ಲಾಸ್!

Any Mind by Any Mind
May 18, 2022
in ಕರ್ನಾಟಕ
0
ಸಂಘ ಪರಿವಾರಕ್ಕೆ ಸೇರಿದ ತಿಳಿಗೇಡಿಯಿಂದ ಪಠ್ಯಪರಿಷ್ಕರಣೆ : ರೋಹಿತ್ ಚಕ್ರತೀರ್ಥಗೆ ಸಿದ್ಧರಾಮಯ್ಯ ಫುಲ್‌ ಕ್ಲಾಸ್!
Share on WhatsAppShare on FacebookShare on Telegram

ರಾಜ್ಯದಲ್ಲಿ ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಸಾಹಿತಿಗಳು, ಚಿಂತಕರು ಮತ್ತು ಶಿಕ್ಷಣ ತಜ್ಞರಿರುವಾಗ ಸಂಘ ಪರಿವಾರಕ್ಕೆ ಸೇರಿದ ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ ಮಾಡಿಸಿರುವುದು ರಾಜ್ಯದ ಜನತೆಗೆ ಮಾಡಿರುವ ಅವಮಾನ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

ADVERTISEMENT

ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿ,  ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಕೇಳಿ ಬರುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿದು ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಪಡಿಸುತ್ತೇನೆ.

ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳೇ ನಿಜವೆಂದಾದರೆ ಇದು ಅಕ್ಷಮ್ಯ ಅಪರಾಧ. ಈ ಹಿನ್ನೆಲೆಯಲ್ಲಿ ಅನಗತ್ಯ ಊಹಾಪೋಹ ಮತ್ತು ಸಂಘರ್ಷಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿಗಳೇ ಖುದ್ದಾಗಿ ಸ್ಪಷ್ಟೀಕರಣನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಸಾಹಿತಿಗಳು, ಚಿಂತಕರು ಮತ್ತು ಶಿಕ್ಷಣ ತಜ್ಞರಿರುವಾಗ ಸಂಘ ಪರಿವಾರಕ್ಕೆ ಸೇರಿದ ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ ಮಾಡಿಸಿರುವುದು ರಾಜ್ಯದ ಜನತೆಗೆ ಮಾಡಿರುವ ಅವಮಾನ ಎಂದಿದ್ಧಾರೆ.

ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯಂತಹ ಗಂಭೀರ ಕಾರ್ಯವನ್ನು ನಾಡಿನ ಹಿರಿಯ ಲೇಖಕರು, ಸಮಾಜ ಸುಧಾರಕರನ್ನು ಅವಹೇಳನ ಮಾಡುತ್ತಾ ಬಂದಿರುವ ಅನರ್ಹ, ಪೂರ್ವಗ್ರಹ ಪೀಡಿತ ವ್ಯಕ್ತಿಯಿಂದ ಮಾಡಿಸಿರುವುದೇ ನಾಡು-ನುಡಿಗೆ ಬಗೆದಿರುವದ್ರೋಹ.

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ನೀಡಿರುವ ಕರಡನ್ನು ತಕ್ಷಣ  ವಾಪಸು ಪಡೆದು ಸಮಿತಿಯನ್ನು ಬರ್ಖಾಸ್ತುಗೊಳಿಸಬೇಕು ಮತ್ತು ನಾಡಿನ ಚಿಂತಕರು ಮತ್ತು ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಿ ಹೊಸ ಸಮಿತಿಯನ್ನು ರಚಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ.

ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿ ಅದಕ್ಕೆ ಇರುವ ಪಾವಿತ್ರ್ಯವನ್ನು ಹಾಳುಗೆಡಹಿದ ಬಿಜೆಪಿ ಈಗ ಎಳೆಯ ಮಕ್ಕಳ ಬುದ್ದಿಕೆಡಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ರಾಜಕೀಯದ ಅಖಾಡ ಮಾಡಲು ಹೊರಟಿರುವುದು ಖಂಡನೀಯ. ನಾಡಿನ ಪ್ರಜ್ಞಾವಂತರೆಲ್ಲರೂ ಇದರ ವಿರುದ್ಧ ದನಿ ಎತ್ತಬೇಕಾಗಿದೆ.

ರಾಜಕೀಯ ಪಕ್ಷಗಳಿಗೆ ತಮಗೆ ಸರಿಕಂಡ ವ್ಯಕ್ತಿಗಳನ್ನು ಆರಾಧಿಸುವ, ಅವರ ಚಿಂತನೆಗಳನ್ನು ಪ್ರಚಾರಮಾಡುವ ಅಧಿಕಾರವಿದೆ, ಆದರೆ ಶಿಕ್ಷಣ ಕ್ಷೇತ್ರವನ್ನು ಸ್ವಾರ್ಥ ರಾಜಕೀಯದ ರಾಡಿಯಿಂದ ಮಲಿನಗೊಳಿಸ ಬಾರದು. ಬುದ್ದ, ಬಸವಣ್ಣ, ಅಂಬೇಡ್ಕರ್, ನಾರಾಯಣ ಗುರುಗಳು ಜಾತಿ,ಧರ್ಮ, ಪಕ್ಷ, ಪಂಥಗಳನ್ನು ಮೀರಿದ ಚೇತನಗಳು. ಇವರನ್ನು ಸ್ವಾರ್ಥ ರಾಜಕೀಯಕ್ಕೆ ದುರ್ಬಳಕೆ ಮಾಡಬಾರದು. ರಾಜಕೀಯ ದುರುದ್ದೇಶದಿಂದ ಮಾಡುವ ಈ ರೀತಿಯ ಅವಮಾನವನ್ನು ಸಹಿಸಲಾಗದು ಎಂದು ಕಿಡಿಕಾರಿದ್ದಾರೆ.

ಹೆಡಗೆವಾರ್, ಗೋಲ್ವಾಲ್ಕರ್, ಗೋಡ್ಸೆ ಮೊದಲಾದವರನ್ನು ತಮ್ಮ ಪಕ್ಷದ ವೇದಿಕೆಯಲ್ಲಿ ಮೆರೆದಾಡಿಸಲಿ, ಇವರ ಚಿತ್ರಗಳನ್ನೇ ಪ್ರದರ್ಶಿಸಿ ಚುನಾವಣೆಗಳಲ್ಲಿ ಮತಕೇಳಲಿ, ಪ್ರಜ್ಞಾವಂತ ಜನರು ತಪ್ಪು-ಸರಿಗಳನ್ನು ನಿರ್ಧರಿಸುತ್ತಾರೆ. ಶಿಕ್ಷಣ ಕ್ಷೇತ್ರವನ್ನು ರಾಜಕೀಯ ಸ್ವಾರ್ಥಕ್ಕಾಗಿ ಬಲಿಕೊಡಬೇಡಿ ಎಂದು ಆಗ್ರಹಿಸಿದ್ಧಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿರೋಹಿತ್ ಚಕ್ರತೀರ್ಥಸಿದ್ದರಾಮಯ್ಯ
Previous Post

ವರುಣ ಕಹಳೆಗೆ ರಾಜಧಾನಿಯಲ್ಲಿ ನೆರೆ : ರಣ ಮಳೆಗೆ ಜೀವ ತೆತ್ತ ಕೂಲಿ ಕಾರ್ಮಿಕರು!

Next Post

ಕ್ರಿಶ್ಚಿಯನ್ ಮತಾಂತರ ಕ್ಯಾನ್ಸರ್ ಹರಡುತ್ತಿದೆ : ಪ್ರಮೋದ್ ಮುತಾಲಿಕ್

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಕ್ರಿಶ್ಚಿಯನ್ ಮತಾಂತರ ಕ್ಯಾನ್ಸರ್ ಹರಡುತ್ತಿದೆ : ಪ್ರಮೋದ್ ಮುತಾಲಿಕ್

ಕ್ರಿಶ್ಚಿಯನ್ ಮತಾಂತರ ಕ್ಯಾನ್ಸರ್ ಹರಡುತ್ತಿದೆ : ಪ್ರಮೋದ್ ಮುತಾಲಿಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada